Arun Binnadi: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ, 2019 ರಲ್ಲಿ ಖರ್ಗೆ ಸೋಲಿಗೆ ಶ್ರಮಿಸಿದ್ದ ಚಿಕ್ಕಮಗಳೂರಿನ ಕನ್ನಡಿಗ ಯಾರು?

Kannadaprabha News   | Kannada Prabha
Published : May 07, 2026, 05:28 AM IST
Who is Arun Binnadi Meet the Chikkamagaluru strategist behind BJPs West Bengal win

ಸಾರಾಂಶ

Chikkamagaluru Arun Binnadi: ಚಿಕ್ಕಮಗಳೂರಿನ ಇಂಜಿನಿಯರ್ ಅರುಣ್ ಬಿನ್ನಡಿ ಅವರು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ತೆರೆಮರೆಯಲ್ಲಿ ಶ್ರಮಿಸಿದ್ದಾರೆ. ಸಿಲಿಗುರಿ ವಲಯದ ಉಸ್ತುವಾರಿಯಾಗಿ, ಅವರು ತಳಮಟ್ಟದಲ್ಲಿ ಪಕ್ಷ ಸಂಘಟಿಸಿ, ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಚಿಕ್ಕಮಗಳೂರು (ಮೇ.7): ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಊಹಿಸಲಾದ್ಯ ರೀತಿಯಲ್ಲಿ ಗೆಲುವು ತನ್ನದಾಗಿಸಿಕೊಂಡ ಬಗ್ಗೆ ಎಲ್ಲರಲ್ಲಿ ಅಚ್ಚರಿ ಮೂಡಿರುವ ಹೊತ್ತಿನಲ್ಲೇ, ಇಂಥದ್ದೊಂದು ಗೆಲುವಿನಲ್ಲಿ ಕನ್ನಡಿಗ ಅರುಣ್‌ ಬಿನ್ನಡಿ ಅವರ ಪಾತ್ರವೂ ಬೆಳಕಿಗೆ ಬಂದಿದೆ. ಕಳೆದ 6 ತಿಂಗಳಿನಿಂದ ಬಂಗಾಳದ ಗುಡ್ಡಗಾಡು ಪ್ರದೇಶಗಳಲ್ಲಿ ಬೀಡುಬಿಟ್ಟು ಅಲ್ಲೇ ಮನೆ ಮನೆ ಸುತ್ತಿ ಪ್ರಚಾರ ಮಾಡಿದ ತಂಡದ ಉಸ್ತುವಾರಿಯಾಗಿದ್ದ ಅರುಣ್‌ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ಅರುಣ್ ಬಿನ್ನಡಿಗೆ ಸಿಲಿಗುರಿ ಹೊಣೆ:

ಬಂಗಾಳದ ಚುನಾವಣೆಯಲ್ಲಿ ಅರುಣ್‌ಗೆ ಸಿಲಿಗುರಿ ನಾರ್ತ್ ಜೋನ್ ನ ಸಂಘಟನಾ ಪ್ರಭಾರಿಯಾಗಿ ಹೊಣೆಗಾರಿಕೆ ನೀಡಲಾಗಿತ್ತು. ಬಂಗಾಳದ ಕಠಿಣ ರಾಜಕೀಯ ಪರಿಸ್ಥಿತಿ ಮತ್ತು ಅಡೆತಡೆಗಳ ನಡುವೆಯೂ 6 ತಿಂಗಳು ಕಾಲ ತಮ್ಮ ತಂಡದೊಡಗೂಡಿ ತಳಮಟ್ಟದಲ್ಲಿ ಕೆಲಸ ಮಾಡಿದ ಅರುಣ್‌ ಮನೆ ಮನೆಗೂ ತೆರಳಿ ಪಕ್ಷವನ್ನು ಸಂಘಟಿಸಿದ್ದರು. ಸ್ಥಳೀಯ ಸಮಸ್ಯೆ ಅರಿತು, ಅವುಗಳಿಗೆ ತಕ್ಕಂತೆ ಅರುಣ್‌ ಗೆಲುವಿನ ಮಂತ್ರ ರೂಪಿಸಿದ್ದರು. ಅದು ಇದೀಗ ಉತ್ತಮ ಫಲಿತಾಂಶದ ರೂಪದಲ್ಲಿ ಪ್ರತಿಫಲಿಸಿದೆ.

ಹಿಂದೆಯೂ ಸಂಘಟನೆ:ಅರುಣ್ ಅವರ ಸಾಧನೆ ಕೇವಲ ಬಂಗಾಳಕ್ಕೆ ಸೀಮಿತವಾಗಿಲ್ಲ. 2019ರ ಲೋಕಸಭಾ ಚುನಾವಣೆ ವೇಳೆ ಕಲಬುರಗಿ ಕ್ಷೇತ್ರದಲ್ಲಿನ ಪಕ್ಷದ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಕೆಲಸ ಬಿಟ್ಟು ದೇಶಸೇವೆ:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿನ್ನಡಿ ಗ್ರಾಮದ ಯುವಕ ಅರುಣ್ ಅವರು ವೃತ್ತಿಯಲ್ಲಿ ಪ್ರತಿಭಾವಂತ ಎಂಜಿನಿಯರ್. ಆರಂಭದಲ್ಲಿ ಕೈತುಂಬಾ ಸಂಬಳ ಬರುವ ಖಾಸಗಿ ಕಂಪನಿಯಲ್ಲಿ ಕೆಲಸದಲ್ಲಿದ್ದರು. ಆದರೆ, ದೇಶಸೇವೆ ಮತ್ತು ರಾಷ್ಟ್ರೀಯ ಸಿದ್ಧಾಂತದ ಮೇಲಿದ್ದ ಅತೀವ ಆಸಕ್ತಿಯಿಂದಾಗಿ ಆ ಉದ್ಯೋಗವನ್ನು ತ್ಯಜಿಸಿ, ಸಕ್ರಿಯ ರಾಜಕೀಯ ಸಂಘಟನೆಗೆ ಇಳಿದಿದ್ದರು.

ತವರಲ್ಲಿ ಸನ್ಮಾನ:

ಬಂಗಾಳದ ಯಶಸ್ಸಿನ ಬಳಿಕ ತವರು ಗ್ರಾಮ ಬಿನ್ನಡಿಗೆ ಆಗಮಿಸಿದ ಅರುಣ್ ಅವರನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಬುಧವಾರ ಸನ್ಮಾನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಆರ್ಟ್ ಆಫ್ ಲಿವಿಂಗ್‌'ನ 45ನೇ ವಾರ್ಷಿಕೋತ್ಸವ: ಪ್ರಧಾನಿ ಮೋದಿ ಭಾಷಣದ ಮೇಲೆ ವಿಶ್ವದ ಕಣ್ಣು!
ತಮಿಳುನಾಡಿನಲ್ಲಿ ರಾಜಕೀಯ ಸುನಾಮಿ, ಬದ್ಧವೈರಿಗಳಾದ ಡಿಎಂಕೆ-ಎಐಡಿಎಂಕೆ ನಡುವೆ ಮೈತ್ರಿ?