ಮತದಾನ ಆರಂಭ: ದೆಹಲಿ ಅಧಿಕಾರದ ಚುಕ್ಕಾಣಿ ಯಾರಿಗೆ?, ಇಂದು ಸಂಜೆ ಸುಳಿವು

Published : Feb 05, 2025, 07:34 AM IST
ಮತದಾನ ಆರಂಭ: ದೆಹಲಿ ಅಧಿಕಾರದ ಚುಕ್ಕಾಣಿ ಯಾರಿಗೆ?, ಇಂದು ಸಂಜೆ ಸುಳಿವು

ಸಾರಾಂಶ

70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6.30 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.   

ನವದೆಹಲಿ(ಫೆ.05): ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಇಂದು(ಬುಧವಾರ) ಮತದಾನ ಆರಂಭವಾಗಿದೆ. ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್‌ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಮತ್ತು 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ. 

70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6.30 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ದಿಲ್ಲಿ ಎಲೆಕ್ಷನ್‌ಗೆ 5 ದಿನ ಬಾಕಿ ಇರುವಾಗ ಆಪ್‌ಗೆ ಶಾಕ್: 8 ಶಾಸಕರು ರಾಜೀನಾಮೆ!

ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು, ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಕುರಿತು ಅವು ಸುಳಿವು ನೀಡಲಿವೆ.

ಪ್ರಮುಖ ಅಭ್ಯರ್ಥಿಗಳು: 

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ದ ಬಿಜೆಪಿಯಿಂದ ರಮೇಶ ಬಿದೂರಿ ಕಾಂಗ್ರೆಸ್‌ನಿಂದ ಅಲ್ಕಾ ಲಂಬಾ ಕಣಕ್ಕೆ ಉಳಿದಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ, ಮೊದಲಾದ ವರು ಕಣದಲ್ಲಿದ್ದಾರೆ.

ಉಚಿತಗಳ ಸುರಿಮಳೆ: 

ದೇಶದಲ್ಲೇ ಮೊದಲ ಬಾರಿಗೆ ಉಚಿತ ವಿದ್ಯುತ್, ಉಚಿತ ಕುಡಿ ಯುವ ನೀರು ಯೋಜನೆ ಘೋಷಿಸಿ ಇತರ ಪಕ್ಷಗಳಿಗೆ ದಾರಿ ತೋರಿಸಿದ್ದ ಆಮ್‌ ಆದ್ಮಿ ಪಕ್ಷ ಈ ವರ್ಷದ ಹಳೆಯ ಗ್ಯಾರಂಟಿ ಜೊತೆಗೆ ಇನ್ನಷ್ಟು ಉಚಿತಗಳ ಘೋಷಣೆ ಮಾಡಿದೆ. ಹೀಗಾಗಿ ಅನ್ನ ದಾರಿ ಇಲ್ಲದೇ ಮತ್ತು ಕಾಂಗ್ರೆಸ್ ಕೂಡಾ ನಾನಾ ರೀತಿಯ ಗ್ಯಾರಂಟಿ ಘೋಷಿಸಿವೆ. ಬಹುತೇಕ ಮೂರೂ ಪಕ್ಷಗಳು ಕರ್ನಾ ಟಕ ಮಾದರಿ ಗೃಹಲಕ್ಷ್ಮೀ, ಉಚಿತ ವಿದ್ಯುತ್, ಉಚಿತ ನೀರು, ನಿರುದ್ಯೋಗಿಗಳಿಗೆ ಭತ್ಯೆ, ಉಚಿತ ಬಸ್‌  ಪ್ರಯಾಣದ ಭರವಸೆ ನೀಡಿವೆ.

ದೆಹಲಿ ಚುನಾವಣೆ: ಎಎಪಿ ಭರ್ಜರಿ ಭರವಸೆ, ವಿದ್ಯಾರ್ಥಿಗಳಿಗೆ ಉಚಿತ ಬಸ್, ಮೆಟ್ರೋದಲ್ಲಿ ಅರ್ಧ ರೇಟ್‌!

ತುರುಸಿನ ಹೋರಾಟ: 

ರಾಜ್ಯಗಳ ಪುನರ್ ವಿಂಗಡನೆ ಬಳಿಕ 1993ರಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. 3 ವರ್ಷಗಳ ಅವಧಿಯಲ್ಲಿ ಪಕ್ಷವು ಮದನ್ ಲಾಲ್ ಖುರಾನಾ, ಸಾಹೀಬ್ ಸಿಂಗ್ ವರ್ಮಾ ಮತ್ತು ಸುಷ್ಮಾ ಸ್ವರಾಜ್ ಅವರನ್ನು ಮುಖ್ಯಮಂತ್ರಿಗಳಾಗಿ ನೇಮಿಸಿ ಕಸರತ್ತು ನಡೆಸಿತ್ತು.

ಬಳಿಕ 1998, 2003, 2008 ರಲ್ಲಿ ಶೀಲಾ ದೀಕ್ಷಿತ್ ಪಕ್ಷಕ್ಕೆ ಹ್ಯಾಟ್ರಿಕ್ ಗೆಲುವು ತಂದುಕೊಟ್ಟು 3 ಬಾರಿ ಮುಖ್ಯಮಂತ್ರಿಯಾಗಿದ್ದರು. 2013ರಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಕಾರಣ ಕಾಂಗ್ರೆಸ್ ಬೆಂಬಲದೊಂದಿಗೆ ಆಪ್ ಸರ್ಕಾರ ರಚಿಸಿತ್ತು. ಆದರೆ 49 ದಿನಗಳ ಬಳಿಕ ಕೇಜ್ರಿವಾಲ್‌ ರಾಜೀನಾಮೆ ಸಲ್ಲಿಸಿದರು. ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. 2015ರ ಆಪ್‌ ಸತತ 2 ಬಾರಿ ಅಧಿಕಾರಕ್ಕೆ ಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ