ವೈಜಾಕ್ ಗ್ಯಾಸ್ ದುರಂತ, ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆದ ಪ್ರಧಾನಿ!

Published : May 07, 2020, 12:50 PM ISTUpdated : May 07, 2020, 06:12 PM IST
ವೈಜಾಕ್ ಗ್ಯಾಸ್ ದುರಂತ, ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆದ ಪ್ರಧಾನಿ!

ಸಾರಾಂಶ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಷ ಅನಿಲ ಸೋರಿಕೆ ಪ್ರಕರಣ| ವಿಷಾನಿಲ ಸೋರಿಕೆಯಿಂದ ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥ| ವಿಪತ್ತು ನಿರ್ವಹಣಾ ಪ್ರಾಧಿಕಾರd ತುರ್ತು ಸಭೆ ಕರೆದ ಪ್ರಧಾನಿ!

ವಿಶಾಖಪಟ್ಟಣಂ(ಮೇ.07): ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪಿಎಂ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.

"

ಇಂದು ನಸುಕಿನ ಜಾವ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡುತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ಸೋರಿಕೆಯಾಗಿತ್ತು. ಇದರಿಂದ ಇನಬ್ಬರು ಮಕ್ಕಳು ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದರು. ಅಲ್ಲದೇ ಇನ್ನೂರಕ್ಕು ಅಧಿಕ ಮಂದಿ ಆಸ್ಪತ್ರೆ ಸೇರಿದ್ದರು. 

ಈ ಕುರಿತು ಇಂದು ಬೆಳಗ್ಗೆ ಗೃಹ ಸಚಿವಾಲಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಭಾಗಿಯಾಗಿದ್ದರು. ಸದ್ಯ ಅಲ್ಲಿನ ಪರಿಸ್ಥಿತಿಯನ್ನು ನಿಗಾ ವಹಿಸಲಾಗುತ್ತಿದೆ. ಗೃಹ ಸಚಿವ ಅಮಿತಾ ಶಾ ಕೂಡ ಘಟನೆ ತೀರಾ ದುರದೃಷ್ಟಕರ ಎಂದಿದ್ದಾರೆ.

"

ವಿಷಾನಿಲ ಸೋರಿಕೆ, 8 ಸಾವು, 200ಕ್ಕೂ ಹೆಚ್ಚು ಮಂದಿ ಗಂಭೀರ!

ಪ್ರಧಾನಿ ನೃರೇದ್ರ ಮೋದಿ ಕೂಡಾ ಈ ಸಂಬಂಧ ಟ್ವೀಟ್ ಮಾಡಿ ವಿಶಾಖಪಟ್ಟಣಂನ ಫ್ಯಾಕ್ಟರಿಯ ಸುತ್ತಮುತ್ತ ನಿವಾಸಿಗಳ ಸುರಕ್ಷತೆಗೆ ನಾನು ಈ ಸಂದರ್ಭದಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೇ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ ಹಾಗೂ ಎಲ್ಲಾ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!