
ನವದೆಹಲಿ (ಸೆ.29): ಕರೋನಾ ಸೋಂಕು ಒಬ್ಬೊಬ್ಬರನ್ನಾಗಿ ಆವರಿಸಿಕೊಳ್ಳುತ್ತಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮಂಗಳವಾರ ಬೆಳಗ್ಗೆ ಕೋವಿಡ್-19 ಪರೀಕ್ಷೆಗೆ ಒಳಗಾದ ಅವರ ವರದಿ ಪಾಸಿಟಿವ್ ಬಂದಿದೆ.
ಕೊರೋನಾ ಕಂಟ್ರೋಲ್‌ಗೆ ಮಾಸ್ಟರ್ ಪ್ಲಾನ್
ಆದರೆ ನಾಯ್ಡು ಅವರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಅವರ ಆರೋಗ್ಯ ಉತ್ತಮವಾಗಿದೆ. ಅವರಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸಲಹೆ ನೀಡಲಾಗಿದೆ. ಅವರ ಹೆಂಡತಿ ಉಷಾ ನಾಯ್ಡು ಅವರ ಕೊರೋನಾ ಪರೀಕ್ಷೆ ನೆಗಟಿವ್ ಬಂದಿದ್ದರೂ, ಅವರಿಗೂ ಕೂಡ ಜಾಗೃತೆ ವಹಿಸಲು ತಿಳಿಸಲಾಗಿದೆ.
71 ವರ್ಷದ ವೆಂಕಯ್ಯ ನಾಯ್ಡು ಅವರು, ಕಳೆದ ವಾರ ನಡೆದ ಮುಂಗಾರು ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ದರು. 25ಕ್ಕೂ ಹೆಚ್ಚಿನ ಸಂಸದರು ಕೊರೋನಾ ಸೋಂಕಿಗೆ ಒಳಗಾದ ಹಿನ್ನಲೆ ಭಾಗಿಯಾಗಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ