JNU ಕ್ಯಾಂಪಸ್‌ಗೆ ನುಗ್ಗಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ರಕ್ತ ಸುರಿಯುವಂತೆ ಹಲ್ಲೆ

Published : Jan 05, 2020, 09:18 PM ISTUpdated : Jan 05, 2020, 09:25 PM IST
JNU ಕ್ಯಾಂಪಸ್‌ಗೆ ನುಗ್ಗಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ರಕ್ತ ಸುರಿಯುವಂತೆ ಹಲ್ಲೆ

ಸಾರಾಂಶ

ಜೆಎನ್‌ಯು ಆವರಣಕ್ಕೆ ನುಗ್ಗಿದ ದುಷ್ಕರ್ಮಿಗಳ ತಂಡ| ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ| ಸಿಎಎ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಪ್ರತೀಕಾರ?

ನವದೆಹಲಿ(ಜ. 05)  ಮುಖವಾಡ ಧರಿಸಿದ ಗುಂಪೊಂದು ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ಮಾಡಿದೆ.ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

50ಕ್ಕೂ ಅಧಿಕ ಜನರಿದ್ದ ತಂಡ ಜೆಎನ್‌ಯು ಆವರಣ ಪ್ರವೇಶ ಮಾಡಿತ್ತು ಎನ್ನಲಾಗಿದೆ. ಕ್ಯಾಂಪಸ್ ಪ್ರವೇಶ ಮಾಡಿ ಅಲ್ಲಿಂದ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಮಂಗಳೂರು ಪ್ರತಿಭಟನೆ ಯಾರ ಒಳಸಂಚು?

ಸಿಎಎ ಕುರಿತು ಜೆಎನ್ ಯು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ದುಷ್ಕರ್ಮಿಗಳ ಗುಂಪು ಈ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್