ಮಮತಾ ಬ್ಯಾನರ್ಜಿ ಚುನಾವಣೆಯ ಭವಿಷ್ಯ ನುಡಿದ ಎಚ್‌ಡಿ ಕುಮಾರಸ್ವಾಮಿ

Published : Sep 22, 2021, 07:15 PM IST
ಮಮತಾ ಬ್ಯಾನರ್ಜಿ ಚುನಾವಣೆಯ ಭವಿಷ್ಯ ನುಡಿದ ಎಚ್‌ಡಿ ಕುಮಾರಸ್ವಾಮಿ

ಸಾರಾಂಶ

* ರಂಗೇರಿದ ಭವಾನಿಪುರ ವಿಧಾನಸಭಾ ಉಪಚುನಾವಣೆ * ಅದೃಷ್ಟ ಪರೀಕ್ಷೆಗಿಳಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ * ಮಮತಾ ಬ್ಯಾನರ್ಜಿಯ ಚುನಾವಣೆಯ ಭವಿಷ್ಯ ನುಡಿದ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು, (ಸೆ.22): ತೀವ್ರ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ (Bhabanipur Bypoll) ದಿನಾಂಕ ಫಿಕ್ಸ್ ಆಗಿದೆ. ಇದೇ ಸೆಪ್ಟೆಂಬರ್ 30 ರಂದು ನಡೆಯಲಿದ್ದು,  ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಭವಾನಿಪುರ ಉಪಚುನಾವಣೆಗೆ ಸ್ಪರ್ಧಿಸಿದ್ದು, ಚುನಾವಣಾ ಕಣ ಭಾರೀ ರಂಗೇರಿದೆ.

ಸಿಎಂ ಗಾದಿ ಉಳಿಸಲು ಚುನಾವಣಾ ಕಣಕ್ಕೆ ದೀದೀ: ಬಿಜೆಪಿಯಿಂದ ಪ್ರಬಲ ಸ್ಪರ್ಧಿ!

ಇನ್ನು ಈ ಚುನಾವಣೆ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ,  ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದಿದ್ದಾರೆ.

ದೀದೀಗೆ ಮುಳುವಾಗುತ್ತಾ ಅಸ್ಸಾಂನಲ್ಲಿ ದಾಖಲಾದ ಈ 5 ಕ್ರಿಮಿನಲ್‌ ಕೇಸ್‌?

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ. ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು.

ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇವರ ವಿರುದ್ಧ ಬಿಜೆಪಿ, ನ್ಯಾಯವಾದಿ ಪ್ರಿಯಾಂಕಾ ಟಿಬ್ರೆವಾಲ್  (Priyanka Tibrewal) ಅವರನ್ನು ಕಣಕ್ಕಿಳಿಸಿದೆ.  ಎಡರಂಗದಿಂದ ಶ್ರೀಜಿಬ್ ಬಿಸ್ವಾಸ್ ಕಣದಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್