
ಕೋಲ್ಕತ್ತಾ (ಮೇ 4): ಪಶ್ಚಿಮ ಬಂಗಾಳದ ಅಧಿಕಾರದ ಗದ್ದುಗೆ ಯಾರ ಪಾಲಿಗೆ ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ರಾಜ್ಯದ 293 ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡುಬರುತ್ತಿದೆ. ಬೆಳಗ್ಗೆ 8.41ರ ವೇಳೆಗೆ 293 ಕ್ಷೇತ್ರಗಳ ಪೈಕಿ 124 ಕ್ಷೇತ್ರದ ಎಣಿಕೆಯಲ್ಲಿ ಟಿಎಂಸಿ 63 ಹಾಗೂ ಬಿಜೆಪಿ 59 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಿಗ್ಗೆಯ ಆರಂಭಿಕ ಟ್ರೆಂಡ್‌ಗಳ ಪ್ರಕಾರ, ರಾಜ್ಯದಲ್ಲಿ ಇಂಚಿಂಚು ಹೋರಾಟ ನಡೆಯುತ್ತಿದೆ. ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿ ಬಿಜೆಪಿ ಪ್ರಬಲ ಸವಾಲೊಡ್ಡಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಹೈ-ವೋಲ್ಟೇಜ್ ಕ್ಷೇತ್ರವಾದ ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಬದ್ವೀಪ್ ಮತ್ತು ಕೃಷ್ಣನಗರದಲ್ಲಿ ಬಿಜೆಪಿ ಅಂಚೆ ಮತಪತ್ರಗಳ ಎಣಿಕೆಯಲ್ಲಿ ಮುಂದಿದ್ದರೆ, ಶಂಶೇರ್‌ಗಂಜ್‌ನಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಂದಿದೆ.
ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳ ಎಣಿಕೆ ಇಂದು ನಡೆಯುತ್ತಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ (Falta) ಕ್ಷೇತ್ರದಲ್ಲಿ ವ್ಯಾಪಕ ಚುನಾವಣಾ ಅಕ್ರಮಗಳ ದೂರು ಬಂದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಈ ಕ್ಷೇತ್ರದಲ್ಲಿ ಮೇ 21 ರಂದು ಮರು ಮತದಾನಕ್ಕೆ ಆದೇಶಿಸಿದೆ. ಈ ಕ್ಷೇತ್ರದ ಫಲಿತಾಂಶ ಮೇ 24 ರಂದು ಹೊರಬೀಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ