Vice President Election Result: ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಆಯ್ಕೆ, 532 ಮತಗಳ ಭರ್ಜರಿ ಗೆಲುವು

Published : Sep 09, 2025, 07:35 PM ISTUpdated : Sep 09, 2025, 07:47 PM IST
CP Radhakrishnan

ಸಾರಾಂಶ

ಉಪರಾಷ್ಟ್ರಪತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಸಂಜೆ 6 ಗಂಟೆಯಿಂದ ಮತ ಎಣಿಕೆ ಆರಂಭಗೊಂಡಿದೆ.ಇದೀಗ ಫಲಿತಾಂಶ ಘೋಷಣೆಯಾಗಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು ಕಂಡಿದ್ದಾರೆ.

ನವದೆಹಲಿ (ಸೆ.09) ಉಪರಾಷ್ಟ್ರಪತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಭಾರಿ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇಂಡಿಯಾ ಮೈತ್ರಿ ಕೂಟದ ಅಭ್ಯರ್ಥಿ ಬಿ ಸುದರ್ಶನ ರೆಡ್ಡಿ ವಿರುದ್ದ ಸಿಪಿ ರಾಧಾಕೃಷ್ಣನ್ 452 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಎನ್‌ಡಿಎ ಒಟ್ಟು ಸಂಖ್ಯಾ ಬಲ 427. ಆದರೆ ರಾಧಾಕೃಷ್ಣನ್ ಹೆಚ್ಚುವರಿಯಾಗಿ ಮತಗಳನ್ನು ಪಡೆಯುವ ಮೂಲಕ ಭಾರಿ ಗೆಲುವು ದಾಖಲಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 781 ಮತಗಳ ಪೈಕಿ 768 ಮತಗಳು ಚಲಾವಣೆಯಾಗಿದೆ. ಎನ್‌ಡಿಎ ಅಭ್ಯರ್ಥಿ ಪರವಾಗಿ 452 ಮತದಾನವಾಗಿದೆ. ಉಪರಾಷ್ಟ್ರಪತಿ ಚುನಾವಣೆಯ ಮತದಾನದಿಂದ ಬಿಜೆಡಿ ಹಾಗೂ ಬಿಆರ್‌ಎಸ್ ಮತದಾನದಿಂದ ದೂರ ಉಳಿದಿತ್ತು. ಒಟ್ಟು 13 ಸಂಸದರು ಮತದಾನದಿಂದ ದೂರ ಉಳಿದಿದಿದ್ದರು. ಎನ್‌ಡಿಎ ಅಭ್ಯರ್ಥಿ ಪರವಾಗಿ ಭಾರಿ ಅಡ್ಡಮತದಾನವಾಗಿದೆ ಎಂದು ವರದಿಗಳು ಹೇಳುತ್ತಿದೆ. 452 ಮತಗಳನ್ನು ಪಡೆಯುವ ಮೂಲಕ ರಾಧಾಕೃಷ್ಣನ್ ಭಾರಿ ಬಹುಮತದೊಂದಿಗೆ ಗೆಲುವು ದಾಖಲಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಡೀರ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಹೇಳಿದ್ದೇನು?

ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನ

ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಕಣದಲ್ಲಿ ಇಬ್ಬರು ಅಭ್ಯರ್ಥಿಗಳಿದ್ದರು. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಹಾಗೂ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ ರೆಡ್ಡಿ. ಇಂಡಿಯಾ ಒಕ್ಕೂಟದ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಪರ ಮತ ಚಲಾಯಿಸಿದ್ದಾರೆ. ಪರಿಣಾಮ ಇಂಡಿಯಾ ಒಕ್ಕೂಟಕ್ಕೆ ಭಾರಿ ಮುಖಭಂಗವಾಗಿದೆ.

767 ಮತಗಳ ಪೈಕಿ ಉಪ ರಾಷ್ಟ್ರಪತಿ ಚುನಾವಣೆ ಗೆಲುವಿಗೆ 377 ಕನಿಷ್ಥ ಮತ ಪಡೆಯಬೇಕು. ಎನ್‌ಡಿಎ ಬಳಿ 427 ಮತಗಳಿತ್ತು. ಹೀಗಾಗಿ ಗೆಲುವು ಸುಲಭವಾಗಿತ್ತು. ಆದರೆ ಮತ ಎಣಿಕೆ ಅಂತ್ಯಗೊಂಡಾಗ ಸಿಪಿ ರಾಧಾಕೃಷ್ಣನ್ 452 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆದಿತ್ತು. 6 ಗಂಟೆಯಿಂದ ಮತ ಎಣಿಕೆ ಆರಂಭಗೊಂಡಿತ್ತು. 7.30ರ ವೇಳೆಗ ಉಪರಾಷ್ಟ್ರಪತಿ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಫಲಿತಾಂಶ ಘೋಷಣೆ ಮಾಡಿದ್ದಾರೆ. ಇತ್ತ ಎನ್‌ಡಿಎ ಕೂಟ ಭರ್ಜರಿ ಗೆಲುವಿನ ಬೆನ್ನಲ್ಲೇ ಔತಣಕೂಟ ಆಯೋಜಿಸಿದೆ.

ಪಿಎಂ ಆದ್ರೂ ಬಿಜೆಪಿ ಕಾರ್ಯಕ್ರಮದಲ್ಲಿ ಮೋದಿಗೆ ಲಾಸ್ಟ್ ಬೆಂಚ್, ಫೋಟೋ ಹಂಚಿಕೊಂಡ ಸಂಸದ

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?