ದೆಹಲಿ ದೇವೇಗೌಡರ ನಿವಾಸದಲ್ಲಿ ರಾಧಾಕೃಷ್ಣನ್ ಭೇಟಿ, ಮೋದಿ ಆಯ್ಕೆ ಮೆಚ್ಚಿದ ಗೌಡರು

Published : Aug 20, 2025, 06:06 PM IST
Radhakrishnan meet ex PM devegowda

ಸಾರಾಂಶ

ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ಅವರನ್ನು ದೇವೇಗೌಡರು ಭೇಟಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೋದಿ ಅವರ ನಿರ್ಧಾರ ಕೊನೆಯ ಕ್ಷಣದವರೆಗೂ ತಿಳಿಯದು ಎಂದರು. ರಾಧಾಕೃಷ್ಣನ್ ಅವರ ಸಾಮರ್ಥ್ಯ ಮತ್ತು ಸೇವೆ ಶ್ಲಾಘನೀಯ ಎಂದರು.

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಜನತಾ ದಳ (ಎಸ್) ಪಕ್ಷದ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ಅವರು ದೆಹಲಿಯ ಸಪ್ಥರ್ ಜಂಗ್ ಲೇನ್ ನಲ್ಲಿರುವ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ರಾಧಾಕೃಷ್ಣನ್ ಅವರನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬರಮಾಡಿಕೊಂಡರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸಾಥ್ ನೀಡಿದರು. ಆ ಬಳಿಕ ನವದೆಹಲಿಯಲ್ಲಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಮಾಡುವ ಶೈಲಿ ಹಾಗೂ ಇತ್ತೀಚಿನ ರಾಜ್ಯಪಾಲರ ನೇಮಕಾತಿ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನನ್ನ 10 ವರ್ಷದ ಅನುಭವದಲ್ಲಿ ಮೋದಿ ಅವರ ಮನಸ್ಸನ್ನು ಯಾರು ಪತ್ತೆಹಚ್ಚಲು ಸಾಧ್ಯವಿಲ್ಲ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕೊನೆಯ ಕ್ಷಣದ ತನಕ ಯಾರಿಗೂ ತಿಳಿಯದು. ಕೊನೆಯ ಗಳಿಗೆಯ ತನಕ ತಮ್ಮ ಗುಟ್ಟನ್ನು ಬಿಚ್ಚಿಡುವುದಿಲ್ಲ. ಈ ಬಾರಿ ಕೂಡ ಅದೇ ರೀತಿಯಲ್ಲಿ ನಡೆದುಕೊಂಡಿದ್ದಾರೆ.

ಮುಂದುವರಿದು ಮಾತನಾಡಿದ ದೇವೇಗೌಡರು, ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತ ನಿರ್ಧಾರವಾಗಿದೆ ಎಂದು ಪ್ರಶಂಸಿಸಿದರು. ಎಲ್ಲಾ ದೃಷ್ಟಿಯಿಂದಲೂ ಅವರು ಸಮರ್ಥರು, ಅರ್ಹರು ಮತ್ತು ಯೋಗ್ಯ ಅಭ್ಯರ್ಥಿ. ರಾಜ್ಯಪಾಲರಾಗಿ, ಲೆಫ್ಟಿನೆಂಟ್ ಗವರ್ನರ್ ಆಗಿ, ಲೋಕಸಭೆಯ ಹಲವು ಸಮಿತಿಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮಿತಿಗಳ ಭಾಗವಾಗಿದ್ದಾರೆ. ಜೊತೆಗೆ 24 ದೇಶಗಳಿಗೆ ಭೇಟಿ ನೀಡಿ ತಮ್ಮ ಅನುಭವವನ್ನು ವಿಸ್ತರಿಸಿಕೊಂಡಿದ್ದಾರೆ. ಜನಸಾಮಾನ್ಯರ ಮಧ್ಯದಿಂದ ಬೆಳೆಯುವ ಮೂಲಕ ತಮ್ಮ ಹಾದಿಯನ್ನು ನಿರ್ಮಿಸಿಕೊಂಡ ವ್ಯಕ್ತಿ ಅವರು. ಹೀಗಾಗಿ ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ,” ಎಂದು ಹೇಳಿದರು.

ನಾನು ಈಗ ಒಬ್ಬ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡುವ ಅವಕಾಶವನ್ನು ಹೊಂದಿದ್ದೇನೆ. ಆದರೆ ಈ ಸಂದರ್ಭದಲ್ಲಿ ಅವರು ನಮ್ಮ ಮನೆಗೆ ಭೇಟಿ ನೀಡಿದದ್ದು ನನಗೆ ದೊಡ್ಡ ಸಂತೋಷವನ್ನು ನೀಡಿದೆ. ನಮ್ಮ ಪಕ್ಷದಿಂದ ಅವರಿಗೆ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿ ದೇವೇಗೌಡರ ಈ ಹೇಳಿಕೆ, ಪ್ರಧಾನಿ ಮೋದಿ ಅವರ ನಿರ್ಧಾರಶೈಲಿಯ ಗುಪ್ತತೆಯನ್ನು ಒತ್ತಿ ಹೇಳುವುದರ ಜೊತೆಗೆ, ರಾಧಾಕೃಷ್ಣನ್ ಅವರ ಸಾಮರ್ಥ್ಯ ಹಾಗೂ ಸೇವಾಭಾವನೆಗೆ ನೀಡಿದ ಮೆಚ್ಚುಗೆಯನ್ನು ಪ್ರತಿಬಿಂಬಿಸುತ್ತದೆ. ಈ ಹೇಳಿಕೆಯ ಮೂಲಕ ಅವರು ರಾಜಕೀಯ ಪರಿಪಕ್ವತೆ ಹಾಗೂ ರಾಷ್ಟ್ರದ ಹಿತವನ್ನು ಮೊದಲಿಗಾಗಿಟ್ಟುಕೊಂಡಿರುವ ನಿಲುವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ