
ಮುಂಬೈ(ಡಿ.15): ವೀರ್ ಸಾವರ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ರಾಹುಲ್, ದೇಶದ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ರಂಜಿತ್ ಸಾವರ್ಕರ್ ಗುಡುಗಿದ್ದಾರೆ.
‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ’!
ರಾಹುಲ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯೋಧರನ್ನು ಗೌರವಿಸುವುದನ್ನು ಕಲಿಯಬೇಕು ಎಂದು ರಂಜಿತ್ ಸಾವರ್ಕರ್ ಆಗ್ರಹಿಸಿದ್ದಾರೆ.
ಇದೇ ವೇಳೆ ಶಿವಸೇನೆ ವಿರುದ್ಧವೂ ಗುಡುಗಿರುವ ರಂಜಿತ್ ಸಾವರ್ಕರ್, ಅಧಿಕಾರಕ್ಕಾಗಿ ಉದ್ಧವ್ ಠಾಕ್ರೆ ಹಿಂದುತ್ವ ಸಿದ್ಧಾಂತಕ್ಕೆ ತೀಲಾಂಜಲಿ ಇಟ್ಟಿದ್ದಾರೆ ಎಂದು ಹರಿಹಾಯ್ದರು.
ವೀರ್ ಸಾವರ್ಕರ್ ಬಗ್ಗೆ ಉದ್ಧವ್ ಠಾಕ್ರೆಗೆ ಎಳ್ಳಷ್ಟೂ ಗೌರವ ಇದ್ದರೆ ಈ ಕೂಡಲೇ ಸಂಪುಟದಿಂದ ಕಾಂಗ್ರೆಸ್ ಸಚಿವರನ್ನು ವಜಾಗೊಳಿಸಬೇಕು ಎಂದು ರಂಜಿತ್ ಸಾವರ್ಕರ್ ಆಗ್ರಹಿಸಿದ್ದಾರೆ.
ಸಾವರ್ಕರ್ ಬಗ್ಗೆ ಮಾತಾಡಿದ್ರೆ ಹುಷಾರ್: ಕಾಂಗ್ರೆಸ್’ಗೆ ಎಚ್ಚರಿಸಿದ ಶಿವಸೇನೆ!
ಈ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆ ಚರ್ಚಿಸಿ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರಂಜಿತ್ ಸಾವರ್ಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ