
ನವದೆಹಲಿ (ಅ.16): ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯ ಭಾನ್ಪುರ ಸರ್ಕಾರಿ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕಾಲೇಜು ಉತ್ಸವದ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ಕಿಟಕಿಯಿಂದ ಮೊಬೈಲ್‌ನಲ್ಲಿ ವೀಡಿಯೋ ಮತ್ತು ಫೋಟೋ ತೆಗೆಯುತ್ತಿದ್ದ ಮೂವರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರ ಕೃತ್ಯ ಬಯಲಾಗಿದೆ.
ಮಂಗಳವಾರ ಕಾಲೇಜಿನಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಾಗ, ಬಟ್ಟೆ ಬದಲಾಯಿಸುತ್ತಿದ್ದ ವಿದ್ಯಾರ್ಥಿನಿಯರು ಕಿಟಕಿಯಿಂದ ಫೋಟೋ ಮತ್ತು ವೀಡಿಯೊ ತೆಗೆಯುತ್ತಿರುವುದನ್ನು ಗಮನಿಸಿ ತಕ್ಷಣವೇ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಪ್ರಾಂಶುಪಾಲರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದವರು 20-22 ವರ್ಷದ ABVP ಕಾರ್ಯಕರ್ತರು ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ABVP ನಗರಾಧ್ಯಕ್ಷ 22 ವರ್ಷದ ಉಮೇಶ್ ಜೋಶಿ, 21 ವರ್ಷದ ಸಹ ಕಾಲೇಜು ಮುಖಂಡ ಅಜಯ್ ಗೌರ್ ಹಾಗೂ 20 ವರ್ಷದ ಕಾರ್ಯಕರ್ತ ಹಿಮಾಂಶು ಬೈರಾಗಿ ಎಂದು ಗುರುತಿಸಲಾಗಿದೆ. ಈ ಕೃತ್ಯ ಎಸಗಿದ್ದು 20-22 ವರ್ಷದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಎಂದು ತಿಳಿದುಬಂದಿದೆ.
ಸಿಸಿಟಿವಿ ವೀಡಿಯೊ ಮತ್ತು ಫೋಟೋಗಳ ಆಧಾರದ ಮೇಲೆ ಒಟ್ಟು 4 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಗರೋತ್ ಸಬ್ ಜೈಲಿಗೆ ಕಳುಹಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕನೇ ಆರೋಪಿ ಹರಿಸಿಂಗ್ ಬಂಜಾರ ಎಂಬಾತನಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಆದರೆ, ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳ ಮೊಬೈಲ್‌ನಲ್ಲಿ ಯಾವುದೇ ವೀಡಿಯೊಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದಾಗ, ನಾಲ್ವರು ವಿದ್ಯಾರ್ಥಿಗಳು ತಮ್ಮ ಫೋನ್ ಬಳಸಿ ಕಿಟಕಿಯ ಮೂಲಕ ಫೋಟೋ ಮತ್ತು ವೀಡಿಯೊಗಳನ್ನು ತೆಗೆದುಕೊಂಡಿದ್ದಾರೆ. ಇದನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣವೇ ಎಚ್ಚರಿಕೆ ನೀಡಿ ಪ್ರಾಂಶುಪಾಲರಿಗೆ ದೂರು ನೀಡಿದರು. ಇದರ ಬಗ್ಗೆ ತಿಳಿದ ಬಳಿಕ ಹಂಗಾಮಿ ಪ್ರಾಂಶುಪಾಲರಾದ ಡಾ. ಪ್ರೀತಿ ಪಾಂಚೋಲಿಗೆ ದೂರು ನೀಡಿದರು. ಇದಾದ ನಂತರ ಕಾಲೇಜಿನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿರುವ ವೀಡಿಯೊ ಮತ್ತು ಫೋಟೋಗಳ ಆಧಾರದ ಮೇಲೆ 4 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ