* ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ
* ಮಂಗಳೂರಿನ ಯೆನೇಪೋಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಆಸ್ಕರ್
* ಕಳೆದ ಹಲವು ದಿನಗಳಿಂದ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್
ಮಂಗಳೂರು(ಸೆ.13): ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್(80) ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಯೆನೇಪೋಯಾ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
undefined
ಯೋಗಾಸನದ ವೇಳೆ ಜಾರಿ ಬಿದ್ದಿದ್ದ ನಾಯಕ
ಕಳೆದೊಂದು ತಿಂಗಳ ಜು.18ರಂದು ಹಿಂದೆ ಮನೆಯಲ್ಲಿ ಯೋಗಾಸನ ಮಾಡುತ್ತಿದ್ದ ವೇಳೆ ಆಸ್ಕರ್ ಫೆರ್ನಾಂಡಿಸ್ ಜಾರಿ ಬಿದ್ದಿದ್ದರು. ಈ ವೆಳೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಅದನ್ನವರು ನಿರ್ಲಕ್ಷಿಸಿದ್ದರು. ತದ ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿತ್ತು. ಬಳಿಕ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆದಿತ್ತಾದರೂ ಆರೋಗ್ಯದಲ್ಲಿ ಚೇತರಿಕೆಯಾಗಿರಲಿಲ್ಲ.
ಇನ್ನು ಕಳೆದೆರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ದೂರವಾಣಿ ಮೂಲಕ ಫರ್ನಾಂಡಿಸ್ ಕುಟುಂಬದವರೊಂದಿಗೆ ಮಾತನಾಡಿದ್ದರು.
ರಾಷ್ಟ್ರ ರಾಜಕೀಯದಲ್ಲಿ ಮಿಂಚಿದ್ದ ಉಡುಪಿಯ ನಾಯಕ
1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರ್ಕಾರದ ಆಡಳಿತ ಅವಧಿಯಲ್ಲಿ ಆಸ್ಕರ್ ಫೆರ್ನಾಂಡಿಸ್ ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದ ಅವರು, ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.
ಫೆರ್ನಾಂಡೀಸ್ ನಿಧನಕ್ಕೆ ಕಟೀಲ್ ಸಂತಾಪ
ಇನ್ನು ಮಾಜಿ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಕರ್ ಫರ್ನಾಂಡೀಸ್ ಸರಳ ಸಜ್ಜನ ರಾಜಕಾರಣಿ ಆಗಿದ್ರು. ಕರಾವಳಿ ಭಾಗದಿಂದ ರಾಷ್ಟ್ರೀಯ ನಾಯಕರಾಗಿದ್ದ ಅವರು ಅಜಾತಶತ್ರು ಆಗಿದ್ರು. ದಕ್ಷಿಣ ಕನ್ನಡ ಉಡುಪಿ ಅಭಿವೃದ್ಧಿಯಲ್ಲಿ ಅವರ ಪಾತ್ರ ಇದೆ. ವಾಜಪೇಯಿ ಅವರ ಚತುಷ್ಪತ ಹೆದ್ದಾರಿಯನ್ನು ಆಸ್ಕರ್ ಫೆರ್ನಾಂಡಿಸ್ ಹೊಗಳಿದ್ದರು. ಯೋಗ ಸಾಧನೆ ಮಾಡಿದವರು, ನೂರಾರು ಒಳ್ಳೆಯ ಪರಂಪರೆ ಹಾಕಿ ಕೊಟ್ಟಿದ್ರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ