ಮುರ್ಷಿದಾಬಾದ್‌ ಹಿಂಸಾಚಾರದಲ್ಲಿ ಬಾಂಗ್ಲಾ ಒಳನುಸುಳುಕೋರರ ಕೈವಾಡ: ಗೃಹ ಇಲಾಖೆ

Published : Apr 16, 2025, 09:08 AM ISTUpdated : Apr 16, 2025, 09:09 AM IST
ಮುರ್ಷಿದಾಬಾದ್‌ ಹಿಂಸಾಚಾರದಲ್ಲಿ ಬಾಂಗ್ಲಾ ಒಳನುಸುಳುಕೋರರ ಕೈವಾಡ: ಗೃಹ ಇಲಾಖೆ

ಸಾರಾಂಶ

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲ ದಿನಗಳಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾಂಗ್ಲಾದೇಶದ ನುಸುಳುಕೋರರು ಕಾರಣ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಕೋಲ್ಕತಾ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲ ದಿನಗಳಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾಂಗ್ಲಾದೇಶದ ನುಸುಳುಕೋರರು ಕಾರಣ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಂಗಾಳದಲ್ಲಿನ ಹಿಂಸಾಚಾರದ ಕುರಿತು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಹಿಂಸಾಚಾರಕ್ಕೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿರುವವರ ಕೈವಾಡವಿದೆ. ಬಾಂಗ್ಲಾದೇಶದೊಂದಿಗೆ ಗಡಿ ಹೊಂದಿರುವ ಮುರ್ಷಿದಾಬಾದ್‌ನಲ್ಲಿ ನುಸುಳುಕೋರರಿಗೆ ಸ್ಥಳೀಯ ಟಿಎಂಸಿ ನಾಯಕರು ಬೆಂಬಲ ಕೊಟ್ಟಿದ್ದಾರೆ. ಅದರಿಂದ ಹಿಂಸೆ ಪ್ರತಿಕೂಲಕ್ಕೆ ತಿರುಗಿದೆ. ಒಳನಸುಳುವಿಕೆ ತಡೆಯುವಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೂರ್ಣ ವಿಫಲವಾಗಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿವೆ.

ಮೈಮೇಲಿರುವ ಬಟ್ಟೆ ಬಿಟ್ಟರೆ ಬೇರೇನೂ ಉಳಿದಿಲ್ಲ: ಮುರ್ಷಿದಾಬಾದ್ ವಕ್ಫ್‌ ಹಿಂಸಾಚಾರ ಸಂತ್ರಸ್ತರ ಗೋಳು

ಏ.12ರಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಒಟ್ಟು 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. 210 ಉದ್ರಿಕ್ತರನ್ನು ಪೊಲೀಸರು ಬಂಧಿಸಿದ್ದಾರೆ. ದೇಶದಲ್ಲಿ ಉತ್ತರ ಪ್ರದೇಶ ಹೊರತುಪಡಿಸಿದರೆ ಅತಿ ಹೆಚ್ಚು ವಕ್ಫ್‌ ಆಸ್ತಿ ಇರುವ ರಾಜ್ಯ ಬಂಗಾಳ. ಯುಪಿಯಲ್ಲಿ 2.2 ಲಕ್ಷ ವಕ್ಫ್‌ ಆಸ್ತಿ ಇದ್ದರೆ, ಬಂಗಾಳದಲ್ಲಿ 80480 ವಕ್ಫ್‌ ಆಸ್ತಿಗಳಿವೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಮೂವರನ್ನು ಬಲಿಪಡೆದ ಬೆನ್ನಲ್ಲೇ, ನೆರೆಯ ದಕ್ಷಿಣ 24 ಪರಗಣ ಜಿಲ್ಲೆಯಲ್ಲೂ ಸೋಮವಾರ ಹಿಂಸಾಚಾರ ಭುಗಿಲೆದ್ದಿತ್ತು. ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್‌ನಲ್ಲಿ ವಕ್ಫ್ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ, ಭಾರತೀಯ ಜಾತ್ಯತೀತ ರಂಗ (ಐಎಸ್‌ಎಫ್) ಪಕ್ಷದ ಬೆಂಬಲಿಗರು ಭಾರೀ ಹಿಂಸಾಚಾರ ನಡೆಸಿದ್ದಾರೆ. ಈ ವೇಳೆ ಹಲವು ಪೊಲೀಸ್ ವಾಹನಗಳನ್ನು ಸುಟ್ಟುಹಾಕಿದ್ದು, ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 7 ಪೊಲೀಸರು ಗಾಯಗೊಂಡಿದ್ದಾರೆ.

ಆಗಿದ್ದೇನು?:
ಕೋಲ್ಕತಾದ ರಾಮಲೀಲಾ ಮೈದಾನದಲ್ಲಿ ವಕ್ಫ್ ವಿರೋಧಿ ರ್‍ಯಾಲಿ ಆಯೋಜನೆಗೊಂಡಿತ್ತು. ಭಾಂಗರ್ ಶಾಸಕ ನೌಶಾದ್ ಸಿದ್ದಿಕ್ರ್‍ ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದರು. ಭಾಂಗರ್, ಮಿನಾಖಾನ್ ಮತ್ತು ಸಂದೇಶಖಾಲಿಯಿಂದ ಬಂದ ಐಎಸ್‌ಎಫ್ ಬೆಂಬಲಿಗರ ದೊಡ್ಡ ಗುಂಪು ರ್‍ಯಾಲಿಗೆ ತೆರಳಲಿತ್ತು. ಆದರೆ ರ್‍ಯಾಲಿಗೆ ಪೊಲೀಸ್ ಅನುಮತಿ ಇಲ್ಲದ ಕಾರಣ ಅವರನ್ನು ಬಸಂತಿ ಹೆದ್ದಾರಿಯಲ್ಲಿ ಪೊಲೀಸರು ತಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಿಡಿಗೇಡಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.

ವಕ್ಫ್ ಹಿಂಸೆಗೆ ಜೀವ ಉಳಿಸಿಕೊಳ್ಳಲು ಮನೆ-ಮಠ ಬಿಟ್ಟ 400 ಹಿಂದೂಗಳು; ಬಂಗಾಳದ ನೋವಿನ ಕಥೆಗಳು 

ಬಿಎಸ್‌ಎಫ್ ನಿಯೋಗ ಭೇಟಿ:
ಈ ನಡುವೆ ಮುರ್ಷಿದಾಬಾದ್ ಜಿಲ್ಲೆಯ ಹಿಂಸಾಚಾರಪೀಡಿತ ಪ್ರದೇಶಗಳಿಗೆ ಸೋಮವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ಭೇಟಿ ನೀಡಿದರು. ಹೆಚ್ಚುವರಿ ಮಹಾನಿರ್ದೇಶಕ ರವಿ ಗಾಂಧಿ ನೇತೃತ್ವದ ಬಿಎಸ್‌ಎಫ್ ನಿಯೋಗ, ಹೆಚ್ಚು ಗಲಭೆಪೀಡಿತ ಪ್ರದೇಶಗಳಾದ ಸುತಿ, ಸಮ್ಸರ್‌ಗಂಜ್ ಮತ್ತು ಧುಲಿಯನ್‌ಗಳಿಗೆ ಭೇಟಿ ನೀಡಿ, ಶಾಂತಿ ಪುನಸ್ಥಾಪನೆ ಮತ್ತು ನಾಗರಿಕರ ಸುರಕ್ಷತೆಯ ಭರವಸೆ ನೀಡಿತು.
 

ವಕ್ಫ್ ಆಸ್ತಿ ಮೇಲೆ ಕಣ್ಣಿಟ್ಟವರ ಕಣ್ಣು ಕೀಳಿ: ಟಿಎಂಸಿ ಸಂಸದ 
ಕೋಲ್ಕತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಭಾರೀ ಹಿಂಸಾಚಾರ ನಡೆಯುತ್ತಿರುವ ಮಧ್ಯೆಯೇ ಟಿಎಂಸಿ ಸಂಸದರೊಬ್ಬರು ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡಿದ ಮಥುರಾಪುರ ಕ್ಷೇತ್ರದ ಟಿಎಂಸಿ ಸಂಸದ ಬಾಪಿ ಹಲಧರ್, ‘ವಕ್ಫ್ ಆಸ್ತಿ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಅದು ಒಂದು ಸಮುದಾಯಕ್ಕೆ ಸೇರಿದ ಆಸ್ತಿ. ನಿಮ್ಮ ತಂದೆ, ತಾತನ ಸಮಾಧಿಯನ್ನು ರಕ್ಷಿಸುವ ಹೊಣೆ ನಿಮ್ಮದು ಮಾತ್ರವಲ್ಲ; ನಮ್ಮದೂ ಹೌದು. ಯಾರಾದರೂ ವಕ್ಫ್ ಆಸ್ತಿಯ ಮೇಲೆ ಕಣ್ಣು ಹಾಕಿದರೆ ಅವರ ಕಣ್ಣುಗುಡ್ಡೆಗಳನ್ನು ಕೀಳಿ, ಕೈಕಾಲುಗಳನ್ನು ಮುರಿಯಿರಿ’ ಎಂದಿದ್ದಾರೆ.

ಈ ವಿಡಿಯೋವನ್ನು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಬಾಪಿ ಹಲಧರ್, ಕಣ್ಣುಗಳನ್ನು ಕಿತ್ತು, ಕೈಕಾಲುಗಳನ್ನು ಮುರಿಯುವುದಾಗಿ ಭೀಕರ ಬೆದರಿಕೆ ಹಾಕಿದ್ದಾರೆ. ಮುರ್ಷಿದಾಬಾದ್‌ನ ಅಸಹಾಯಕ, ಮುಗ್ಧ ಹಿಂದೂಗಳ ವಿರುದ್ಧ ಹಿಂಸಾಚಾರವನ್ನು ನೇರವಾಗಿ ಪ್ರಚೋದಿಸಿದ್ದಾರೆ. ಆದರೆ ದುರ್ಬಲ, ಹೇಡಿ ರಾಜ್ಯ ಪೊಲೀಸರು ಈ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ