ನಾವು ಯಾವ ಧರ್ಮದ ವಿರುದ್ಧವೂ ಇಲ್ಲ: ಉದಯನಿಧಿ ಪ್ಲೇಟ್ ಚೇಂಜ್

Published : Sep 08, 2023, 11:59 AM ISTUpdated : Sep 08, 2023, 12:01 PM IST
ನಾವು ಯಾವ ಧರ್ಮದ ವಿರುದ್ಧವೂ ಇಲ್ಲ:  ಉದಯನಿಧಿ ಪ್ಲೇಟ್ ಚೇಂಜ್

ಸಾರಾಂಶ

ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಉದಯನಿಧಿ ಸ್ಟಾಲಿನ್‌, ತಮ್ಮ ಹೇಳಿಕೆ ಪಕ್ಷಕ್ಕೆ ಮುಳುವಾಗಬಹುದೆಂಬ ಆತಂಕದಲ್ಲಿ ತಮ್ಮ ಪಕ್ಷದ ಯಾವುದೇ ಧರ್ಮದ ವಿರುದ್ಧವೂ ಇಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಚೆನ್ನೈ: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಉದಯನಿಧಿ ಸ್ಟಾಲಿನ್‌, ತಮ್ಮ ಹೇಳಿಕೆ ಪಕ್ಷಕ್ಕೆ ಮುಳುವಾಗಬಹುದೆಂಬ ಆತಂಕದಲ್ಲಿ ತಮ್ಮ ಪಕ್ಷದ ಯಾವುದೇ ಧರ್ಮದ ವಿರುದ್ಧವೂ ಇಲ್ಲ ಎಂದು ಸ್ಪಷ್ಪಪಡಿಸಿದ್ದಾರೆ. ಈ ಕುರಿತು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ 4 ಪುಟಗಳ ಬಹಿರಂಗ ಪತ್ರ ಬರೆದಿರುವ ಉದಯನಿಧಿ, ಒಂದು ಧರ್ಮವು ಸಮಾನತೆ ಮತ್ತು ಜಾತಿ ರಹಿತ ಸಮಾಜವನ್ನು ಪ್ರತಿಪಾದಿಸಿದರೆ ಅವನು ಆಧ್ಯಾತ್ಮಿಕ ವ್ಯಕ್ತಿಯಾಗುತ್ತಾನೆ. ಆದರೆ ಒಂದು ಧರ್ಮವು ಜಾತೀವಾದವನ್ನು ಉತ್ತೇಜಿಸಿದರೆ ಆತ ಅದನ್ನು ವಿರೋಧಿಸುತ್ತಾನೆ ಎಂಬ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್‌ ಅಣ್ಣಾದುರೈ (Annadorai)ಅವರ ಹೇಳಿಕೆ ಉಲ್ಲೇಖಿಸಿದ್ದಾರೆ. ಜೊತೆಗೆ ಅಲ್ಲದೇ ನನ್ನ ತಲೆ ಕತ್ತರಿಸಿದವರಿಗೆ 10 ಕೋಟಿ ರು. ಬಹುಮಾನ ನೀಡುವುದಾಗಿ ಘೋಷಿಸಿರುವ ಅಯೋಧ್ಯೆಯ ಪರಮಹಂಸರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಅಲ್ಲದೇ ಅವರ ಪ್ರತಿಕೃತಿ ದಹನ ಮಾಡದಂತೆ ಕಾರ್ಯಕರ್ತರಲ್ಲಿ ಕೇಳಿಕೊಳ್ಳುತ್ತೇನೆ. ಬಿಜೆಪಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amith shah)ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದಿದ್ದಾರೆ.

ಉದಯನಿಧಿ, ರಾಜಾ ಹೇಳಿಕೆ ಒಪ್ಪಲ್ಲ: ಮೊದಲ ಬಾರಿ ಮೌನ ಮುರಿದ ಕಾಂಗ್ರೆಸ್‌

ಸನಾತನ ಧರ್ಮವನ್ನು (Sanatana Dharma) ನಿರ್ಮೂಲನೆ ಮಾಡುವ ಹಾಗೂ ಮಲೇರಿಯಾ (Maleriya), ಡೇಂಘಿ, ಕುಷ್ಠರೋಗ ಮತ್ತು ಎಚ್‌ಐವಿಗಳಿಗೆ ಹೋಲಿಸಿ ಟೀಕೆ ಮಾಡಿರುವ ಡಿಎಂಕೆ ನಾಯಕರಾದ ಉದಯ ನಿಧಿ ಸ್ಟಾಲಿನ್‌ ಮತ್ತು ಎ.ರಾಜಾ ಅವರ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮೌನ ಮುರಿದು ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಸಂವಹನ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ (Pawan Khera) ‘ಕಾಂಗ್ರೆಸ್‌ ಪಕ್ಷವು ‘ಸರ್ವಧರ್ಮ ಸಂಭವ’ (ಎಲ್ಲಾ ಧರ್ಮಗಳಿಗೂ ಸಮಾನ ಗೌರವ ನೀಡುವ) ತತ್ವದಲ್ಲಿ ನಂಬಿಕೆ ಇಟ್ಟಿದೆ. ಇದರಲ್ಲಿ ಪ್ರತಿಯೊಂದು ಧರ್ಮ ಮತ್ತು ನಂಬಿಕೆಗೆ ಅದರದೇ ಆದ ಸ್ಥಾನವಿದೆ. ಯಾವುದೇ ನಂಬಿಕೆ ಇನ್ನೊಂದಕ್ಕಿಂತ ಕಡಿಮೆ ಇದೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಂವಿಧಾನವು ಇದಕ್ಕೆ ಅನುಮತಿ ನೀಡುವುದಿಲ್ಲ ಮತ್ತು ಕಾಂಗ್ರೆಸ್‌ ಕೂಡ ಇಂತಹ ಹೇಳಿಕೆಗಳಲ್ಲಿ ನಂಬಿಕೆ ಇಟ್ಟಿಲ್ಲ’ ಎಂದಿದ್ದಾರೆ.

ಡಿಎಂಕೆಗೆ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಿಂದೂ ಧರ್ಮವೇ ಬೇಕಾ?

ಪ್ರಿಯಾಂಕ್‌, ಪರಂ ಹೇಳಿಕೆಗೆ ಕೈ ಮೌನ: ಬಿಜೆಪಿ ಟೀಕೆ

ಪಟನಾ: ಇಂಡಿಯಾ ಮೈತ್ರಿ ಕೂಟ ಹಾಗೂ ಕಾಂಗ್ರೆಸ್‌ ನಾಯಕರು ದಿನೇ ದಿನೇ ಹಿಂದೂ ಧರ್ಮದ (Hindu Dharma) ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಮೌನವಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ (Ravishankar prasad) ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು,‘ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್‌ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಹಿಂದೂ ಧರ್ಮಕ್ಕೆ ಅವಮಾನ ಮಾಡಿದರೂ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ (Priyankh Gandhi) ಯಾವುದೇ ಮಾತನಾಡುತ್ತಿಲ್ಲ. ಏಕೆಂದರೆ ಇಂಡಿಯಾ ಕೂಟದ ಅಜೆಂಡಾ ಹಿಂದೂ ಧರ್ಮದ ಅವಹೇಳನ ಮಾಡುವುದು’ ಎಂದು ವಾಗ್ದಾಳಿ ನಡೆಸಿದರು.

ಹಿಂದೂ ದ್ವೇಷಿ, ಹೆಮ್ಮೆಯ ಕ್ರಿಶ್ಚಿಯನ್! ಜಾತಿ ವ್ಯವಸ್ಥೆ ನಿರ್ಮೂಲನೆಗೆ ಇವರು ಮಾಡಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಿಂದೂ ಪರ ತೀರ್ಪಿತ್ತ ಜಡ್ಜ್‌ ವಿರುದ್ಧ ಡಿಎಂಕೆ ವಾಗ್ದಂಡನೆ
ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌