ಬಳಕೆದಾರರ ಖಾಸಗಿತನ ನಿಯಮಾವಳಿಗಳ ಪರಿಷ್ಕರಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಿಕೊಳ್ಳುವಂತೆ ವಾಟ್ಸಾಪ್ ಸಂಸ್ಥೆಗೆ ಸೂಚನೆ| ಲೋಕಸಭೆ ಕಲಾಪದಲ್ಲಿ ಉತ್ತರಿಸಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ರಾಜ್ಯ ಸಚಿವರ ಸಂಜಯ್ ಧೋತ್ರೆ
ನವದೆಹಲಿ(ಮಾ.18): ಬಳಕೆದಾರರ ಖಾಸಗಿತನ ನಿಯಮಾವಳಿಗಳ ಪರಿಷ್ಕರಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಿಕೊಳ್ಳುವಂತೆ ವಾಟ್ಸಾಪ್ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಈ ಬಗ್ಗೆ ಬುಧವಾರ ಲೋಕಸಭೆ ಕಲಾಪದಲ್ಲಿ ಉತ್ತರಿಸಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ರಾಜ್ಯ ಸಚಿವರ ಸಂಜಯ್ ಧೋತ್ರೆ, ‘ಭಾರತ ಸೇರಿದಂತೆ ಇನ್ನಿತರ ದೇಶಗಳಲ್ಲಿ ತನ್ನ ಬಳಕೆದಾರರ ಮಾಹಿತಿಗಳನ್ನು ತನ್ನ ಮಾಲಿಕತ್ವದ ಫೇಸ್ಬುಕ್ನೊಂದಿಗೆ ಹಂಚಿಕೊಳ್ಳಬೇಕೆಂಬ ವಾಟ್ಸಾಪ್ ಪ್ರಸ್ತಾವನೆಯನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಭಾರತೀಯರ ಹಿತಾಸಕ್ತಿ ರಕ್ಷಣೆಗಾಗಿ ಈ ಕುರಿತಾದ ಪ್ರಸ್ತಾವನೆ ಪರಿಶೀಲನೆ ಮತ್ತು ತನ್ನ ತೀರ್ಮಾನವು ನ್ಯಾಯಸಮ್ಮತವಾದದ್ದು ಎಂಬುದನ್ನು ವಿವರಿಸುವಂತೆ ವಾಟ್ಸಾಪ್ಗೆ ನಿರ್ದೇಶಿಸಲಾಗಿದೆ’ ಎಂದು ಹೇಳಿದ್ದಾರೆ.
undefined
ಫೇಸ್ಬುಕ್ನಲ್ಲಿ ನಕಲಿ ಖಾತೆ : ನಂಬಿಸಿ ಲಕ್ಷಾಂತರ ಹಣ ಪಡೆದು ಹಲವರ ವಂಚಿಸುತ್ತಿದ್ದ ಯುವತಿ ಬಂಧನ
ವಾಟ್ಸಾಪ್ ಬಳಕೆದಾರರ ಮಾಹಿತಿಗಳನ್ನು ತನ್ನ ಮಾಲಿಕತ್ವದ ಫೇಸ್ಬುಕ್ನೊಂದಿಗೆ ಹಂಚಿಕೊಳ್ಳಬೇಕೆಂಬ ನೂತನ ನಿಯಮಾವಳಿಗಳಿಗೆ ಮಾ.15ರ ಒಳಗಾಗಿ ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ, ವಾಟ್ಸಾಪ್ ಸೇವೆ ಲಭ್ಯವಿರುವುದಿಲ್ಲ ಎಂದು ವಾಟ್ಸಾಪ್ ಹೇಳಿತ್ತು. ಇದಕ್ಕೆ ಭಾರತ ಸೇರಿದಂತೆ ವಿಶ್ವಾದ್ಯಂತ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.