ವಾಕಿಂಗ್ ಮಾಡ್ತಿದ್ದ ವಿಶ್ವ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷರ ಭೀಕರ ಕೊಲೆ!

By Suvarna News  |  First Published Feb 2, 2020, 12:53 PM IST

ವಾಕಿಂಗ್ ತೆರಳಿದ್ದ ಹಿಂದೂ ಮಹಾಸಭಾ ಅಧ್ಯಕ್ಷನ ಹತ್ಯೆ| ರಂಜಿತ್ ಬಚ್ಚನ್ ಮೇಲೆ ಗುಂಡಿನ ದಾಳಿ ನಡೆಸಿದ ಅಪರಿಚಿತರು| ಸ್ಥಳದಲ್ಲೇ ಕೊನೆಯುಸಿರೆಳೆದ ರಂಜಿತ್


ಲಕ್ನೋ[ಫೆ.02]: ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದ್ದ ಉತ್ತರ ಪ್ರದೇಶದ ವಿಶ್ವ ಹಿಂದೂ ಮಹಾಸಭಾ ಅಧ್ಯಕ್ಷ ರಂಜಿತ್ ಬಚ್ಚನ್ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಲಕ್ನೋದ ಹಜರತ್ ಗಂಜ್ ನಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ.

ರಂಜಿತ್ ಬಚ್ಚನ್ ಮುಂಜಾನೆ ವಾಕಿಂಗ್ ಗೆ ತೆರಳಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ರಂಜಿತ್ ಬಚ್ಚನ್ ತಲೆಗೆ ಗುಂಡು ಹಾರಿಸಲಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾಳಿ ವೇಳೆ ರಂಜಿತ್ ಸಹೋದರನಿಗೂ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tap to resize

Latest Videos

undefined

ಟಿಕ್‌ಟಾಕ್‌ನಲ್ಲಿ ಅಣಕಿಸುತ್ತಿದ್ದ ಪತ್ನಿಗೆ ಚಾಕುವಿನಿಂದ ಇರಿದ ಪತಿ..!

ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. 

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಲಕ್ನೋ ಕೇಂದ್ರ ವಲಯದ ಡಿಸಿಪಿ ದಿನೇಶ್ ಸಿಂಗ್ 'ಮೃತ ವ್ಯಕ್ತಿಯನ್ನು ರಂಜಿತ್ ಬಚ್ಚನ್ ಎಂದು ಗುರುತಿಸಲಾಗಿದೆ. ಮುಂಜಾಣೆ ವಾಕಿಂಗ್‌ಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೃತರಾಗಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಲಾಗಿದೆ' ಎಂದಿದ್ದಾರೆ.

ಫೆಬ್ರವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ

click me!