ವಕ್ಫ್ ತಿದ್ದುಪಡಿ ಮಸೂದೆಗೆ ಕ್ಯಾಥೋಲಿಕ್ ಬಿಷಪ್‌ಗಳ ಸಂಘಟನೆ ಬೆಂಬಲ: ನಾಳೆ ಲೋಕಸಭೆಯಲ್ಲಿ ಮಂಡನೆ

Published : Apr 01, 2025, 09:20 AM ISTUpdated : Apr 01, 2025, 09:30 AM IST
 ವಕ್ಫ್ ತಿದ್ದುಪಡಿ ಮಸೂದೆಗೆ ಕ್ಯಾಥೋಲಿಕ್ ಬಿಷಪ್‌ಗಳ ಸಂಘಟನೆ ಬೆಂಬಲ: ನಾಳೆ ಲೋಕಸಭೆಯಲ್ಲಿ ಮಂಡನೆ

ಸಾರಾಂಶ

ದೇಶಾದ್ಯಂತ ಚರ್ಚೆಯಲ್ಲಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಕ್ಯಾಥೋಲಿಕ್ ಬಿಷಪ್‌ಗಳ ಸಂಘಟನೆ ಬೆಂಬಲ ಸೂಚಿಸಿದೆ. ಕೇರಳದಲ್ಲಿ ಪಿತ್ರಾರ್ಜಿತ ಆಸ್ತಿಗಳನ್ನು ವಕ್ಫ್ ಭೂಮಿ ಎಂದು ಘೋಷಿಸಿದ್ದನ್ನು ಸಂಘಟನೆ ವಿರೋಧಿಸಿದೆ.

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಕ್ಯಾಥೋಲಿಕ್ ಬಿಷಪ್‌ಗಳ ಸಂಘಟನೆಯು ಬೆಂಬಲ ಸೂಚಿಸಿದೆ. ದಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಮಸೂದೆಗೆ ಬೆಂಬಲ ಸೂಚಿಸಿದ್ದು, ಕೇರಳದ ವಕ್ಫ್ ಮಂಡಳಿಯು ಮುನಂಬಮ್ ಪ್ರದೇಶದ 600ಕ್ಕೂ ಹೆಚ್ಚು ಕುಟುಂಬಗಳ ಪಿತ್ರಾರ್ಜಿತ ಆಸ್ತಿಗಳನ್ನು ವಕ್ಫ್ ಭೂಮಿ ಎಂದು ಘೋಷಿಸಲು ಈಗ ಅಸ್ತಿತ್ವದಲ್ಲಿರುವ ಕಾನೂನನ್ನು ಬಳಸಿಕೊಂಡಿತ್ತು.  ಕಳೆದ 3 ವರ್ಷಗಳಿಂದ ಈ ಸಮಸ್ಯೆ ಬೆಳೆಯುತ್ತಲೇ ಇದೆ. ಇಂಥ ಸಮಸ್ಯೆಗಳ ನಿವಾರಣೆ ಸರಿಯಾದ ಕಾನೂನಿನಿಂದ ಮಾತ್ರ ಸಾಧ್ಯ. ಜನಪ್ರತಿನಿಧಿಗಳು ಒಟ್ಟಾಗಿ ನಿಂತು, ನಿಷ್ಪಕ್ಷಪಾತವಾಗಿ ಕಾನೂನು ತಿದ್ದುಪಡಿಗೆ ಸಹಕರಿಸಬೇಕು ಎಂದು  ಕ್ಯಾಥೋಲಿಕ್ ಬಿಷಪ್‌ಗಳ ಸಂಘಟನೆ ಒತ್ತಾಯಿಸಿದೆ.

ನಾಳೆ ಲೋಕಸಭೆಯಲ್ಲಿ ಮಂಡನೆ

ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಮೂಲಗಳ ಪ್ರಕಾರ ಏ.2ರಂದೇ ಲೋಕಸಭೆಯಲ್ಲಿ ಮಸೂದೆ ಮಂಡನೆ ಸಾಧ್ಯತೆ ಇದೆ. ಏ.4ರಂದು ಸಂಸತ್ತಿನ ಬಜೆಟ್‌ ಅಧಿವೇಶನ ಮುಕ್ತಾಯವಾಗಲಿದೆ. ಅದಕ್ಕೂ ಮೊದಲೇ ಮಸೂದೆ ಮಂಡಿಸಿ, ಚರ್ಚಿಸಿ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎನ್ನಲಾಗಿದೆ. ವಕ್ಫ್‌ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರಲು, ವಕ್ಫ್‌ ಮಂಡಳಿಯಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಪಂಗಡಗಳು, ಮಹಿಳೆಯರಿಗೆ ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಮಹತ್ವದ ಉದ್ದೇಶಗಳಿಂದ ಮಸೂದೆಗೆ ಸರ್ಕಾರ ತಿದ್ದುಪಡಿ ತಂದಿದೆ. 

ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಎಸ್ ಡಿಪಿಐ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು