
ಬೆಂಗಳೂರು (ಜ.09) ಕಳೆದ ಕೆಲ ದಿನಗಳಿಂದ ಭಾರತದ ಹಲವು ರಾಜ್ಯಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ದೇಶದ ಕೆಲೆವಡೆ ಮಳೆಯಾಗಲಿದೆ ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿತ್ತು. ಇದೀಗ ಗುರುಗಾಂವ್‌ನಲ್ಲಿ ಮಳೆಯಾಗಿದೆ. ಇಂದು ಬೆಳಗ್ಗೆ ಗುರುಗಾಂವ್ ಸುತ್ತು ಮುತ್ತ ಮಳೆಯಾಗಿದೆ. ಪಕ್ಕದ ದೆಹಲಿಯಲ್ಲಿ ವಿಪರೀತ ಚಳಿ ವಾತಾವರಣವಿದೆ. ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಕೇರಳದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದರ ಪರಿಣಾಮ ಬೆಂಗಳೂರು ಹಾಗೂ ಕರ್ನಾಟಕದ ಮೇಲೆ ಬೀಳಲಿದೆ ಎಂದು ಎಚ್ಚರಿಕೆ ನೀಡಿದೆ.
ಗುರುಗಾಂವ್ ಸುತ್ತ ಮುತ್ತ ಮಳೆಯಾಗಿದೆ. ಇಂದು (ಜ.09) 5 ರಿಂದ 6 ಗಂಟೆ ಸುಮಾರಿಗೆ ಗುರುಗಾಂವ್ ಸುತ್ತ ಮುತ್ತ ಮಳೆಯಾಗಿದೆ. ಗುರುಗಾಂವ್ ನಗರದ ಹೊರವಲಯದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮಳೆಯಾಗಿದೆ. ಇದರಿಂದ ಪ್ರತಿನಿತ್ಯ ಕೆಲಸಗಳಿಗೆ ತೆರಳುವವರಿಗೆ ಸಮಸ್ಯೆಯಾಗಿದೆ.
ಭಾರತೀಯ ಹಾವಮಾನ ಇಲಾಖೆ ನೀಡಿದ ಎಚ್ಚರಿಕೆ ಪ್ರಕಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಇಂದಿನಿಂದು ಎರಡು ದಿನ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ವಿಶೇಷ ಅಂದರೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಅನ್ನೋ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಳ್ಳಿ, ಶ್ರೀಲಂಕಾ ದಿಕ್ಕಿನಲ್ಲಿ ವಾಯುಭಾರ ಕುಸಿತದ ಪರಿಣಾಮ ಭಾರಿ ಮಳೆ ಸಾಧ್ಯತೆ ಇದೆ ಎಂದಿದೆ. ಇದೇ ವೇಳೆ ತಮಿಳುನಾಡು, ಪುದುಚೇರಿ, ಕೇರಳ ಕರಾವಳಿ ತೀರ ಪ್ರದೇಶ ಜನರಿಗೆ ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿನ ಭಾರಿ ಮಳೆಯಾಗವು ಸಾಧ್ಯತೆ ಇದೆ. ಗುಡುಗು ಸಹಿತ ಮಳೆ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ ಎಂದಿದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರ್ನಾಟದ ಕಲೆ ಜಿಲ್ಲೆಗಳಲ್ಲಿ ವಿಪರೀತ ಚಳಿ ವಾತಾವರಣ ನಿರ್ಮಾಣಗೊಂಡಿದೆ.
ದೇಶದ ಬಹುತೇಕ ಕಡೆಗಳಲ್ಲಿ ಭಾರಿ ಚಳಿ ವಾತಾವರಣವಿದೆ. ಹೀಗಾಗಿ ಹವಾಮಾನ ಇಲಾಖೆ ಕೆಲ ರಾಜ್ಯಗಳಿಗೆ ಆರೇಂಜ್ ಅಲರ್ಟ್ ನೀಡಿದೆ. ದಹಲಿ, ಪಂಜಾಬ್, ರಾಜಸ್ಥಾನ, ಚತ್ತೀಸಘಡ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಚಳಿ ವಾತಾವರಣ ಇರಲಿದೆ ಎಂದು ಸೂಚಿಸಿದೆ. ಇತ್ತ ಅಸ್ಸಾಂ, ಮೇಘಾಲಯ, ಉತ್ತರಖಂಡ, ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದಿದೆ. ಹೀಗಾಗಿ ವಾಹನ ಸವಾರರು , ಪದಾಚಾರಿಗಳು ಅತೀವ ಮುಂಜಾಗ್ರತೆಯಿಂದ ಇರಲು ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ