
ಗೋದ್ರಾ (ಗುಜರಾತ್), (ಜ.26): ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು.
ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಆದ್ರೆ, ಈ ಘಟನೆ ನಡೆದಿರುವುದು ಗುಜರಾತಿನಲ್ಲಿ. 8ನೇ ತರಗತಿಯ ಹುಡುಗ-ಹುಡುಗಿ ಕ್ಲಾಸ್ ರೂಮಿನಲ್ಲಿ ಒಬ್ಬರಿಗೊಬ್ಬರು ಕಿಸ್ ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಶಾಲೆಯ ಮೈದಾನದಲ್ಲೇ ಹೈಸ್ಕೂಲ್ ವಿದ್ಯಾರ್ಥಿಗಳ ಲಿಪ್ ಲಾಕ್
ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋದ್ರಾದಿಂದ 8ಕಿ.ಮೀ. ದೂರದಲ್ಲಿರುವ ಮೊರ್ವಾ ಹಡಾಫ್ ನ ಕ್ರುಶಿಕರ್ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ಕಿಸ್ಸಿಂಗ್ ಪ್ರಕರಣದ ಬಗ್ಗೆ ಶಿಕ್ಷಣ ಇಲಾಖೆಯಿಂದ ಪಂಚಮಹಲ್ ಜಿಲ್ಲಾ ಮಟ್ಟದ ಅಧಿಕಾರಿಗಳು ವರದಿ ಕೇಳಿದ್ದಾರೆ.
ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಚಮಹಲ್ ಜಿಲ್ಲಾ ಶಿಕ್ಷಣ ಅಧಿಕಾರಿ ಬಿಎಸ್ ಪಂಚಾಲ್, ಕ್ರುಶಿಕರ್ ಪ್ರೌಢ ಶಾಲೆಯ ಆಡಳಿತ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದರು.
ಮತ್ತೊಂದೆಡೆ ಈ ಬಗ್ಗೆ ಕ್ರುಶಿಕರ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಅಶ್ವಿನ್ ಪಟೇಲ್ ಮಾತನಾಡಿ, ಈ ಘಟನೆ ಸಂಬಂಧ ವಿದ್ಯಾರ್ಥಿಗಳ ಪೋಷಕರಿಗೆ ಸುದ್ದಿ ತಿಳಿಸಲಾಗಿದೆ. ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ