
ವಿಜಯಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಮಗನ ಸಾವಿನ ನೋವಿನಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕಳೆದ ಮಾರ್ಚ್ 22 ರಂದು ರಸ್ತೆ ಅಪಘಾತದಲ್ಲಿ ಆಕಾಶ ಹರಿಜನ ಎಂಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಮಗ ಇನ್ನು ಬದುಕಿ ಬರುವುದು ಸಾಧ್ಯವಿಲ್ಲ ಎಂದು ಅರಿತ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡುವುದಕ್ಕೆ ನಿರ್ಧರಿಸಿದರು. ಅದರಂತೆ ಆಕಾಶ್ ತಂದೆ ಮಲ್ಲಪ್ಪ ಹರಿಜನ ಹಾಗೂ ತಾಯಿ ಸುಜಾತ ಮಗನ ಅಂಗಾಂಗ ದಾನ ಮಾಡುವುದಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಬಸ್‌ನಲ್ಲಿ ಸೀಟಿಗಾಗಿ ಓಟ, ಚಕ್ರದಡಿ ಸಿಲುಕಿದ ಕಂದಮ್ಮ: ಅಮ್ಮನ ಕೈನಿಂದ ಕೆಳಗೆ ಬಿದ್ದು ದುರಂತ
ಆದರೆ ಹಠಾತ್ ರಕ್ತದೊತ್ತಡ ಕಡಿಮೆಯಾದ ಕಾರಣ ಇತರೆ ಅಂಗಾಂಗಗಳನ್ನು ದಾನ ಪಡೆಯಲು ವೈದ್ಯರಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಕೊನೆಯ ಕ್ಷಣದಲ್ಲಿ ಮಗನ ನೇತ್ರಗಳನ್ನು ದಾನ ಮಾಡುವುದಕ್ಕ ಬಾಲಕನ ತಂದೆ ತಾಯಿ ನಿರ್ಧರಿಸಿದರು. ಹೀಗಾಗಿ ವಿಜಯಪುರ ನಗರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ನೇತ್ರದಾನ ಮಾಡಲಾಯ್ತು. ಸ್ವಯಂಪ್ರೇರಿತವಾಗಿ ಪೋಷಕರು ದಾನ ಮಾಡಿದ ನೇತ್ರಗಳನ್ನು ಪಡೆದ ವೈದ್ಯರು ಅಗತ್ಯ ಇರುವವರಿಗೆ ಅವುಗಳನ್ನು ಅಳವಡಿಸಲಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿಗಳು ಬಾಲಕನ ಕುಟುಂಬಕ್ಕೆ ಧನ್ಯವಾದ ಹೇಳಿದ್ದು, ಬಾಲಕನ ಪಾರ್ಥಿವ ಶರೀರಕ್ಕೆ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು.
ಇದನ್ನೂ ಓದಿ: ಮಂಡ್ಯ ಕುರುಬರ ಸಂಘದಲ್ಲಿ ಹೈಡ್ರಾಮಾ: ಕುರುಬರ ಸಂಘದ ಜಿಲ್ಲಾಧ್ಯಕ್ಷ, ಸಿದ್ದು ಆಪ್ತನಿಗೆ ಮಸಿ ಎರಚಿ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ