
ಕೋಲ್ಕತ್ತಾ (ಏ.29): ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಈಗ ಎಲ್ಲರ ಕಣ್ಣು ಎಕ್ಸಿಟ್ ಪೋಲ್ ಫಲಿತಾಂಶಗಳ ಮೇಲಿದೆ. ವಿವಿಧ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಐತಿಹಾಸಿಕ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಆಡಳಿತ ಅಂತ್ಯಗೊಂಡು, ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ. ಬಂಗಾಳ ವಿಧಾನಸಭೆಯ ಒಟ್ಟು 294 ಸ್ಥಾನಗಳಲ್ಲಿ ಬಹುಮತಕ್ಕೆ 147 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದೆ.
ಈ ಸಮೀಕ್ಷೆಯು ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿದೆ. ಪಿ-ಮಾರ್ಕ್ ಪ್ರಕಾರ, ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಆರಾಮದಾಯಕವಾಗಿ ಸರ್ಕಾರ ರಚಿಸಲಿದೆ. ದೀದಿ ಪಡೆ ನೂರರ ಗಡಿ ದಾಟಿದರೂ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಮ್ಯಾಟ್ರಿಜ್ ಸಂಸ್ಥೆಯು ಕೂಡ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿದೆ. ಈ ಸಮೀಕ್ಷೆಯ ಪ್ರಕಾರ ಬಿಜೆಪಿ ಬಹುಮತದ ಅಂಚಿನಲ್ಲಿದ್ದು, ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಆದರೆ, ಟಿಎಂಸಿ ಕೂಡ ಪ್ರಬಲ ಪೈಪೋಟಿ ನೀಡಿದೆ.
ಇದು ಉಳಿದೆರಡು ಸಮೀಕ್ಷೆಗಳಿಗೆ ವ್ಯತಿರಿಕ್ತವಾದ ಫಲಿತಾಂಶವನ್ನು ನೀಡಿದ್ದು, ಟಿಎಂಸಿಗೆ ಸ್ಪಷ್ಟ ಬಹುಮತವನ್ನು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಪ್ರಕಾರ, ಮಮತಾ ಬ್ಯಾನರ್ಜಿ ಅವರ ಜನಪ್ರಿಯತೆ ಇನ್ನೂ ಕುಗ್ಗಿಲ್ಲ ಮತ್ತು ಅವರು ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ. ಬಿಜೆಪಿ ನೂರರ ಗಡಿಯಲ್ಲೇ ತೃಪ್ತಿಪಡಬೇಕಾಗಬಹುದು.
ಚಾಣಕ್ಯ ಕೂಡ ಬಿಜೆಪಿ ಸರಳವಾಗಿ ಅಧಿಕಾರ ಪಡೆಯುವ ಮುನ್ಸೂಚನೆ ನೀಡಿದ್ದು, ಅಧಿಕಾರಕ್ಕಾಗಿ ಟಿಎಂಸಿ ಕೂಡ ಪ್ರಬಲ ಪೈಪೋಟಿ ನೀಡಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.
ಬಹುತೇಕ ಎಕ್ಸಿಟ್ ಪೋಲ್‌ಗಳು (ಪಿ-ಮಾರ್ಕ್, ಮ್ಯಾಟ್ರಿಜ್ ಹಾಗೂ ಚಾಣಕ್ಯ ) ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳುತ್ತಿದ್ದರೆ, ಪೀಪಲ್ಸ್ ಪಲ್ಸ್ ಮಾತ್ರ ಟಿಎಂಸಿ ಪರವಾಗಿದೆ. ಹೀಗಾಗಿ, ಬಂಗಾಳದ ನಿಜವಾದ 'ಮತ'ದಾರ ಪ್ರಭು ಯಾರಿಗೆ ಜೈ ಎಂದಿದ್ದಾನೆ ಎಂಬುದು ಮೇ 4ರ ಮತ ಎಣಿಕೆಯ ದಿನದಂದೇ ಸ್ಪಷ್ಟವಾಗಲಿದೆ. ಅಲ್ಲಿಯವರೆಗೆ ಈ ಎಕ್ಸಿಟ್ ಪೋಲ್ ಹೈಡ್ರಾಮಾ ಮುಂದುವರಿಯಲಿದೆ.
ಸೂಚನೆ: ಎಕ್ಸಿಟ್ ಪೋಲ್‌ಗಳು ತಮ್ಮ ಮತ ಚಲಾಯಿಸಿದ ನಂತರ ಪೋಲಿಂಗ್ ಬೂತ್‌ಗಳಿಂದ ಹೊರಬಂದ ಜನರ ನಡುವೆ ನಡೆಸಿದ ಸಮೀಕ್ಷೆಗಳನ್ನು ಆಧರಿಸಿವೆ. ಎಕ್ಸಿಟ್ ಪೋಲ್‌ಗಳು ಮತದಾರರ ಒಲವನ್ನು ಊಹಿಸುವ ಗುರಿಯನ್ನು ಹೊಂದಿವೆ, ಆದರೆ ಅವುಗಳ ಮುನ್ಸೂಚನೆಗಳು ತಪ್ಪಾಗುವ ಸಾಧ್ಯತೆಯೂ ಇರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ