
ನವದೆಹಲಿ (ಅ.28): ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿ ಬೋಗಿಯಲ್ಲೂ ಮೊಬೈಲ್ ಚಾರ್ಜಿಂಗ್ ಒದಗಿಸಿದ್ದ ಭಾರತೀಯ ರೈಲ್ವೆ ರೈಲ್ವೆಯು ಇದೀಗ (Indian Railway) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನುಮುಂದೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಎಲ್ಲ ಬೋಗಿಗಳಲ್ಲೂ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.
ಇತ್ತೀಚೆಗೆ ರಾತ್ರಿ ವೇಳೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ನೀಡಿತ್ತು. ಇದರಿಂದ ಮೊಬೈಲ್, ಲ್ಯಾಪ್‌ಟಾಪ್ ಚಾರ್ಜಿಂಗ್ ಮಾಡಿಕೊಳ್ಳಬಹುದಿತ್ತು. ಆದರೆ ರೈಲುಗಳಲ್ಲಿ ಬೆಂಕಿ ಅವಘಡ, ಪವರ್ ಬ್ಯಾಂಕ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆ ಪ್ರಯಾಣಿಕರ ಸುರಕ್ಷಾ ದೃಷ್ಟಿಯಿಂದ ಸಮಯ ನಿಗದಿಪಡಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಇತ್ತೀಚೆಗೆ ರೈಲಿನಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಅದರಲ್ಲೂ ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗೆ ಹಾಕಿ ಮಲಗುವುದರಿಂದ ಮೊಬೈಲ್ ಕಳವು, ಓವರ್ ಲೋಡಿಂಗ್‌ನಿಂದ ಬ್ಲಾಸ್ಟ್ ಆಗುತ್ತಿರುವ ಪ್ರಕರಣ ಹೆಚ್ಚಳದಿಂದ ಪ್ರಯಾಣಿಕರ ಸುರಕ್ಷತೆಗೆ ಅಪಾಯವಿದೆ ಹೀಗಾಗಿ ರಾತ್ರಿ 11 ರಿಂದ ಬೆಳಗಿನ ಜಾವ 5 ರವರೆಗೆ ಎಲ್ಲ ಬೋಗಿಗಳ ಚಾರ್ಜಿಂಗ್ ಪಾಯಿಂಟ್‌ಗಳನ್ನ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಅಲ್ಲದೆ ರೈಲ್ವೆಗೆ ಸಂಬಂಧಿಸಿದ ಎಲ್ಲ ಇಲಾಖಾ ನಿಯಮಗಳು, ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರೈಲ್ವೆ ಮಂಡಳಿ ಸೂಚಿಸಿದೆ.
ಇತ್ತೀಚೆಗೆ ಜಾರ್ಜಿಂಗ್ ಪಾಯಿಂಟ್‌ಗೆ ಹಾಕಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡಿತ್ತು ಈ ಹಿನ್ನೆಲೆ ಎಚ್ಚೆತ್ತುಗೊಂಡಿರುವ ರೈಲ್ವೆ ಮಂಡಳಿ ಇದೀಗ ಸಮಯ ನಿಗದಿ ಮಾಡಿ ಕಠಿಣ ಆದೇಶ ಹೊರಡಿಸಿದೆ. ಈ ಸಂಬಂಧ, ರೈಲ್ವೆ ಮಂಡಳಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿ ಶೋಭಿತ್ ಗುಪ್ತಾ ಅವರು ಎಲ್ಲಾ ವಲಯ ರೈಲ್ವೆಗಳ ಪ್ರಧಾನ ಮುಖ್ಯ ಯಾಂತ್ರಿಕ ಎಂಜಿನಿಯರ್‌ಗಳಿಗೆ (Principal Chief Mechanical Engineers) ಪತ್ರವೊಂದನ್ನು ಹೊರಡಿಸಿದ್ದಾರೆ.
ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದ ರೈಲ್ವೆ ಇಲಾಖೆ ಆದೇಶಗಳ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ. ನೂರಕ್ಕೆ ನೂರರಷ್ಟು ಜಾರಿಯಾಗಲೇಬೇಕು. ಸಂಬಂಧಪಟ್ಟ ರೈಲ್ವೆ ನೌಕರರಿಗೆ ತರಬೇತಿ ನೀಡುವ ಮೂಲಕ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಅರಿವು ಮೂಡಿಸಲು ಮಂಡಳಿಯು ಸೂಚನೆ ನೀಡಿದೆ. ಅಲ್ಲದೆ, ಇಲಾಖೆಯ ನಿಯಮ ಪಾಲಿಸಲಾಗುತ್ತಿದೆ ಎಂದು ಪರಿಶೀಲಿಸಲು ರೈಲುಗಳಲ್ಲಿ ದಿಢೀರ್ ಚೆಕಿಂಗ್ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಒಂದು ವೇಳೆ ರೈಲ್ವೆ ಮಂಡಳಿಯ ಆದೇಶಗಳನ್ನ ಉಲ್ಲಂಘಿಸಿದರೆ, ಕರ್ತವ್ಯಗಳಲ್ಲಿ ನಿರ್ಲಕ್ಷ್ಯ ವಹಿಸುವ ನೌಕರರು ಕಂಡುಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ