ಅಡ್ವಾಣಿಗೆ ಮತ್ತೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Published : Jul 04, 2024, 07:00 AM IST
ಅಡ್ವಾಣಿಗೆ ಮತ್ತೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಸಾರಾಂಶ

ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮಾರನೇ ದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಡ್ವಾಣಿ ಅವರಲ್ಲಿ ಮರಳಿ ಅನಾರೋಗ್ಯ ಕಾಣಿಸಿಕೊಂಡಿದೆ.

ನವದೆಹಲಿ(ಜು.04):  ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ (98) ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ಇಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮಾರನೇ ದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಡ್ವಾಣಿ ಅವರಲ್ಲಿ ಮರಳಿ ಅನಾರೋಗ್ಯ ಕಾಣಿಸಿಕೊಂಡಿದೆ.

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯದಲ್ಲಿ ದಿಢೀ‌ರ್ ಏರುಪೇರು: ಆಸ್ಪತ್ರೆಗೆ ದಾಖಲು

ಸದ್ಯ ಅಡ್ವಾಣಿ ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ನಿಗಾ ಇಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

3 ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ, ಒಮ್ಮೆ ಕೇಂದ್ರ ಗೃಹ ಸಚಿವರಾಗಿ, ಒಮ್ಮೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಹಿರಿಮೆ ಹೊಂದಿರುವ ಅಡ್ವಾಣಿ ಅವರು, ಸಲ್ಲಿಸಿರುವ ದೇಶಸೇವೆ ಪರಿಗಣಿಸಿ ಅವರಿಗೆ ಕೆಲ ಸಮಯದ ಹಿಂದಷ್ಟೇ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರರ ರತ್ನ’ ಪ್ರಕಟಿಸಲಾಗಿತ್ತು. ಆದರೆ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ವಯೋಸಹಯ ಕಾರಣಗಳಿಂದ ಬರಲಾಗದ ಹಿನ್ನೆಲೆಯಲ್ಲಿ ಸ್ವತಃ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಡ್ವಾಣಿ ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರಧಾನ ಮಾಡಿ ಬಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ