ಪಹಲ್ಗಾಮ್‌ನಲ್ಲಿ ಭದ್ರತಾ ಪಡೆ ಏಕೆ ಇರಲಿಲ್ಲ: ವಿರೋಧ ಪಕ್ಷದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ

Published : Apr 25, 2025, 03:50 PM ISTUpdated : Apr 25, 2025, 03:59 PM IST
ಪಹಲ್ಗಾಮ್‌ನಲ್ಲಿ ಭದ್ರತಾ ಪಡೆ ಏಕೆ ಇರಲಿಲ್ಲ: ವಿರೋಧ ಪಕ್ಷದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ

ಸಾರಾಂಶ

26 ಪ್ರವಾಸಿಗರ ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಆ ಪ್ರದೇಶದಲ್ಲಿ ಏಕೆ ಯೋಧರು ಇರಲಿಲ್ಲ, ಭದ್ರತಾ ಪಡೆ ಏಕೆ ನಿಯೋಜಿಸಿರಲಿಲ್ಲ ಎಂಬುದು ಅನೇಕರ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಕೇಂದ್ರ ಸರ್ಕಾರ ಏನು ಹೇಳಿದೆ ಎಂಬ ಮಾಹಿತಿ ಇಲ್ಲಿದೆ. 

ನವದೆಹಲಿ: 26 ಪ್ರವಾಸಿಗರ ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಆ ಪ್ರದೇಶದಲ್ಲಿ ಏಕೆ ಯೋಧರು ಇರಲಿಲ್ಲ, ಭದ್ರತಾ ಪಡೆ ಏಕೆ ನಿಯೋಜಿಸಿರಲಿಲ್ಲ ಎಂಬುದು ಅನೇಕರ ಪ್ರಶ್ನೆಯಾಗಿತ್ತು. ವಿರೋಧ ಪಕ್ಷವೂ ಕೂಡ ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲೂ ಕೂಡ ಇದೇ ಪ್ರಶ್ನೆಯನ್ನು ಸರ್ಕಾರಕ್ಕೆ ಕೇಳಿದ್ದವು. ಭದ್ರತಾ ವೈಫಲ್ಯ ಏಕೆ ಆಯ್ತು, ಅಂತಹ ಪ್ರದೇಶದಲ್ಲಿ ಸೇನೆಯನ್ನು ಏಕೆ ನಿಯೋಜಿಸಲಿಲ್ಲ ಎಂದು ಪ್ರಶ್ನೆ ಮಾಡಿದ್ದವು ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಕೇಂದ್ರ ಸರ್ಕಾರ ಏನು ಹೇಳಿದೆ ಎಂಬ ಮಾಹಿತಿ ಇಲ್ಲಿದೆ. 

ಗುರುವಾರ ಸಂಜೆ ನಡೆದ ಸರ್ವಪಕ್ಷ ಸಭೆಯಲ್ಲಿ 26 ನಾಗರಿಕರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಬಹಳ ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳಿದವು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕರೆದಿದ್ದ ಈ ಸಭೆಯಲ್ಲಿ ಸೇರಿದ ಸರ್ವ ಪಕ್ಷಗಳ ನಾಯಕರು ಬೈಸರನ್‌ ಪ್ರದೇಶದಲ್ಲಿ ಭದ್ರತಾ ಪಡೆಯ ಅನುಪಸ್ಥಿತಿಗೆ ಕಾರಣ ಏನು ಎಂದು ಕೇಳಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲಿಗೆ ಈ ಪ್ರಶ್ನೆ ಕೇಳಿದ್ದು, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಈ ಪ್ರಶ್ನೆಯನ್ನೇ ಪ್ರತಿಧ್ವನಿಸಿದರು.

ಇದನ್ನೂ ಓದಿ: ಪಹಲ್ಗಾಮ್ ದಾಳಿ: ಪಾಪಿ ಪಾಕಿಸ್ತಾನಕ್ಕೆ ತಿರುಗೇಟು ಕೊಡಲು ವಾಯುಸೇನೆ ಸಜ್ಜು!

ಇದಕ್ಕೆ ಉತ್ತರಿಸುತ್ತಾ ಕೇಂದ್ರ ಸರ್ಕಾರ, ಜೂನ್‌ನಲ್ಲಿ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗೆ ಮುಂಚಿತವಾಗಿ ಬೈಸರನ್ ಪ್ರದೇಶವನ್ನು ವಾಡಿಕೆಯಂತೆ ಭದ್ರಪಡಿಸಲಾಗುತ್ತದೆ. ಆಗ ಆ ಮಾರ್ಗವನ್ನು ಅಧಿಕೃತವಾಗಿ ತೆರೆಯಲಾಗುತ್ತದೆ ಮತ್ತು ಅಮರನಾಥ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಈ ಬೈಸರನ್‌ ಪ್ರದೇಶವಿದ್ದು, ಇಲ್ಲಿ ವಿಶ್ರಾಂತಿ ಪಡೆಯುವ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳನ್ನು ಆ ಸಂದರ್ಭದಲ್ಲಿ ಅಲ್ಲಿ ನಿಯೋಜಿಸಲಾಗುತ್ತದೆ.

ಆದರೆ  ಜಮ್ಮುಕಾಶ್ಮೀರದ ಸ್ಥಳೀಯ ಪ್ರವಾಸ ನಿರ್ವಾಹಕರು ಏಪ್ರಿಲ್ 20 ರಿಂದಲೇ ಈ ಪ್ರದೇಶಕ್ಕೆ ಬೇರೆಡೆಯಿಂದ ಪ್ರವಾಸಿಗರನ್ನು ಕರೆದೊಯ್ಯಲು ಪ್ರಾರಂಭಿಸಿದರು. ಅಂದರೆ ಅಮರನಾಥ ಯಾತ್ರಾ ಋತುವಿಗೆ ಭದ್ರತೆಯನ್ನು ಸಜ್ಜುಗೊಳಿಸುವ ಮೊದಲೇ ಪ್ರವಾಸಿ ಏಜೆನ್ಸಿಗಳು ಇಲ್ಲಿಗೆ ಪ್ರವಾಸಿಗರನ್ನು ಕರೆದೊಯ್ಯಲು ಆರಂಭಿಸಿದರು. ಆದರೆ ಈ ಬಗ್ಗೆ  ಪ್ರವಾಸಿ ಏಜೆನ್ಸಿಗಳು ಸ್ಥಳೀಯ ಆಡಳಿತಕ್ಕೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಹೀಗಾಗಿ ಯಾವುದೇ  ಭದ್ರತಾ ಪಡೆಗಳನ್ನು ಅಲ್ಲಿ ನಿಯೋಜಿಸಿರಲಾಗಿಲ್ಲ ಎಂದು ಸರ್ಕಾರ ಮಾಹಿತಿ ನೀಡಿದೆ. 

ಹಾಗೆಯೇ ಇಂಡಸ್ ವಾಟರ್‌ ಟ್ರೀಟಿ, ಸಿಂಧೂ ನದಿ ನೀರು ಹಂಚಿಕೆಯ ಬಗ್ಗೆಯೂ ಸರ್ವ ಪಕ್ಷದ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಪ್ರಶ್ನೆ ಮಾಡಿದ್ದಾರೆ. ಭಾರತದಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯದ ಕೊರತೆಯಿದ್ದರೆ, ಕೇಂದ್ರವು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿದ್ದಾದರು ಏಕೆ  ಎಂದು ಪ್ರತಿಪಕ್ಷಗಳು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ಅಧಿಕಾರಿಗಳು, ಈ ಕ್ರಮವು ತಕ್ಷಣದ ಫಲಿತಾಂಶಗಳ ಬಗ್ಗೆ ಅಲ್ಲ, ಬದಲಾಗಿ ಸಾಂಕೇತಿಕ ಮತ್ತು ಪಾಕಿಸ್ತಾನಕ್ಕೆ ಪಾಠ ಕಲಿಸಲು ಒಂದು ಕಾರ್ಯತಂತ್ರದ ಸೂಚನೆಯಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಕಠಿಣ ಕ್ರಮ ಕೈಗೊಳ್ಳುವ ಸರ್ಕಾರದ ಉದ್ದೇಶವನ್ನು ತೋರಿಸಲು ಈ ಒಪ್ಪಂದವನ್ನು ಸ್ಥಗಿತಗೊಳಿಸಲಾಗಿದೆ. ಬಲವಾದ ಸಂದೇಶವನ್ನು ನೀಡಲು ಇದನ್ನು ಮಾಡಲಾಗಿದೆ. ಈ ನಿರ್ಧಾರವು ಭವಿಷ್ಯದಲ್ಲಿ ಸರ್ಕಾರದ ನಿಲುವು ಏನೆಂಬುದನ್ನು ಸಹ ಹೇಳುತ್ತದೆ ಎಂದು ಸರ್ಕಾರ ಹೇಳಿದೆ. 

ಇದನ್ನೂ ಓದಿ: ಒಂದೇ ನೆಲದಲ್ಲಿ ಹುಟ್ಟಿದ ಇಬ್ಬರು ಅದಿಲ್‌ಗಳ ಕತೆ: ಒಬ್ಬ ಟೆರರಿಸ್ಟ್, ಮತ್ತೊಬ್ಬ?

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಸ್ತುತ ದೇಶದ ಭದ್ರತಾ ಸನ್ನಿವೇಶದ ಅವಲೋಕನದೊಂದಿಗೆ ಈ ಸಭೆಯನ್ನು ಪ್ರಾರಂಭಿಸಿದರು. ಗುಪ್ತಚರ ಬ್ಯೂರೋದ ನಿರ್ದೇಶಕ ತಪನ್ ದೇಕಾ ಅವರು ಪಹಲ್ಗಾಮ್ ದಾಳಿಯ ನಂತರದ ಕ್ರಮಗಳು, ಗುಪ್ತಚರ ಮಾಹಿತಿಗಳು ಮತ್ತು ಘಟನೆಯ ನಂತರ ತೆಗೆದುಕೊಂಡ ಕ್ರಮಗಳನ್ನು ಒಳಗೊಂಡ 20 ನಿಮಿಷಗಳ ಪ್ರಸ್ತುತಿಯನ್ನು ಸರ್ವಪಕ್ಷ ಸಭೆಯಲ್ಲಿ ನೀಡಿದರು ಎಂದು ವರದಿಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!