
ನವದೆಹಲಿ (ಮೇ.26): ಇತ್ತೀಚೆಗೆ ಆನ್‌ಲೈನ್‌ನಲ್ಲಿ ಭಾರೀ ಸುದ್ದಿ ಮಾಡಿರುವ ಕಾಕ್ರೋಚ್ ಜನತಾ ಪಾರ್ಟಿಯನ್ನು (ಸಿಜೆಪಿ) ಅಷ್ಟೊಂದು ಭಾವನಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.
ಸಿಜೆಪಿ ವಿರುದ್ಧ ಕ್ರಮ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸಿಜೆಐ ಅವರನ್ನೊಳಗೊಂಡ ಪೀಠ, ಅರ್ಜಿದಾರರು ಸಿಜೆಪಿ ಪಕ್ಷವನ್ನು ಅಷ್ಟೊಂದು ಭಾವನಾತ್ಮಕವಾಗಿ ನೋಡುವ ಅವಶ್ಯಕತೆ ಇಲ್ಲ. ಅರ್ಜಿಯ ತುರ್ತುವಿಚಾರಣೆ ಅವಶ್ಯಕತೆಯೂ ಇಲ್ಲ ಎಂದು ಹೇಳಿತು. ಇತ್ತೀಚೆಗೆ ನ್ಯಾ. ಸೂರ್ಯಕಾಂತ್ ನೀಡಿದ್ದ ಹೇಳಿಕೆಯನ್ನೇ ಆಧರಿಸಿ ಆನ್‌ಲೈನ್‌ನಲ್ಲಿ ಸಿಜೆಪಿ ಅಭಿಯಾನ ಆರಂಭವಾಗಿತ್ತು. ಈ ಹೇಳಿಕೆ ಕುರಿತು ಸ್ವತಃ ಸಿಜೆಐ ಸ್ಪಷ್ಟನೆ ನೀಡಿದ ಹೊರತಾಗಿಯೂ ಹೇಳಿಕೆ ದುರ್ಬಳಕೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.
ನಿರುದ್ಯೋಗಿ ಯುವಕರನ್ನು ಜಿರಳೆಗೆ ಹೋಲಿಸಿ ಸಿಜೆಐ ನ್ಯಾ। ಸೂರ್ಯಕಾಂತ್ ಅವರು ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡ ದೀಪ್ಕೆ, ಸೋಮಾರಿ ಮತ್ತು ನಿರುದ್ಯೋಗಿಗಳನ್ನು ಪ್ರತಿನಿಧಿಸಲು ಸಾಮಾಜಿಕ ಮಾಧ್ಯಮದಲ್ಲಿ ಸಿಜೆಪಿ ಹುಟ್ಟುಹಾಕಿದ್ದರು. ಶುರುವಲ್ಲಿದು ತಮಾಷೆಯಂತೆ ಕಂಡರೂ ಕೆಲವೇ ದಿನಗಳಲ್ಲಿ ಕೋಟ್ಯಂತರ ಹಿಂಬಾಲಕರನ್ನು ಗಳಿಸಿತು. ಆದರೆ 4 ದಿನಗಳಲ್ಲಿ ಅದರ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಹಾಗೂ ಇನ್‌ಸ್ಟಾಗ್ರಾಂ ಖಾತೆಯನ್ನೂ ಹ್ಯಾಕ್ ಮಾಡಲು ಯತ್ನಿಸಲಾಗಿದೆ ಎಂದು ದೀಪ್ಕೆ ಹೇಳಿದ್ದಾರೆ. ಇದರ ಹೊರತಾಗಿಯೂ ಅವರು ಹೊಸ ಎಕ್ಸ್ ಖಾತೆ ತೆರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ