ಮಮತಾ ವಿರುದ್ಧ ಸುವೆಂದು ಅಧಿಕಾರಿಯ ರಣಕಹಳೆ; ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ!

Published : Mar 12, 2021, 04:01 PM ISTUpdated : Mar 12, 2021, 04:09 PM IST
ಮಮತಾ ವಿರುದ್ಧ ಸುವೆಂದು ಅಧಿಕಾರಿಯ ರಣಕಹಳೆ; ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ!

ಸಾರಾಂಶ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ ಇದೀಗ ಭಾರತದ ಗಮನಸೆಳೆದಿದೆ.  ಮಮತಾ ಬ್ಯಾನರ್ಜಿ ಈ ಬಾರಿ ನಂದಿಗ್ರಾಮದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಈ ಘೋಷಣೆ ಬಳಿಕ ನಂದಿಗ್ರಾಮ ಕೊತ ಕೊತ ಕುದಿಯುತ್ತಿದೆ. ಇದೀಗ ಇದೇ ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ನಾಮಪತ್ರ ಸಲ್ಲಿಸಿದ್ದಾರೆ.

ಕೋಲ್ಕತಾ(ಮಾ.12): ಪಶ್ಚಿಮ ಬಂಗಾಳ ಚುನಾವಣೆ ಕಾವು ಹೆಚ್ಚಾಗಿದೆ. ಅದರಲ್ಲೂ ಶಾಂತವಾಗಿದ್ದ ನಂದಿಗ್ರಾಮ ಇದೀಗ ಕೆರಳಿ ಕೆಂಡವಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಇದೇ ನಂದಿಗ್ರಾಮದಿಂದ ಸ್ಪರ್ಧಿಸುತ್ತಿದ್ದಾರೆ. ಪ್ರಚಾರದ ವೇಳೆ ಗಾಯಗೊಂಡು ಆಸ್ಪತ್ರೆ ಸೇರಿದ್ದು ಇದೇ ನಂದಿಗ್ರಾಮದಲ್ಲಿ. ಇದೀಗ ಮಮತಾ ವಿರುದ್ಧ ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಇಂದು ಭರ್ಜರಿ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ದೀದಿ ಗಾಯ​ಗೊಂಡಿದ್ದು ಅಪಘಾತದಲ್ಲಿ : ನಿಜವಾಗಿಯೂ ಆಗಿದ್ದೇನು?

ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್ ಜೊತೆ ರೋಡ್ ಶೋ ನಡೆಸಿದ ಸುವೆಂದು ಅಧಿಕಾರಿ, ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ದೀದಿ ಮ್ಯಾಜಿಕ್ ವಿಫಲಗೊಳಿಸಲು ಸುವೆಂದು ರೆಡಿಯಾಗಿದ್ದಾರೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ ಸುವೆಂದು ಅಧಿಕಾರಿ, ಮಮತಾ ವಿರುದ್ಧವೇ ತೊಡೆ ತಟ್ಟಿದ್ದರು.  ಸುವೆಂದು ಸವಾಲು ಸ್ವೀಕರಿಸಿದ ಮಮತಾ  ನಂದಿಗ್ರಾಮದಿಂದಲೇ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಟಿಎಂಸಿ ಹಾಗೂ ಬಿಜೆಪಿ ಜಿದ್ದಾಜಿದ್ದಿನ ಹೋರಾಟಕ್ಕೆ ಬಿದ್ದಿದೆ.  

ಬಂಗಾಳದಲ್ಲಿ 5 ವರ್ಷದ ಹಿಂದೆ ಬರೀ 3 ಸೀಟು ಗೆದ್ದಿದ್ದ ‘ಕಮಲ’ ಈಗ ಅರಳುತ್ತಿರುವುದು ಹೇಗೆ?.

ಮಮತಾ ಆಸ್ಪತ್ರೆ ದಾಖಲಾಗಲು ಬಿಜೆಪಿ ಕಾರಣ. ಮಮತಾ ಹಲ್ಲೆ ಮೇಲೆ ವ್ಯವಸ್ಥಿತ ಪಿತೂರಿ ನಡೆದಿದೆ. ಉನ್ನತ ಮಟ್ಟದ ತನಿಖೆ ಅಗತ್ಯ ಎಂದು ಟಿಎಂಸಿ ನಾಯಕರು ಇಂದು ರಾಜ್ಯ ಚುನಾವಣಾ ಆಯೋಗವನ್ನು ಭೇಟಿ ಮಾಡಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?