Breaking: ಸಿಪಿಐಎಂ ನಾಯಕ ಸೀತಾರಾಮ್‌ ಯೆಚೂರಿ ನಿಧನ!

By Santosh Naik  |  First Published Sep 12, 2024, 4:10 PM IST

ಹಿರಿಯ ಸಿಪಿಐ-ಮಾರ್ಕ್ಸಿಸ್ಟ್‌ ಪಕ್ಷದ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ (72) ಗುರುವಾರ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು.


ನವದೆಹಲಿ (ಸೆ.12): ಹಿರಿಯ ಸಿಪಿಐ-ಮಾರ್ಕ್ಸಿಸ್ಟ್‌ ಪಕ್ಷದ ನಾಯಕ  ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ನಲ್ಲಿ ಇರಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಆಕ್ಸಿಜನ್‌ ಸಪೋರ್ಟ್‌ ನೀಡಲಾಗಿತ್ತು ಎಂದು ಸಿಪಿಐ-ಎಂ ಪಕ್ಷ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು.'ಅವರು ಆಕ್ಸಿಜನ್‌ ಸಪೋರ್ಟ್‌ನಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಇದು ಈ ಸಮಯದಲ್ಲಿ ಗಂಭೀರವಾಗಿದೆ" ಎಂದು ಎರಡು ದಿನಗಳ ಹಿಂದೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿತ್ತು.  ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಪಿಐ(ಎಂ) ನಾಯಕ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ.

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರಿದಾಗ ಯೆಚೂರಿಯವರ ರಾಜಕೀಯ ಪಯಣ ಆರಂಭವಾಯಿತು. ಆ ಬಳಿಕ ರಾಜಕೀಯದ ಮೆಟ್ಟಿಲುಗಳನ್ನು ಅತ್ಯಂತ ಶೀಘ್ರವಾಗಿ ಏರಿದ್ದರು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ ಸೀತಾರಾಮ್‌ ಯೆಚೂರಿ ಬಳಿಕ, ಎಸ್‌ಎಫ್‌ಐನ ಅಖಿಲ ಭಾರತ ಅಧ್ಯಕ್ಷರಾಗಿದ್ದರು. 1984 ರಲ್ಲಿ, ಅವರು ಸಿಪಿಐ(ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದ ಅವರು ಬಳಿಕ ಶಾಶ್ವತ ಆಹ್ವಾನಿತರೆನಿಸಿಕೊಂಡಿದ್ದರು. 1992 ರ ಹೊತ್ತಿಗೆ, ಅವರು ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು, ಅವರು ಮೂರು ದಶಕಗಳ ಕಾಲ ಈ ಸ್ಥಾನವನ್ನು ಹೊಂದಿದ್ದರು.

Latest Videos

undefined

ಸಿಪಿಐ-ಎಂ ನಾಯಕ ಸೀತಾರಾಮ್‌ ಯಚೂರಿ ಸ್ಥಿತಿ ಗಂಭೀರ!

ಯೆಚೂರಿ ಅವರು 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ತಿನ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದರು. ಅವರು ಪ್ರಕಾಶ್ ಕಾರಟ್ ಅವರ ನಂತರ 2015 ರಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾದರು ಮತ್ತು 2018 ಮತ್ತು 2022 ರಲ್ಲಿ ಎರಡು ಬಾರಿ ಸ್ಥಾನಕ್ಕೆ ಮರು ಆಯ್ಕೆಯಾದರು.

BREAKING NEWS: ಸಿಪಿಐ(ಎಂ) ನಾಯಕ ಸೀತರಾಮ್ ಯೆಚೂರಿ ಏಮ್ಸ್ ಆಸ್ಪತ್ರೆಗೆ ದಾಖಲು!

Veteran CPI(M) leader Sitaram Yechury dies at 72 after prolonged illness: Party and hospital sources

— Press Trust of India (@PTI_News)
click me!