
ನವದೆಹಲಿ (ಜುಲೈ 13, 2023): ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಸಾಮಾನ್ಯವಾಗಿದೆ. ಇದೇ ರೀತಿ, ಹರ್ಯಾಣದಲ್ಲೂ ಮಳೆಯಿಂಆಗಿ ಹಲವು ಕಡೆ ಪ್ರವಾಹ ಉಂಟಾಗಿದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಬೇಟಿ ನೀಡಿದ ಶಾಸಕರೊಬ್ಬರಿಗೆ ಮಹಿಳೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋ ಸೆರೆಯಾಗಿದ್ದು, ವೈರಲ್ ಆಗಿದೆ.
ಬುಧವಾರ ಕೈತಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಶಾಸಕರು ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಲು ಹೊರಟಿದ್ದ ಜನನಾಯಕ್ ಜನತಾ ಪಕ್ಷದ (ಜೆಜೆಪಿ) ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಸಾರ್ವಜನಿಕವಾಗಿ ಶಾಸಕರನ್ನು ನಿಂದಿಸುವಾಗ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡುವುದನ್ನು ಘಟನೆಯ ಉದ್ದೇಶಿತ ವಿಡಿಯೋ ಕ್ಲಿಪ್ಪಿಂಗ್‌ನಲ್ಲಿ ತೋರಿಸುತ್ತದೆ.
ಪ್ರಿಯಾಂಕ ಗಾಂಧಿಗಾಗಿ ಕರ್ನಾಟಕದಲ್ಲಿ ಸೇಫ್ ಕ್ಷೇತ್ರ ಹುಡುಕಾಡ್ತಿರೋ ಕಾಂಗ್ರೆಸ್ ಹೈಕಮಾಂಡ್!
"ನೀವು ಈಗ ಯಾಕೆ ಬಂದ್ರಿ" ಎಂದು ಎಂಎಲ್ಎಗೆ ಕಪಾಳಮೋಕ್ಷ ಮಾಡುವ ಮೊದಲು ಮಹಿಳೆ ಹೇಳುತ್ತಾರೆ. ಮಹಿಳೆಯ ಕೃತ್ಯವನ್ನು ಗ್ರಾಮಸ್ಥರು ಖಂಡಿಸಿದ ನಡುವೆ, ಶಾಸಕರ ಭದ್ರತಾ ಸಿಬ್ಬಂದಿ ತಕ್ಷಣವೇ ಶಾಸಕರ ರಕ್ಷಣೆಗೆ ಮುಂದಾಗಿದ್ದಾರೆ. ಇನ್ನು, ಈ ಘಟನೆಯ ಬಗ್ಗೆ ಮಾಧ್ಯಮದವರಿಗೆ ಶಾಸಕ ಈಶ್ವರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಇದು ಆಕ್ರಮಣದಂತಿತ್ತು. ಆದರೆ ನನ್ನ ಕಡೆಯಿಂದ ಇದು ಸೂಕ್ತವಲ್ಲ ಎಂದು ನಾನು ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ.
ಹಾಗೂ, ತಮ್ಮ ಕ್ಷೇತ್ರವಾದ ಗುಹ್ಲಾ-ಚೀಕಾದಲ್ಲಿ ಪ್ರವಾಹ ಪೀಡಿತ ಭಾಟಿಯಾ ಗ್ರಾಮವನ್ನು ಪರಿಶೀಲಿಸಲು ಹೋಗಿದ್ದರು. ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ಘಗ್ಗರ್ ನದಿಯಿಂದ ಈ ಪ್ರದೇಶ ಜಲಾವೃತಗೊಂಡಿದೆ ಎಂದು ಈಶ್ವರ್ ಸಿಂಗ್ ಹೇಳಿಕೊಂಡಿದ್ದಾರೆ. “ನೀರಿನ ಒತ್ತಡದಿಂದಾಗಿ ಒಡ್ಡು ಒಡೆದು ಗ್ರಾಮ ಮತ್ತು ಅದರ ಹೊಲಗಳಲ್ಲಿ ಪ್ರವಾಹಕ್ಕೆ ಕಾರಣವಾಯಿತು. ಇದರಲ್ಲಿ ಶಾಸಕರ ತಪ್ಪೇನು? ಎಂದೂ ಎಂಎಲ್‌ಎ ಸಮರ್ಥಿಸಿಕೊಂಡಿದ್ದಾರೆ. ಆದರೆ, ಒಡ್ಡು ನಿರ್ಮಾಣ ಸರಿಯಾಗಿ ಆಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ 50 ಸೀಟ್ ಟಾರ್ಗೆಟ್: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?
ಮಾಜಿ ರಾಜ್ಯಸಭಾ ಸಂಸದರೂ ಆಗಿದ್ದ 75 ವರ್ಷದ ಈಶ್ವರ್ ಸಿಂಗ್, ಈ ಹಿಂದೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮತ್ತೊಂದೆಡೆ, ಹರ್ಯಾಣದಲ್ಲಿ ನಿರಂತರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 10 ಜನರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಬುಧವಾರ ಹೇಳಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹ 4 ಲಕ್ಷ ಪರಿಹಾರವನ್ನು ಈಗಾಗಲೇ ಮುಖ್ಯಮಂತ್ರಿ ಘೋಷಿಸಿದ್ದಾರೆ.
ಇದನ್ನೂ ಓದಿ: ಈ ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿಕೊಂಡ ನಂತರ 18 ಜನರ ದೃಷ್ಟಿಯೇ ಹೋಯ್ತು!
“ಪ್ರವಾಹಕ್ಕೆ ಇಲ್ಲಿಯವರೆಗೆ ಸುಮಾರು 10 ಜನರು ಮೃತಪಟ್ಟಿದ್ದು, ಆದರೆ ಸಂಖ್ಯೆ ಹೆಚ್ಚಾಗಬಹುದು, ಇಬ್ಬರು ಕಾಣೆಯಾಗಿದ್ದಾರೆ, ಮತ್ತು ಅನೇಕ ಜಾನುವಾರುಗಳು ಸಾವಿಗೀಡಾಗಿವೆ.. ನಷ್ಟದ ಮೌಲ್ಯಮಾಪನ ಮಾಡಲಾಗುತ್ತದೆ. ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು’’ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಹರ್ಯಾಣ ಸಿಎಂ ಖಟ್ಟರ್ ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. "ಕಳೆದ 4 ದಿನಗಳಿಂದ, ಹರಿಯಾಣದಲ್ಲಿ ಮಾತ್ರವಲ್ಲದೆ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ನಿರಂತರ ಮಳೆಯು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಗಳಿಗೆ ಕಾರಣವಾಗಿದೆ" ಎಂದು ಹರಿಯಾಣ ಸಿಎಂ ಖಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ