ವಕ್ಫ್ ತಿದ್ದುಪಡಿ ಕಾಯ್ದೆ ಈಗ ಅಧಿಕೃತ ಜಾರಿ: ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳು ಏ.15ಕ್ಕೆ ವಿಚಾರಣೆ?

Published : Apr 09, 2025, 08:41 AM ISTUpdated : Apr 09, 2025, 08:47 AM IST
ವಕ್ಫ್ ತಿದ್ದುಪಡಿ ಕಾಯ್ದೆ ಈಗ ಅಧಿಕೃತ ಜಾರಿ: ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳು ಏ.15ಕ್ಕೆ ವಿಚಾರಣೆ?

ಸಾರಾಂಶ

ವಕ್ಫ್ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ನಡೆಸುವ ಸಾಧ್ಯತೆಯಿದೆ. ಈ ಕುರಿತು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ಕೇವಿಯಟ್ ಅರ್ಜಿ ಸಲ್ಲಿಸಿದೆ.

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂದುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಗಳ ವಿಚಾರಣೆ ಏ.15ರಂದು ನಡೆಯುವ ಸಾಧ್ಯತೆಯಿದೆ.ಮಂಗಳವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಕೇವಿಯಟ್‌ ಅರ್ಜಿ ಸಲ್ಲಿಸಿ, ಈ ವಿಷಯದಲ್ಲಿ ಯಾವುದೇ ಆದೇಶ ಹೊರಡಿಸುವ ಮೊದಲು ವಿಚಾರಣೆಯನ್ನು ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿತ್ತು. 

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಏ.15ಕ್ಕೆ ವಿಚಾರಣೆಗೆ ಮುಂದಾಗಿದೆ ಎಂದು ಮೂಲಗಳು ಹೇಳಿಎ. ಆದರೆ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ದಿನಾಂಕವನ್ನು ಉಲ್ಲೇಖಿಸಲ್ಲ.ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ರಾಜಕಾರಣಿಗಳು, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂನಲ್ಲಿ ಸಲ್ಲಿಕೆಯಾಗಿವೆ.

ವಕ್ಫ್ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳು ಏ.15ಕ್ಕೆ ವಿಚಾರಣೆ?

ಇದನ್ನೂ ಓದಿ: Breaking ವಕ್ಫ್ ತಿದ್ದುಪಡಿ ಮಸೂದೆ ಈಗ ಕಾನೂನು, ರಾಷ್ಟ್ರಪತಿ ಮುರ್ಮು ಅಂಕಿತ

ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಉದ್ಧಾರಕ್ಕೆ ಬದ್ಧ
'ಈ ಹಿಂದಿನ ವಕ್ಸ್ ಕಾಯ್ದೆಯನ್ನು ಬಳಸಿಕೊಂಡು ಕರ್ನಾಟಕದಲ್ಲಿ ರೈತರ ಜಮೀನು ಕಬಳಿಸಲಾ ಗಿತ್ತು.ಆದರೆಈಗಜಾರಿಗೆ ಬಂದಿರುವ ವಕ್ಸ್ ತಿದ್ದು ಪಡಿ ಕಾಯ್ದೆ 2025 ವಕ್ಸ್ ಮಂಡಳಿಯ ಪಾವಿತ್ರ್ಯತೆ ರಕ್ಷಿಸಲಿದೆ ಮತ್ತು ಮುಸ್ಲಿಮರಲ್ಲಿನ ಬಡವರು ಮತ್ತು ಮಹಿಳೆಯರ ಉದ್ದಾರ ಮಾಡಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ಮಂಗಳವಾರ ನ್ಯೂಸ್ 18 ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2013ರ ತಿದ್ದುಪಡಿ ಕಾಯ್ದೆಯು ಕೇವಲ ಮುಸ್ಲಿಂ ಮೂಲಭೂತವಾದಿಗಳು ಮತ್ತು ಭೂ ಮಾಫಿಯಾಗಳನ್ನು ಓಲೈಸುವ ಉದ್ದೇಶದಿಂದ ರಚಿಸಲಾಗಿತ್ತು. ಆದರೆ 2025ರ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಉದ್ಧಾರಕ್ಕೆ ಬದ್ಧವಾಗಿದೆ. ಇದು ಸಾಮಾಜಿಕ ನ್ಯಾಯದ ಮಹ ತ್ವದ ಮೈಲುಗಲ್ಲಾಗಿದೆ ಎಂದು ಹೇಳಿದರು.

ಪ. ಬಂಗಾಳದಲ್ಲಿ ವಕ್ಸ್ ಕಾಯ್ದೆಯ ವಿರುದ್ಧ ಹಿಂಸೆ 
ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ  ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರದಲ್ಲಿ ವಕ್ಸ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಾಯ್ದೆ ರದ್ದತಿಗೆ ಒತ್ತಾ ಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲು ತೂರಿ ನಂತರ ಬೆಂಕಿ ಹೆಚ್ಚಿದ್ದಾರೆ. 

ಇದನ್ನೂ ಓದಿ:ರಾಮನ ಅನುಗ್ರಹದಿಂದ ತ್ರಿವಳಿ ತಲಾಖ್, ವಕ್ಫ್ ಬಿಲ್ ಪಾಸ್, ಮುಸ್ಲಿಮರಿಂದ ರಾಮನವಮಿ ಪೂಜೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್