ವಿಶಾಖಪಟ್ಟಣದ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ: ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ

By Sathish Kumar KH  |  First Published Jul 10, 2024, 8:10 PM IST

ವಿಶಾಖಪಟ್ಟಣದ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಮಾಡಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


ನವದೆಹಲಿ (ಜು.10): ಆರ್ಥಿಕವಾಗಿ ಹಾಗೂ ಇನ್ನಿತರೆ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ವಿಶಾಖಪಟ್ಟಣದ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಮಾಡಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಗುರುವಾರ ವೈಜಾಗ್ ಸ್ಟೀಲ್ ಕಾರ್ಖಾನೆ (RNIL)ಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಬುಧವಾರ ಸಂಜೆಯೇ ವಿಶಾಖಪಟ್ಟಣಕ್ಕೆ ಆಗಮಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಗುರುವಾರ ಬೆಳಗ್ಗೆ ಕೈಗಾರಿಕಾ ಸಚಿವಾಲಯದ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಉನ್ನತ ಅಧಿಕಾರಿಗಳ ಜತೆಗೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ವೈಜಾಗ್ ಸ್ಟೀಲ್ ಕಾರ್ಖಾನೆ ಕಂಪನಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ನವದೆಹಲಿಯ  ತಮ್ಮ ಸಚಿವಾಲಯದಲ್ಲಿ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಈಗ ತಾವೇ ಖುದ್ದು ವಿಶಾಖಪಟ್ಟಣಕ್ಕೆ ಬಂದು ಉಕ್ಕು ಕಾರ್ಖಾನೆಯನ್ನು ವೀಕ್ಷಿಸುತ್ತಿದ್ದಾರೆ.

Tap to resize

Latest Videos

ಆತ್ಮನಿರ್ಭರ ಯೋಜನೆಯಡಿ ವಿಐಎಸ್‌ಎಲ್ ಕಾರ್ಖಾನೆ ಉಳಿಸಲು ಅವಕಾಶವಿದೆ; ಕೇಂದ್ರ ಸಚಿವ ಕುಮಾರಸ್ವಾಮಿ

ವಿಶಾಖಪಟ್ಟಣದ ವೈಜಾಗ್ ಸ್ಟೀಲ್ ಕಾರ್ಖಾನೆ ಆರ್ಥಿಕವಾಗಿ ಹಾಗೂ ಇನ್ನಿತರೆ ಕಾರಣಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕಂಪನಿಯನ್ನು ಮೇಲೆತ್ತುವ ಬಗ್ಗೆ ಪ್ರಯತ್ನ ನಡೆಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಹಾಯಕ ಸಚಿವ ಭೂಪತಿರಾಜು ಅವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಹಿರಿಯ ನಾಯಕಿಯಾದ ಪುರಂದೇಶ್ವರಿ ಕೂಡ ವೈಜಾಗ ಸ್ಟೀಲ್ ಕಂಪನಿಯನ್ನು ಪುನಶ್ಚೇತನಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಗೆದ್ದ ಬಳಿಕ ಮತ್ತೆ ರಾಮನಗರ ಎಂದು ನಾಮಕರಣ: ಕುಮಾರಸ್ವಾಮಿ

ಇದಾದ ಬಳಿಕ ಉಕ್ಕು ಸಚಿವಾಲಯದಲ್ಲಿ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ, ವೈಜಾಗ್ ಸ್ಟೀಲ್ ಚೇರಮನ್ ಅತುಲ್ ಭಟ್ ಸೇರಿ ಹಿರಿಯ ಅಧಿಕಾರಿಗಳ ಜತೆ ಕೈಗಾರಿಕಾ ಸಚಿವ ಕುಮಾರಸ್ವಾಮಿ ಅವರು ಸರಣಿ ಸಭೆಗಳನ್ನು ನಡೆಸಿದ್ದರು. ಜೊತೆಗೆ, ಕಳೆದ ಮಂಗಳವಾರ ಸಚಿವಾಲಯದಲ್ಲಿ ಕಂಪನಿಗೆ ಸಾಲ ನೀಡಿರುವ ಬ್ಯಾಂಕುಗಳ ಜತೆಯೂ ಮಹತ್ವದ ಸಮಾಲೋಚನೆ ನಡೆಸಿದ್ದರು. ಇನ್ನು ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಂಕಷ್ಟದಲ್ಲಿರುವ ಕೈಗಾರಿಗಳ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

click me!