
ಕೋಲ್ಕತ್ತಾ: ಇಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತನಾಗಿರುವ ಸಂದೇಶ್‌ಖಾಲಿ ಗಲಭೆ ಪ್ರಕರಣದ ಆರೋಪಿ ಟಿಎಂಸಿಯ ಉಚ್ಚಾಟಿತ ನಾಯಕ ಶೇಖ್ ಶಹಾಜಹಾನ್ ಹೆಂಡ್ತಿ ಮಗಳನ್ನು ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬೇಕಾಗಿದ್ದ ಶೇಖ್ ಶಹಜಾಹಾನ್ 55 ದಿನಗಳ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು, ಕಳೆದ ಫೆಬ್ರವರಿ 29 ರಂದು ಕೋಲ್ಕತ್ತಾ ಪೊಲೀಸರು ಕಡೆಗೂ ಆತನನ್ನು ಬಂಧಿಸಿದ್ದರು. ಪ್ರಸ್ತುತ ಶಹಜಾಹಾನ್ ಸಿಬಿಐ ಕಸ್ಟಡಿಯಲ್ಲಿ ಇದ್ದು, ಬಶಿರ್‌ಹತ್ ವಿಭಾಗೀಯ ನ್ಯಾ
ಸಂದೇಶ್‌ಖಾಲಿ ಕೇಸ್, ಶಹಜಹಾನ್‌ನನ್ನು ಸಿಬಿಐಗೆ ಒಪ್ಪಿಸಲು ನಿರಾಕರಿಸಿದ ಪಶ್ಚಿಮ ಬಂಗಾಳ ಸರ್ಕಾರ!
ಪ್ರಾರಂಭದಲ್ಲಿ ಸಿಐಡಿ ಈ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಆದರೆ ನಂತರದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಈಗ ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿದೆ.
ಬಹುಕೋಟಿ ಮೊತ್ತದ ಅಕ್ರಮ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 5 ರಂದು ಶಹಜಹಾನ್ ಶೇಕ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿಗೆ ತೆರಳಿದಾಗ ಅಲ್ಲಿ ಅಧಿಕಾರಿಗಳ ಮೇಲೆ ಈತನ ಬೆಂಬಲಿಗರ ಗುಂಪೊಂದು ದಾಳಿ ನಡೆಸಿತ್ತು. ಈ ಜನವರಿ 5ರ ಘಟನೆಯ ನಂತರ ಶಹಜಾಹಾನ್ ವಿರುದ್ಧ ಗ್ರಾಮದ ಜನ ನಡೆಸಿದ ಪ್ರತಿಭಟನೆ ಹಿಂಸಾರೂಪ ತಾಳಿದ್ದಲ್ಲದೇ ಕೆಲ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದಾದ ನಂತರ ಶಹಜಾಹಾನ್ ತಲೆ ಮರೆಸಿಕೊಂಡಿದ್ದ.
ಈಗ ಈ ಪ್ರಕರಣದ ಆರೋಪಿ ಶಹಜಾಹಾನ್ ಹೆಂಡ್ತಿ ಮಗಳನ್ನು ನೋಡಿ ಅಳ್ತಿರುವ ವೀಡಿಯೋ ವೈರಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟಿಎಂಸಿಯ ಉಚ್ಚಾಟಿತ ನಾಯಕನ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮಮತಾ ಬ್ಯಾನರ್ಜಿಯವರ ಬೂಸ್ಟರ್ ಬಾಯ್ ಶಹಜಾಹಾನ್ ಸಮಾಧಾನಗೊಳ್ಳದ ಮಗುವಿನಂತೆ ಅಳುತ್ತಿದ್ದಾರೆ ಎಂದು ಛೇಡಿಸಿದ್ದಾರೆ. ವೈರಲ್ ಆಗಿರುವ ವೀಡಿಯೋದಲ್ಲಿ ಶೇಖ್ ಶಹಜಾಹಾನ್ ಪೊಲೀಸ್ ವ್ಯಾನ್‌ನಲ್ಲಿ ಕುಳಿತು ಅಳುತ್ತಿರುವುದು ಕಾಣಿಸುತ್ತಿದೆ.
ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಬಂಗಾಳ ಸರ್ಕಾರ, 56 ದಿನ ಬಳಿಕ ಶಹಜಹಾನ್ ಬಂಧನ!
ಶೇಖ್ ಶಹಜಹಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ₹ 12.78 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿರುವುದಾಗಿ ಇಡಿ ಈಗಾಗಲೇ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ