
ನವದೆಹಲಿ(ನ. 19) ಭಾರತದ ಮುಖ್ಯ ನ್ಯಾಯಮೂರ್ತಿ ಅವಹೇಳನಕಾರಿ ಟ್ವಿಟ್ ಮಾಡಿದ್ದ ಹಾಸ್ಯನಟ ಕುನಾಲ್ ಕಮ್ರಾ ಮೇಲೆ ಯಾವುದೆ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಡೇಟಾ ಸಂರಕ್ಷಣೆಗಾಗಿ ಸಂಸತ್ತಿನ ಜಂಟಿ ಸಮಿತಿ ಪ್ರಶ್ನೆ ಮಾಡಿದೆ. ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಮತ್ತು ಕಾಂಗ್ರೆಸ್ ಸಂಸದ ವಿವೇಕ್ ಟಂಖಾ ಈಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಹಾಸ್ಯನಟ ಕುನಾಲ್ ಕಮ್ರಾ ವಿಚಾರಣೆ ನಡೆಸಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ಷಮೆ ಕೇಳುವುದಿಲ್ಲ ಎಂದಿದ್ದ ನಟ ಮತ್ತೆ ಹಳೆ ರಾಗವನ್ನೇ ತೆಗೆದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವೂ ಕಾರ್ಪೋರೇಟ್ ಪ್ರೆಚಾರವೇ ಎಂದು ಮರು ಪ್ರಶ್ನೆ ಮಾಡಿದ್ದಾರೆ.
ನ್ಯಾಯಾಲಯವು ಆದೇಶಗಳನ್ನು ನೀಡದ ಹೊರತು ಪೋಸ್ಟ್ ಅನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ಟ್ವಿಟರ್ ಹೇಳಿದೆ ಎಂಬುದನ್ನು ಮೀನಾಕ್ಷಿ ಲೇಖಿ ತಿಳಿಸಿದ್ದಾರೆ.
ಅಷ್ಟಕ್ಕೂ ಅರ್ನಾಬ್ ಅರೆಸ್ಟ ಆಗಿದ್ದು ಯಾವ ಪ್ರಕರಣದಲ್ಲಿ?
ನಾವು 7 ದಿನಗಳಲ್ಲಿ ಉತ್ತರ ಕೇಳಿದ್ದೇವೆ. ಇವುಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ಯಾವುದೇ ಕಾನೂನುಗಳಿಲ್ಲದ ಕಾರಣ, ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಬೇಕಾಗಿದೆ ಎಂದು ಮೀನಾಕ್ಷಿ ಲೇಖಿ ಹೇಳಿದ್ದಾರೆ.
ನವೆಂಬರ್ 12 ರಂದು, ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ತಮ್ಮ ಸ್ಟ್ಯಾಂಡ್-ಅಪ್ ಕಾಮಿಡಿ ಕಲಾವಿದ ಕುನಾಲ್ ಕಮ್ರಾ ವಿರುದ್ಧ ವಿಚಾರಣೆ ನಡೆಸಬಹುದು ಎಂದು ಹೇಳಿದ್ದರು. ಅವರು ಮಾಡಿರುವ ಟ್ವೀಟ್ ಗಳಲ್ಲಿ ಹಾಸ್ಯಕ್ಕಿಂತ ಕೆಟ್ಟ ಅಭಿರುಚಿ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.
ಇದಾಗಿ ಒಂದು ದಿನದ ನಂತರ ಅಂದರೆ ನವೆಂಬರ್ 13 ರಂದು, ಕಮ್ರಾ ವಿರುದ್ಧ ವಿಚಾರಣೆ ಮಾಡಲು ಒಪ್ಪಿಗೆ ಸಿಕ್ಕಿತ್ತು.
ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಉನ್ನತ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದಾಗ ನವೆಂಬರ್ 11 ರಂದು ಕಮ್ರಾ ಟ್ವೀಟ್ ಮಾಡಲು ಆರಂಭಿಸಿದ್ದರು. ಇದು ನ್ಯಾಯಾಂಗ ನಿಂದನೆ ರೀತಿ ಇತ್ತು ಎಂದು ಕಾನೂನು ವಿದ್ಯಾರ್ಥಿ ಶ್ರೀರಂಗ್ ಕಾಟ್ನೇಶ್ವರ್ಕರ್ ಸೇರಿದಂತೆ ಐದು ಜನ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ