
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಿಸಿ ಸಾಮಾನ್ಯ ಜನರಿಗೆ ತಟ್ಟಬಾರದು. ಇದಕ್ಕಾಗಿ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಸೂಚನೆ ನೀಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಲು ನಿರಂತರವಾಗಿ ನಿಗಾ ಇಡುವಂತೆ ಪ್ರಧಾನಿ ಮೋದಿ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.
ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಸಗೊಬ್ಬರಗಳ ಸಾಕಷ್ಟು ದಾಸ್ತಾನು ಇದೆ. ಜೊತೆಗೆ, ಬೇರೆ ಬೇರೆ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳವನ್ನು ಕಾಂಗ್ರೆಸ್ ಮುಕ್ತ ಮಾಡಲು ರಾಹುಲ್ ಪ್ರಯತ್ನ: ರಾಜೀವ್ ಚಂದ್ರಶೇಖರ್ ವ್ಯಂಗ್ಯ
ಹೋರ್ಮುಜ್ ಜಲಸಂಧಿ ಮೂಲಕ ಭಾರತದ ಹಡಗುಗಳು ಸುರಕ್ಷಿತವಾಗಿ ಸಂಚರಿಸಲು ಸರ್ಕಾರ ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸಲಿದೆ. ಈ ಯುದ್ಧದ ಪರಿಸ್ಥಿತಿಯಲ್ಲಿ, ಜನರಿಗೆ ಸರಿಯಾದ ಮಾಹಿತಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಭದ್ರತಾ ಕ್ಯಾಬಿನೆಟ್ ಸಮಿತಿ (CCS) ಸಭೆಯಲ್ಲಿ ಪ್ರಧಾನಿ ನಿರ್ದೇಶನ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ