
ನ್ಯೂಯಾರ್ಕ್(ಸೆ.28): ಅಭಿವೃದ್ಧಿ ಪಡಿಸುವ ಕೊರೋನಾ ಲಸಿಕೆ ಉತ್ಪಾದನೆ ಹಾಗೂ ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೋರಿರುವ ಬದ್ಧತೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಶನಿವಾರ ವಿಶ್ವಸಂಸ್ಥೆಯ 75ನೇ ಸಾಮಾನ್ಯ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಪ್ರಧಾನಿ, ಭಾರತದ ಲಸಿಕೆ ಉತ್ಪಾದನೆ ಹಾಗೂ ಹಂಚಿಕೆ ಸಾಮರ್ಥ್ಯವನ್ನು ಈ ಸಂಕಷ್ಟದ ಸಮಯದಲ್ಲಿ ಮನುಕುಲದ ಒಳಿತಿಗಾಗಿ ಬಳಕೆ ಮಾಡುತ್ತೇವೆ. ಇದು ವಿಶ್ವದಲ್ಲಿ ಅತೀ ಹೆಚ್ಚು ಲಸಿಕೆ ಉತ್ಪಾದನಾ ಸಾಮರ್ಥ್ಯವುಳ್ಳ ದೇಶದ ಪ್ರಧಾನಿಯಾಗಿ ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದರು.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೋಮ್ ಗೇಬ್ರಿಯೇಸಸ್, ನಿಮ್ಮ ಬದ್ಧತೆಗೆ ಧನ್ಯವಾದಗಳು. ಒಳ್ಳೆಯ ಕಾರಣಕ್ಕೆ ನಮ್ಮ ಶಕ್ತಿ ಹಾಗೂ ಸಂಪನ್ಮೂಲವನ್ನು ಒಟ್ಟಿಗೆ ಬಳಕೆ ಮಾಡಿದರೆ ಮಾತ್ರ ಕೋವಿಡ್-19 ನಿಂದ ಗೆಲ್ಲಬಹುದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ