ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!

Published : Mar 05, 2021, 03:55 PM IST
ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!

ಸಾರಾಂಶ

ಪಶ್ಚಿಮ ಬಂಗಾಳ ಚುನಾವಣೆ ಕಾವು ಏರುತ್ತಿದೆ.  ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಇನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಕೋಲ್ಕತಾ(ಮಾ.05): ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್(TMC) ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. 295 ಸ್ಥಾನಗಳ ಪೈಕಿ 291 ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಡಾರ್ಜಲಿಂಗ್‌ನಲ್ಲಿ ಉಳಿದ ಮೂರು ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ಮೈತ್ರಿ ಪಕ್ಷ ಸ್ಪರ್ಧಿಸಲಿದೆ ಎಂದು ಟಿಎಂಸಿ ಮುಖ್ಯಸ್ಥೆ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಲೆಕ್ಷನ್ ಸಮೀಪಿಸ್ತಿದ್ದಂತೆ ಮಾ ಕ್ಯಾಂಟೀನ್ ಆರಂಭಿಸಿದ ದೀದಿ: 5 ರೂಪಾಯಿ ಊಟ

ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ನಂದೀಗ್ರಾಮ ಕ್ಷೇತ್ರದ ಅಭ್ಯರ್ಥಿ ತಾವೇ ಎಂದು ಸ್ಪಷ್ಟಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ್ದ ಸುವೆಂಧು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಮಮತಾ ಈ ಹಿಂದೆ ಸಮಾವೇಶದಲ್ಲಿ ಘೋಷಿಸಿದ್ದರು. ಅದರಂತೆ ನಂದಿಗ್ರಾಮ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಮತಾ ಬ್ಯಾನರ್ಜಿ ಹೆಸರು ಅಂತಿಮಗೊಳಿಸಲಾಗಿದೆ.

291 ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 50 ಮಹಿಳಾ ಅಭ್ಯರ್ಥಿಗಳು ಹಾಗೂ 42 ಮುಸ್ಲಿಂ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಭವಾನಿಪೋರ್ ಕ್ಷೇತ್ರದಿಂದ, ಸೊಬಾನಂದೇಬ್ ಚಟ್ಟೋಪಾಧ್ಯಾಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ "  ಬಂಗಾಳಿ ಚಲನಚಿತ್ರ ನಿರ್ದೇಶಕ ರಾಜ್ ಚಕ್ರವರ್ತಿ ಬರಾಕ್‌ಪೋರ್‌ನಿಂದ ಸ್ಪರ್ಧಿಸಲಿದ್ದು, ಟಿಎಂಸಿ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಯನ್ನು ಸೋವನ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

 

AITC Candidates for West Bengal Bidhan Sabha Elections 2021

Posted by All India Trinamool Congress on Friday, 5 March 2021

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!