West Asia crisis: ಇಂಡಕ್ಷನ್‌ ಸ್ಟವ್‌, ಪಾತ್ರೆ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಚಿಂತನೆ

Kannadaprabha News   | Kannada Prabha
Published : Apr 04, 2026, 08:01 AM IST
Central Govt to Boost Induction Stove Utensil Production Amid LPG Supply Concerns rav

ಸಾರಾಂಶ

ಕೊಲ್ಲಿ ಯುದ್ಧದಿಂದ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣ, ಕೇಂದ್ರ ಸರ್ಕಾರವು ಇಂಡಕ್ಷನ್‌ ಸ್ಟವ್‌ ಅದಕ್ಕೆ ಬೇಕಾದ ಪಾತ್ರೆಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಲು ನಿರ್ಧರ ದೇಶದಲ್ಲಿ ವಿದ್ಯುತ್ ಆಧಾರಿತ ಅಡುಗೆ ಉಪಕರಣಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ಪಾದನೆ ಹೆಚ್ಚಿಸುವ ಕುರಿತು ಚರ್ಚೆ ನಡೆದಿದೆ.

- ಗ್ಯಾಸ್‌ಟ್ರಬಲ್‌ ಹಿನ್ನೆಲೆ, ಕೇಂದ್ರದಿಂದ ಈ ನಿರ್ಧಾರ

ನವದೆಹಲಿ (ಏ.4): ಕೊಲ್ಲಿ ಯುದ್ಧದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಡಕ್ಷನ್‌ ಸ್ಟವ್‌, ಅದಕ್ಕೆ ಪೂರಕವಾದ ಪಾತ್ರೆಗಳ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಗ್ಯಾಸ್‌ ಟ್ರಬಲ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಈ ರೀತಿಯ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಇರಾನ್‌ ಯುದ್ಧದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿದ್ಯುತ್‌ ಆಧಾರಿತ ಇಂಡಕ್ಷನ್‌ ಸ್ಟವ್‌, ಅದಕ್ಕೆ ಪೂರಕವಾದ ಪಾತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ದೇಶದಲ್ಲಿ ಇಂಡಕ್ಷನ್‌ ಕುಕ್ಕರ್‌ಗಳು,ಕಿಟೆಲ್‌ಗಳು, ಪಾತ್ರೆಗಳ ಮಾರಾಟ ಹೆಚ್ಚಾಗಿದೆ.

ಇದರ ನಡುವೆಯೇ ವಿದ್ಯುತ್‌ ಇಲಾಖೆ ಕಾರ್ಯದರ್ಶಿ ಪಂಕಜ್‌ ಅಗರ್ವಾಲ್‌ ಸೇರಿ ಹಿರಿಯ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರು ಈ ವಿಚಾರವಾಗಿ ಚರ್ಚೆ ನಡೆಸಿದರು. ಇಂಡಕ್ಷನ್‌ ಕುಕ್ಕರ್‌ಗಳು ಹಾಗೂ ಅದಕ್ಕೆ ಪೂರಕವಾದ ಪಾತ್ರೆಗಳ ಉತ್ಪಾದನೆಯನ್ನು ಯಾವ ರೀತಿ ಹೆಚ್ಚಳ ಮಾಡಬಹುದು ಎಂಬ ಕುರಿತು ಸಮಾಲೋಚನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ಪುತ್ರಿ ವಿದ್ಯಾರಾಣಿ ಕಣಕ್ಕೆ
India Latest News Live: West Asia crisis - ಇಂಡಕ್ಷನ್‌ ಸ್ಟವ್‌, ಪಾತ್ರೆ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಚಿಂತನೆ