
ಚೆನ್ನೈ (ಫೆ.11): ಕರ್ನಾಟಕದಲ್ಲಿ (Karnataka) ಹಿಜಾಬ್ (Hijab) ಹಾಗೂ ಕೇಸರಿ ಶಾಲು ವಿವಾದ ಎದ್ದಿರುವ ನಡುವೆಯೇ ‘ದೇಶ ಮುಖ್ಯವೋ, ಧರ್ಮ ಮುಖ್ಯವೋ’ ಎಂದು ಮದ್ರಾಸ್ ಹೈಕೋರ್ಟ್ (Madras High Court) ಅಚ್ಚರಿ ವ್ಯಕ್ತಪಡಿಸಿದೆ. ದೇಶದಲ್ಲಿ ಇತ್ತೀಚೆಗೆ ಧಾರ್ಮಿಕ ಅಸಹಿಷ್ಣುತೆ ಹೆಚ್ಚುತ್ತಿದೆ. ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಯತ್ನ ನಡೆಯುತ್ತಿದೆ ಎಂದು ಅದು ಕಿಡಿಕಾರಿದೆ.
ತಮಿಳುನಾಡಿನ (Tamil Nadu) ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು. ಹಿಂದೂಯೇತರರಿಗೆ ದೇವಾಲಯಗಳಲ್ಲಿ ಪ್ರವೇಶ ನೀಡಬಾರದು. ವಸ್ತ್ರಸಂಹಿತೆ ಬಗ್ಗೆ ದೇಗುಲದ ಹೊರಗಿನ ಫಲಕಗಳ ಮೇಲೆ ಬರೆಯುವಂತೆ ಆದೇಶಿಸಬೇಕು ಎಂದು ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ ಎಂ.ಎನ್.ಭಂಡಾರಿ ಹಾಗೂ ನ್ಯಾ ಡಿ.ಭರತ ಚಕ್ರವರ್ತಿ ಅವರು ಈ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.
‘ಕೆಲವರು ಹಿಜಾಬ್ ಬೇಕು ಎನ್ನುತ್ತಾರೆ, ಕೆಲವರು ಟೋಪಿ ಬೇಕೆನ್ನುತ್ತಾರೆ. ಇನ್ನು ಕೆಲವರು ಇನ್ನೇನೋ ಕೇಳುತ್ತಾರೆ. ಇದು ಒಂದು ದೇಶವೇ? ಧರ್ಮದ ಆಧಾರದಲ್ಲಿ ಒಡೆದ ದೇಶವೇ ಎಂಬ ಸಂದೇಹ ಬರುತ್ತಿದೆ. ಇದು ಅಚ್ಚರಿ’ ಎಂದರು. ‘ಭಾರತ ಒಂದು ಜಾತ್ಯತೀತ ದೇಶ. ಆದರೆ ಈಗಿನ ವಿದ್ಯಮಾನ ನೋಡಿದರೆ ದೇಶವನ್ನು ಧರ್ಮದ ಹೆಸರಿನಲ್ಲಿ ವಿಭಜಿಸುವ ಯತ್ನ ನಡೆದಿದೆ ಎಂಬುದು ವೇದ್ಯವಾಗುತ್ತದೆ’ ಎಂದು ಕಿಡಿಕಾರಿತು.
Madras High Court: ವರ್ಚುವಲ್ ವಿಚಾರಣೆ ವೇಳೆ ಮಹಿಳೆ ಜೊತೆ ಅಶ್ಲೀಲ ಭಂಗಿ, ವಕೀಲ ಸಸ್ಪೆಂಡ್!
ಇನ್ನು ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಬೇಕೆಂಬ ಅರ್ಜಿದಾರರ ಮನವಿಗೆ ಪ್ರತಿಕ್ರಿಯಿಸಿದ ಪೀಠ, ‘ವಸ್ತ್ರ ಸಂಹಿತೆ ಎಂಬುದು ಇಲ್ಲ. ಯಾವ ಆಧಾರದಲ್ಲಿ ನಾವು ಆದೇಶ ನೀಡಬೇಕು? ಯಾವ ಅಗಮಗಳಲ್ಲಿ, ‘ದೇಗುಲ ಪ್ರವೇಶಿಸುವವರು ಪ್ಯಾಂಟ್ ಹಾಗೂ ಅಂಗಿ ಹಾಕಬಾರದು? ಧೋತಿ ಮಾತ್ರ ಧರಿಸಬೇಕು’ ಎಂದು ಬರೆಯಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿ’ ಎಂದು ಹೇಳಿ ವಿಚಾರಣೆ ಮುಂದೂಡಿತು. ಸರ್ಕಾರಿ ವಕೀಲರು ವಾದ ಮಂಡಿಸಿ, ‘ಹಿಂದೂಯೇತರರಿಗೆ ಗರ್ಭಗುಡಿಗೆ ಪ್ರವೇಶವಿಲ್ಲ. ಧ್ವಜಸ್ತಂಭದವರೆಗೆ ಅನುಮತಿ ಇದೆ ಎಂಬ ನಿಯಮ ಈಗಾಗಲೇ ಇದೆ’ ಎಂದು ಸ್ಪಷ್ಟಪಡಿಸಿದರು.
ಹಿಜಾಬ್-ಕೇಸರಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ (Hijab Row) ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್(Karnataka high Court ) ಬ್ರೇಕ್ ಹಾಕಿದೆ. ಹೌದು..ತೀವ್ರ ಕುತೂಹಲ ಮೂಡಿಸಿದ್ದ ಹಿಜಾಬ್ ಸಂಘರ್ಷ ಪ್ರಕರಣ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು (ಗುರುವಾರ) ಮಧ್ಯಂತರ ಆದೇಶ ಹೊರಡಿಸಿದ್ದು, ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಆದೇಶ ನೀಡಿದೆ.ಅಲ್ಲದೇ ತಕ್ಷಣವೇ ಶಾಲೆ-ಕಾಲೇಜು ಪ್ರಾರಂಭಿಸಿ ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಸ್ತೃತ ಪೀಠ ಈ ಮಧ್ಯಂತರ ಆದೇಶ ನೀಡಿದೆ. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳು ಶೀಘ್ರ ಆರಂಭವಾಗಬೇಕು. ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ. ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ ಶಾಲೆಗಳಿಗೆ ಹೋಗುವಂತಿಲ್ಲ ಎಂದು ನ್ಯಾಯಾಲಯವು ಮೌಖಿಕ ಆದೇಶದಲ್ಲಿ ತಿಳಿಸಿ ಪ್ರಕರಣವನ್ನು ಸೋಮವಾರಕ್ಕೆ (ಫೆ.15) ಮುಂದೂಡಿದೆ. ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದು ಕೋರ್ಟ್ ಹೇಳಿದೆ.
Hijab Controversy ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆಯ ಎಲ್ಲಾ 150 ಶಾಲಾ ಕಾಲೇಜಿನಲ್ಲಿ ಹಿಬಾಜ್ ಬ್ಯಾನ್!
ನ್ಯಾಯಪೀಠವು ನಾವು ತಡೆಯಾಜ್ಞೆ ನೀಡಲು ಬಯಸಿದ್ದೇವೆ ಎಂದು ಹೇಳಿದಾಗ ಅರ್ಜಿದಾರರ ಪರ ವಕೀಲರಾದ ದೇವದತ್ತ ಕಾಮತ್, ಹಿಜಾಬ್ ಧರಿಸದೇ ಕಾಲೇಜಿಗೆ ಬರಲು ಆದೇಶಿಸುವುದು ತಾತ್ಕಾಲಿಕವಾಗಿ ಧಾರ್ಮಿಕ ಸ್ವಾತಂತ್ರ್ಯವನ್ನೇ ಅಮಾನತ್ತಿನಲ್ಲಿಟ್ಟಂತಾಗುತ್ತದೆ ಎಂದು ವಾದಿಸಿದರು. ಕೆಲವು ದಿನಗಳಿಗೋಸ್ಕರ, ದಯವಿಟ್ಟು ಸಹಕರಿಸಿ ಎಂದು ನ್ಯಾಯಪೀಠವು ಹೇಳಿದಾಗ, ನ್ಯಾಯವಾದಿ ಕಾಮತ್, ಇವು ನಮ್ಮ ಅವಶ್ಯಕ ಹಕ್ಕುಗಳು ನಮಗೆ ನೀರು ಅಥವಾ ಅನ್ನ ಎಂಬ ಆಯ್ಕೆ ನೀಡುವುದು ಸರಿಯಲ್ಲ, ಶಿಕ್ಷಣ ಮತ್ತು ಹಿಜಾಬ್ ಎರಡೂ ನಮಗೆ ಅವಶ್ಯಕ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ