ಹಣ್ಣು ಸ್ವಚ್ಛಗೊಳಿಸಲು ತ್ರಿವರ್ಣ ಧ್ವಜ ಬಳಸಿದ ಭೂಪ: ವಿಡಿಯೋ ವೈರಲ್‌ ಬೆನ್ನಲ್ಲೇ ತನಿಖೆಗೆ ಆದೇಶ

By BK AshwinFirst Published Apr 8, 2023, 1:04 PM IST
Highlights

ಈ ವಿಡಿಯೋದಲ್ಲಿ ವ್ಯಕ್ತಿಯು ರಾಷ್ಟ್ರಧ್ವಜವನ್ನು ಬಳಸಿಕೊಂಡು ಕಲ್ಲಂಗಡಿ ಹಣ್ಣುಗಳ ಧೂಳು ಒರೆಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌  ಆಗುತ್ತಿದ್ದು, ಅನೇಕ ನೆಟ್ಟಿಗರು ಇದಕ್ಕೆ ಟೀಕೆ ಮಾಡುತ್ತಿದ್ದಾರೆ.

ನವದೆಹಲಿ (ಏಪ್ರಿಲ್ 8, 2023): ಭಾರತೀಯ ರಾಷ್ಟ್ರಧ್ವಜಕ್ಕೆ ತನ್ನದೇ ಆದ ಗೌರವವಿದೆ. ಆದರೆ, ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಹಣ್ಣುಗಳನ್ನು ಸ್ವಚ್ಛಗೊಳಿಸಲು ಭಾರತದ ರಾಷ್ಟ್ರಧ್ವಜ ಅಥವಾ ತ್ರಿವರ್ಣ ಧ್ವಜವನ್ನು ಬಳಸುತ್ತಿರುವ ಆಘಾತಕಾರಿ ಘಟನೆ ಕಂಡುಬಂದಿದೆ. ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ.

ಸ್ಥಳೀಯರು ಚಿತ್ರೀಕರಿಸಿದ ಘಟನೆಯ ವಿಡಿಯೋವನ್ನು (Video) ಸಾಮಾಜಿಕ ಮಾಧ್ಯಮದಲ್ಲಿ (Social Media) ಅಪ್‌ಲೋಡ್ ಮಾಡಿದ ನಂತರ ವಿಷಯವು ಮುನ್ನೆಲೆಗೆ ಬಂದಿದ್ದು, ನೆಟ್ಟಿಗರು (Netizens)  ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ವ್ಯಕ್ತಿಯು ರಾಷ್ಟ್ರಧ್ವಜವನ್ನು (National Flag) ಬಳಸಿಕೊಂಡು ಕಲ್ಲಂಗಡಿ ಹಣ್ಣುಗಳ(Water Melon) ಧೂಳು (Dust) ಒರೆಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗುತ್ತಿದ್ದು, ಅನೇಕ ನೆಟ್ಟಿಗರು ಇದಕ್ಕೆ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ, ಅನೇಕರು ಈ ವಿಡಿಯೋವನ್ನು ಶೇರ್‌ (Share) ಮಾಡಿಕೊಳ್ಳುತ್ತಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Latest Videos

ಇದನ್ನು ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

राष्ट्रीय ध्वज से तरबूज साफ करते वीडियो सोशल मीडिया पर हुआ वायरल,समथर थाना क्षेत्र का बताया जा रहा है pic.twitter.com/d8yxbdPRni

— ठाkur Ankit Singh (@liveankitknp)

ಇನ್ನು, ತ್ರಿವರ್ಣ ಧ್ವಜಕ್ಕೆ (Tricolour Flag) ಅಗೌರವ ತೋರಿದ ಘಟನೆ ಬೆಳಕಿಗೆ ಬಂದಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, 52 ವರ್ಷದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ, ದೆಹಲಿ ಪೊಲೀಸರು ಇವರನ್ನು ಬಂಧಿಸಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ದೆಹಲಿ ಪೊಲೀಸರು ಈ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. "ಈ ವಿಷಯದಲ್ಲಿ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಭಜನ್‌ಪುರ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯಿದೆ, 1971 ರ ಸೆಕ್ಷನ್ 2 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ," ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಹಾಗೂ, ತನಿಖೆಗೆ ಹಾಜರಾಗಲು ಆರೋಪಿಗೆ ಸೂಚನೆ ನೀಡಲಾಗಿದೆ. ಇದು ಉದ್ದೇಶಪೂರ್ವಕವಾಗಿಲ್ಲ ಮತ್ತು ತಪ್ಪಿನಿಂದ ಈ ರೀತಿ ಆಗಿದೆ ಎಂದು ಅವರು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೂ, ನಾವು ಅವರನ್ನು ತನಿಖೆಗೆ ಹಾಜರಾಗಲು ಮತ್ತು ನ್ಯಾಯಾಲಯ ಕರೆದಾಗ ವಿಚಾರಣೆಗೆ ಹಾಜರಾಗಲು ಅವರಿಗೆ ತಿಳಿಸಿದ್ದೇವೆ" ಎಂದೂ ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದರು.

ಇದನ್ನೂ ಓದಿ: ಭಾರತದ ರಾಷ್ಟ್ರಧ್ವಜ ಕೆಳಗಿಳಿಸಿದ ಓರ್ವನ ಬಂಧನ: ಇನ್ನಷ್ಟು ದೊಡ್ಡ ರಾಷ್ಟ್ರಧ್ವಜ ಹಾರಿಸಿದ ದೂತಾವಾಸ

click me!