370 ರದ್ದತಿಗೂ ಮೊದಲು ಮೋದಿ ತೆಗೆದುಕೊಂಡಿದ್ದ ರಿಸ್ಕ್ ಎಂಥದ್ದು? ಕುತೂಹಲಕರ ಸಂಗತಿ ಬೆಳಕಿಗೆ

By Kannadaprabha NewsFirst Published Feb 12, 2024, 11:36 AM IST
Highlights

2019ರಲ್ಲಿ ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ರಹಸ್ಯವಾಗಿ ರಾಷ್ಟ್ರಪತಿಗಳನ್ನು ಖುದ್ದಾಗಿ ಭೇಟಿಯಾಗಿದ್ದರು ಹಾಗೂ ಯಾವುದೇ ಬೆಂಗಾವಲು ವಾಹನವಿಲ್ಲದೆ ಏಕಾಂಗಿಯಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು ಎಂಬ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ.

ನವದೆಹಲಿ: 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ರಹಸ್ಯವಾಗಿ ರಾಷ್ಟ್ರಪತಿಗಳನ್ನು ಖುದ್ದಾಗಿ ಭೇಟಿಯಾಗಿದ್ದರು ಹಾಗೂ ಯಾವುದೇ ಬೆಂಗಾವಲು ವಾಹನವಿಲ್ಲದೆ ಏಕಾಂಗಿಯಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು ಎಂಬ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ.

2019ರ ಆ.4ರ ಸಂಜೆ ಮೋದಿಯವರು ತಮಗಿದ್ದ ಕಡ್ಡಾಯ ಭದ್ರತೆಯನ್ನು ತ್ಯಜಿಸಿ ಏಕಾಂಗಿಯಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿ ಅಂದಿನ ರಾಷ್ಟ್ರಪತಿ ರಾಮನಾಥ್‌ ಕೋವಿಂದ ಅವರನ್ನು ಭೇಟಿಯಾಗಿದ್ದರು. ಆ ಭೇಟಿಯಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವುದರ ಅಗತ್ಯವನ್ನು ಸ್ವತಃ ತಾವೇ ವಿವರಿಸಿದ್ದರು. 370ನೇ ಪರಿಚ್ಛೇದ ರದ್ದುಪಡಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದ ವಿಪಕ್ಷಗಳಿಗೆ ಈ ಕುರಿತ ಸಿದ್ಧತೆಯ ಬಗ್ಗೆ ಮಾಹಿತಿ ತಿಳಿಯದಂತೆ ರಹಸ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿದ್ದರು ಎಂದು ಹೇಳಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌: ಮೋದಿ ಸರ್ಕಾರಕ್ಕೆ ಜಯ

ನಂತರ ಬಿಜೆಪಿ ನೇತೃತ್ವದ ಎನ್‌ಡಿಎಗೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದಿದ್ದರೂ ರಿಸ್ಕ್‌ ತೆಗೆದುಕೊಂಡು ಜಮ್ಮು ಕಾಶ್ಮೀರ ಮರುವಿಂಗಡಣೆ ಮಸೂದೆ-2019ನ್ನು ಲೋಕಸಭೆಯ ಬದಲು ರಾಜ್ಯಸಭೆಯಲ್ಲೇ ಮೊದಲು ಆ.5ರಂದು ಮಂಡಿಸಲಾಗಿತ್ತು. ಲೋಕಸಭೆಯಲ್ಲಿ ಮೊದಲು ಮಂಡಿಸಿದ್ದರೆ ವಿಪಕ್ಷಗಳು ಎಚ್ಚೆತ್ತುಕೊಂಡು ನಂತರ ರಾಜ್ಯಸಭೆಯಲ್ಲಿ ಅದು ಪಾಸಾಗದಂತೆ ನೋಡಿಕೊಳ್ಳುವ ಅಪಾಯವಿತ್ತು. ಹೀಗಾಗಿ ಮೊದಲು ರಾಜ್ಯಸಭೆಯಲ್ಲಿ ಅಂಗೀಕರಿಸಿಕೊಂಡು, ನಂತರ ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿತ್ತು ಎಂದು ತಿಳಿದುಬಂದಿದೆ.

ಇಂದು 1 ಲಕ್ಷ ಜನರಿಗೆ ಉದ್ಯೋಗ ನೇಮಕ ಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ರೋಜ್‌ಗಾರ್‌ ಮೇಳ ಯೋಜನೆಯಡಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ 1 ಲಕ್ಷ ಜನರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ. 1 ಲಕ್ಷ ನೇಮಕ ಪತ್ರ ವಿತರಣೆ ಈವರೆಗಿನ ಅತಿ ಗರಿಷ್ಠವಾಗಿದೆ. ಈ ಹಿಂದೆ ಸುಮಾರು 70 ಸಾವಿರ ಜನರಿಗೆ ನೇಮಕ ಪತ್ರ ನೀಡಲಾಗಿತ್ತು. ಇದರೊಂದಿಗೆ ಸೋಮವಾರ ನೀಡಲಾಗುವ 1 ಲಕ್ಷ ನೇಮಕ ಪತ್ರವೂ ಸೇರಿದಂತೆ ಅಕ್ಟೋಬರ್‌ 2022ರ ಬಳಿಕ ಒಟ್ಟು 8 ರೋಜ್‌ಗಾರ್‌ ಮೇಳಗಳಲ್ಲಿ ಒಟ್ಟು 8 ಲಕ್ಷ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ.

ಜೆಕೆಗೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ

ಸೋಮವಾರ ಬೆಳಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಲಿದ್ದಾರೆ. ಇದೇ ವೇಳೆ ಏಕಕಾಲಕ್ಕೆ ದೇಶದ 47 ಸ್ಥಳಗಳಲ್ಲಿ ನೇಮಕ ಪತ್ರ ವಿತರಣೆ ಕಾರ್ಯಕ್ರಮ ಆಯೋಜನೆಗೊಂಡಿದವೆ. ಕಂದಾಯ, ಗೃಹ, ಅಣುಶಕ್ತಿ, ಉನ್ನತ ಶಿಕ್ಷಣ, ಹಣಕಾಸು, ರಕ್ಷಣೆ, ರೈಲ್ವೆ ಮುಂತಾದ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಪಡೆದವರಿಗೆ ಈ ಸಾಲಿನ ಕಡೆಯ ರೋಜ್‌ಗಾರ್‌ ಮೇಳ ನಡೆಯಲಿದೆ.

 

click me!