
ಹೈದರಾಬಾದ್: ಕರ್ನಾಟಕದ ಬೀದರ್ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ.
ಸಫಿಲ್ಗುಡದಲ್ಲಿರುವ ಕಟ್ಟಾ ಮೈಸಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪ್ರವೇಶಿಸಿದ 26 ವರ್ಷದ ಅಲ್ತಾಫ್ ಈ ಕೃತ ಎಸಗಿದಾತ. ಆತ ಮೂತ್ರ ವಿಸರ್ಜನೆ ಮಾಡುತ್ತಿದ್ದನ್ನು ಗಮನಿಸಿದ ಕೆಲವರು ಆತನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆಕ್ರೋಶಗೊಂಡು ಥಳಿಸಿದ್ದಾರೆ. ಇದರ ವಿಡಿಯೋ, ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿದ್ದು, ಬಿಎನ್‌ಎಸ್ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಹಿಂದೂಪರ ಸಂಘಟನೆಗಳು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ಆತನನ್ನು ಎನ್‌ಕೌಂಟರ್ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಜತೆಗೆ ತೆಲಂಗಾಣದಲ್ಲಿ ಆಡಳಿತರೂಢ ಕಾಂಗ್ರೆಸ್ ಹಿಂದೂಗಳ ಮೇಲಿನ ದಾಳಿಯಲ್ಲಿ ಬಾಂಗ್ಲಾ ಪಾಕಿಸ್ತಾನವನ್ನೂ ಮೀರಿಸುತ್ತಿದೆ ಎಂದು ಕಿಡಿಕಾರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ