
ಪಟನಾ: ಎನ್‌ಡಿಎ ಮತ್ತು ಇಂಡಿಯಾ ಕೂಟದ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಬಿಹಾರದಲ್ಲಿ 2ನೆಯ ಹಾಗೂ ಕೊನೆಯ ಹಂತದ ಚುನಾವಣೆ ನ.11ರಂದು ನಡೆಯಲಿದೆ. ಈ ಹಂತದಲ್ಲಿ 122 ಕ್ಷೇತ್ರಗಳಲ್ಲಿ 1302 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತದಾನದ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 4 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ರಾಜ್ಯದಲ್ಲಿ ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದ ಚುನಾಚಣೆ ನಡೆದಿದ್ದು, ಇತಿಹಾಸದಲ್ಲೇ ಅತ್ಯಧಿಕ ಶೇ.65ರಷ್ಟು ಮತದಾನವಾಗಿತ್ತು. ಚುನಾವಣಾ ಫಲಿತಾಂಶವು ನ.14ರಂದು ಪ್ರಕಟವಾಗಲಿದೆ.
ಮತದಾನ ಮುಗಿಯುತ್ತಲೇ ಸಂಜೆ 5 ಗಂಟೆ ಬಳಿಕ ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟವಾಗಲಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ- ಜೆಡಿಯು ಮೈತ್ರಿಯ ಎನ್‌ಡಿಎ ಕೂಟಕ್ಕೆ ಸ್ಪಷ್ಟ ಬಹುಮತದ ಸುಳಿವು ನೀಡಿವೆ. 243 ಕ್ಷೇತ್ರಗಳ ಪೈಕಿ ಎನ್‌ಡಿಎ ಕೂಟವು 153-164 ಸ್ಥಾನಗಳನ್ನು, ಇಂಡಿಯಾ ಕೂಟ (ಮಹಾಘಠಬಂಧನ) 76-87 ಸ್ಥಾನಗಳನ್ನು ಬಾಚಿಕೊಳ್ಳಲಿದೆ ಎಂದು ಐಎಎನ್‌ಎಸ್-ಮ್ಯಾಟ್ರಿಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಹೇಳಿತ್ತು. 243 ಕ್ಷೇತ್ರಗಳಲ್ಲಿ ಆಡಳಿತ ನಡೆಸಲು 122 ಕ್ಷೇತ್ರಗಳ ಬಹುಮತ ಅಗತ್ಯವಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ