
ನವದೆಹಲಿ (ಫೆ.9): ಪ್ರಧಾನಿ ನರೇಂದ್ರ ಮೋದಿಸ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಂದೊಂದು ತಪ್ಪುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ದೇಶದ ತಂತ್ರಜ್ಞಾನದ ದೇಶದ ವಿಜ್ಞಾನದ ವಿರೋಧಿಗಳು ಎಂದು ಟೀಕೆ ಮಾಡಿದರು. ಸಾಮಾನ್ಯವಾಗಿ ನಮ್ಮ ಪಕ್ಷದ ಮೇಲೆ ಆರೋಪಗಳನ್ನು ವಿರೋಧ ಪಕ್ಷಗಳು ಮಾಡುತ್ತಲೇ ಇರುತ್ತವೆ. ದೇಶದ ಯಾವುದೇ ಕಾರ್ಯಕ್ರಮಗಳಾದರೂ ಅಲ್ಲಿ ನೆಹರು ಅವರ ಹೆಸರು ಹೇಳಲೇಬೇಕು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತವೆ. ಅವರು ದೇಶದ ಮೊದಲ ಪ್ರಧಾನಿಗಳು, ಅವರ ಹೆಸರನ್ನು ನಾವು ಹೇಳುತ್ತೇವೆ. ಕೆಲವೊಮ್ಮೆ ನಮ್ಮಿಂದಲೂ ಅಚಾತುರ್ಯಗಳಾಗುತ್ತವೆ. ಅವರ ಹೆಸರು ಹೇಳದೇ ಬಿಟ್ಟಿರುತ್ತೇವೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ನಾವು ಈಗಾಗಲೇ ನೋಡಿದ್ದೇವೆ. ಅಗತ್ಯವಿದಲ್ಲಿ ಅವರ ಹೆಸರು ಹೇಳಿದ್ದೇವೆ. ತಪ್ಪಾದಲ್ಲಿ ಸರಿ ಪಡಿಸಿಕೊಂಡಿದ್ದೇವೆ. ವಿರೋಧ ಪಕ್ಷ ಅಧಿಕಾರದಲ್ಲಿದ್ದಾಗ ಕನಿಷ್ಠ 600 ಯೋಜನೆಗಳಿಗೆ ನೆಹರು ಹಾಗೂ ಗಾಂಧಿ ಹೆಸರು ನೀಡಿದೆ. ಪ್ರತಿ ಬಾರಿಯೂ ನೆಹರು ಹೆಸರು ಹೇಳಿಲ್ಲ ಎಂದಾದರೆ ಅವರು ಅದನ್ನು ದೊಡ್ಡ ತಪ್ಪು ಎನ್ನುವಂತೆ ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ.
ನಾನು ಎಲ್ಲರಿಗೂ ಒಂದು ಮಾತು ಹೇಳಲು ಬಯಸುತ್ತೇನೆ. ಈ ದೇಶ ಯಾವುದೇ ಕುಟುಂಬದ ರಿಯಲ್ ಎಸ್ಟೇಟ್ ಆಸ್ತಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೆಹರು ಹೆಸರು ಹೇಳಿಲ್ಲ ಎಂದಾಗ ತಲೆಕೆಡಿಸಿಕೊಳ್ಳುವ ಇವರಿಗೆ ನಾನು ಒಂದೇ ಪ್ರಶ್ನೆ ಕೇಳಲು ಬಯಸುತ್ತೇನೆ. ನೆಹರು ಹೆಸರು ಹೇಳಿಲ್ಲ ಎಂದಾದರೆ ತಲೆ ಕೆಡಿಸಿಕೊಳ್ಳುವ ನೀವು ನಿಮ್ಮ ಸರ್‌ನೇಮ್‌ನಲ್ಲಿ ಯಾಕೆ ಅವರ ಹೆಸರು ಇಟ್ಟುಕೊಂಡಿಲ್ಲ ಎಂದು ಪ್ರಶ್ನೆ ಮಾಡಿದರು.ಅವರ ತಲೆಮಾರಿನ ಯಾವುದೇ ವ್ಯಕ್ತಿ ನೆಹರೂ ಸರ್‌ನೇಮ್ ಅನ್ನು ಹೊಂದಲು ಏಕೆ ನಾಚಿಕೆ ಪಟ್ಟುಕೊಳ್ಳುತ್ತಾರೆ ಅನ್ನೋದೆ ನನಗೆ ಅರ್ಥವಾಗಿಲ್ಲ ಎಂದು ಹೇಳುವ ಮೂಲಕ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿಗೆ ಅಡಕೆ ಹಾರ ಹಾಕಿ ಅಭಿನಂದಿಸಿದ ಕಾಗೇರಿ
ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಿ ಹೆಚ್ಚಿನ ಎಲ್ಲಾ ಯೋಜನೆಗಳಿಗೆ ನೆಹರು, ಗಾಂಧಿ ಹೆಸರನ್ನು ಇಟ್ಟಿದೆ ಎನ್ನುವುದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. ನೆಹರು ಅಷ್ಟು ಗ್ರೇಟ್ ಎಂದಾದಲ್ಲಿ ಅವರು ಕುಟುಂಬದವರೇಕೆ ನೆಹರು ಸರ್ ನೇಮ್ ಇರಿಸಿಕೊಂಡಿಲ್ಲ ಎಂದು ಪ್ರಶ್ನೆ ಮಾಡಿದರು.
ಯುವಕರು ನೌಕರಿ ಕೇಳಿದ್ರೆ ಮೋದಿಯವರು ಪಕೋಡಾ ಮಾರಿ ಅಂತಾರೆ: ಸಿದ್ದರಾಮಯ್ಯ
"ಕೆಲವರಿಗೆ ಸರ್ಕಾರದ ಯೋಜನೆಗಳ ಹೆಸರುಗಳು ಮತ್ತು ಸಂಸ್ಕೃತ ಪದಗಳ ಹೆಸರಿನಲ್ಲಿ ಸಮಸ್ಯೆಗಳಿವೆ. ನಾನು ವರದಿಯಲ್ಲಿ 600 ಸರ್ಕಾರಿ ಯೋಜನೆಗಳು ಗಾಂಧಿ-ನೆಹರೂ ಕುಟುಂಬದ ಹೆಸರಿನಲ್ಲಿವೆ ಎಂದು ನಾನು ಓದಿದ್ದೇನೆ. ನೆಹರು ಅಂತಹ ಮಹಾನ್ ವ್ಯಕ್ತಿಯಾಗಿದ್ದಲ್ಲಿ, ಕುಟುಂಬದವರು ಅವರ ಸರ್‌ನೇಮ್ ಬಳಸಿಕೊಳ್ಳಲು ಏಕೆ ಹಿಂಜರಿಯುತ್ತಿದೆ ಎಂದು ರಾಜ್ಯಸಭೆಯಲ್ಲಿ ಮೋದಿ ಮಾತಿನ ಬಾಣ ಎಸೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ