ಯುಪಿಯಲ್ಲಿ ಬಿಜೆಪಿ ಹಿನ್ನಡೆಗೆ ಮತಬ್ಯಾಂಕ್‌ ವಿಭಜನೆ, ನಿರುದ್ಯೋಗ, ಪ್ರಶ್ನೆಪತ್ರಿಕೆ ಸೋರಿಕೆ ಕಾರಣ: ಆರ್‌ಎಸ್‌ಎಸ್‌ ವಿಶ್ಲೇಷಣೆ

By Kannadaprabha News  |  First Published Jun 30, 2024, 1:35 PM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್‌ ವಿಭಜನೆಯಾಗಿದ್ದೇ ಪ್ರಮುಖ ಕಾರಣ. 


ಲಖನೌ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್‌ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್‌ ವಿಶ್ಲೇಷಣೆ ಮಾಡಿದೆ.

ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಜೆಪಿಯ ಚುನಾವಣಾ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮೂರು ದಿನಗಳ ಕಾಲ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯುವಕರಲ್ಲಿ ಹೆಚ್ಚುತ್ತಿರುವ ಕೋಪವೇ ಬಿಜೆಪಿಯ ಹಿನ್ನಡೆಗೆ ಮತ್ತೊಂದು ಕಾರಣ ಎಂದು ಆರ್‌ಎಸ್‌ಎಸ್ ತಿಳಿಸಿದೆ.

Tap to resize

Latest Videos

‘ಬಿಜೆಪಿಗರು ಅಹಂಕಾರಿ’ ಹೇಳಿಕೆ ಹಿಂಪಡೆದ ಆರ್‌ಎಸ್‌ಎಸ್‌ ಮುಖಂಡ ಇಂದ್ರೇಶ್‌

ಆದ್ದರಿಂದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ ಮಾಡಲು ನಿರ್ಧರಿಸಿದೆ. ಇದು ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲೇ ಉತ್ತರಪ್ರದೇಶದ ಪ್ರಮುಖ ಪ್ರದೇಶಗಳಲ್ಲಿನ ತನ್ನ ಪ್ರಚಾರಕರನ್ನು ಸ್ಥಳಾಂತರ ಮಾಡಿ ಮರು ಸಂಘಟನೆಗೆ ಕಾರ್ಯತಂತ್ರ ರೂಪಿಸಿದೆ. ಇದರಿಂದ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಹಿಡಿತ ಸಾಧಿಸಬಹುದು.

80 ಲೋಕಸಭಾ ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 37, ಕಾಂಗ್ರೆಸ್‌ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 33 ಸ್ಥಾನಗಳಲ್ಲಿ ಮಾತ್ರ ಗೆದ್ದಿತ್ತು.

ಬಿಜೆಪಿ ಜೊತೆಗೆ ಭಿನ್ನಾಭಿಪ್ರಾಯ ನಿರಾಕರಿಸಿದ ಆರೆಸ್ಸೆಸ್‌!

click me!