Vijay Diwas: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಮೋದಿ ಶ್ರದ್ಧಾಂಜಲಿ!

Published : Dec 16, 2021, 11:47 AM ISTUpdated : Dec 16, 2021, 11:49 AM IST
Vijay Diwas: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಮೋದಿ ಶ್ರದ್ಧಾಂಜಲಿ!

ಸಾರಾಂಶ

* 1971ರ ಪಾಕಿಸ್ತಾನದೊಂದಿಗಿನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮೋದಿ ಶ್ರದ್ಧಾಂಜಲಿ * ಮೋದಿ ಜೊತೆ ಯೋಧರಿಗೆ ಗೌರವ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ * ಈ ಯುದ್ಧದಲ್ಲಿ ಅದಮ್ಯ ಧೈರ್ಯ ತೋರಿ ಅದ್ಭುತ ಜಯ ಸಾಧಿಸಿದ್ದ ಭಾರತೀಯ ಸೇನೆ

ಇಸ್ಲಮಾಬಾದ್(ಡಿ,16): 1971ರ ಪಾಕಿಸ್ತಾನದೊಂದಿಗಿನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಜೊತೆಗಿದ್ದರು. ಈ ಯುದ್ಧದ ಪರಿಣಾಮವಾಗಿ, ಪಾಕಿಸ್ತಾನದಿಂದ ಪ್ರತ್ಯೇಕವಾದ ಬಾಂಗ್ಲಾದೇಶದ ರೂಪದಲ್ಲಿ ಹೊಸ ರಾಷ್ಟ್ರವನ್ನು ರಚಿಸಲಾಯಿತು. ಇಂದು ಈ ಯುದ್ಧಕ್ಕೆ 50 ವರ್ಷಗಳು ಪೂರ್ಣಗೊಂಡಿವೆ. ಭಾರತ ಮತ್ತು ಬಾಂಗ್ಲಾದೇಶದಲ್ಲಿ ಈ ದಿನವನ್ನು ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಈ ಯುದ್ಧದಲ್ಲಿ ಭಾರತೀಯ ಸೇನೆ ಅದಮ್ಯ ಧೈರ್ಯ ತೋರಿ ಅದ್ಭುತ ಜಯ ಸಾಧಿಸಿತ್ತು.

ಈ ವೇಳೆ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪ್ರಧಾನಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಅಲ್ಲದೇ 'ಇಡೀ ರಾಷ್ಟ್ರದ ಪರವಾಗಿ, ನಾನು 1971 ರ ಯುದ್ಧದ ಯೋಧರಿಗೆ ನಮಸ್ಕರಿಸುತ್ತೇನೆ. ಶೌರ್ಯದ ವಿಶಿಷ್ಟ ಕಥೆಗಳನ್ನು ಬರೆದ ವೀರ ಯೋಧರ ಬಗ್ಗೆ ನಾಗರಿಕರು ಹೆಮ್ಮೆಪಡುತ್ತಾರೆ...' ಎಂದು ಬರೆದಿದ್ದಾರೆ.

ವೀರ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುತ್ತಿದ್ದೇನೆ - ಪ್ರಧಾನಿ

ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ, '50ನೇ ವಿಜಯ್ ದಿವಸ್‌ನಲ್ಲಿ ನಾನು ಸ್ವಾತಂತ್ರ್ಯ ಹೋರಾಟಗಾರರು, ವೀರ ಮಹಿಳೆಯರು ಮತ್ತು ಭಾರತೀಯ ಸಶಸ್ತ್ರ ಪಡೆಗಳ ವೀರ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ನೆನಪಿಸಿಕೊಳ್ಳುತ್ತೇನೆ. ನಾವು ಒಟ್ಟಾಗಿ ದಮನಕಾರಿ ಶಕ್ತಿಗಳ ವಿರುದ್ಧ ಹೋರಾಡಿ ಗೆದ್ದಿದ್ದೇವೆ. ಢಾಕಾದಲ್ಲಿ ರಾಷ್ಟ್ರಪತಿಜಿಯವರ ಉಪಸ್ಥಿತಿಯು ಪ್ರತಿಯೊಬ್ಬ ಭಾರತೀಯನಿಗೂ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ ಎಂದಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 50 ನೇ ವಿಜಯ್ ದಿವಸ್‌ನಲ್ಲಿ ಆಯೋಜಿಸಲಾದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ಬಾಂಗ್ಲಾದೇಶಕ್ಕೆ ತೆರಳಿದ್ದಾರೆ ಎಂಬುವುದು ಉಲ್ಲೇಖನೀಯ. 1971 ರಲ್ಲಿ ಈ ದಿನದಂದು, ಪೂರ್ವ ಪಾಕಿಸ್ತಾನದ ಮುಖ್ಯ ಮಾರ್ಷಲ್ ಲಾ ಅಡ್ಮಿನಿಸ್ಟ್ರೇಟರ್ ಮತ್ತು ಪೂರ್ವ ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ಪಾಕಿಸ್ತಾನಿ ಮಿಲಿಟರಿ ಪಡೆಗಳ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಅವರು ಬಾಂಗ್ಲಾದೇಶದ ರಚನೆಗಾಗಿ 'ಶರಣಾಗತಿಯ ಸಾಧನ'ಕ್ಕೆ ಸಹಿ ಹಾಕಿದರು.

ಢಾಕಾದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಪಡೆಗಳನ್ನು ಪ್ರತಿನಿಧಿಸುವ ಜಗಜಿತ್ ಸಿಂಗ್ ಅರೋರಾ ಅವರ ಉಪಸ್ಥಿತಿಯಲ್ಲಿ ನಿಯಾಜಿ ಇದಕ್ಕೆ ಸಹಿ ಹಾಕಿದರು. ಒಂಬತ್ತು ತಿಂಗಳ ಯುದ್ಧದ ನಂತರ 1971 ರಲ್ಲಿ ಬಾಂಗ್ಲಾದೇಶ ಅಸ್ತಿತ್ವಕ್ಕೆ ಬಂದಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಂಬೈ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಬಿಜೆಪಿ ಮೇಯರ್‌? ಕೇಸರಿ ಪಕ್ಷದ ಬಹುದೊಡ್ಡ ಕನಸು ನನಸಾಗುತ್ತಾ..
BMC Exit Poll: ಬಿಜೆಪಿ-ಶಿಂಧೆ ಸೇನೆಗೆ ಮುಂಬೈ ಅಧಿಕಾರ, ಮಣ್ಣುಮುಕ್ಕಿದ ಠಾಕ್ರೆ!