
ನವದೆಹಲಿ(ಜೂ.11): ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು(ಮಂಗಳವಾರ) ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ವಿಚಾರವನ್ನು ಸ್ವತಃ ಖಚಿತಪಡಿಸಿರುವ ಕುಮಾರಸ್ವಾಮಿ ಅವರು ತಮಗೆ ಪ್ರಮುಖ ಖಾತೆ ನೀಡಿರುವುದಕ್ಕೆ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ವನ್ನೂ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಯುವಕರ ಉದ್ಯೋಗ, ದೇಶದ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಮುಂದಿನ 15 ದಿನದಲ್ಲಿ ಬೃಹತ್ ಕೈಗಾರಿಕಾ ಇಲಾಖೆ ಕುರಿತು ವಿಷನ್ ಡಾಕ್ಯುಮೆಂಟ್ ಸಿದ್ದಪಡಿಸಲಿದ್ದೇನೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನ ಪಡೆದು ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ ಎಂದರು.
ರಾಜ್ಯ ನಾಯಕರಿಗೆ ಬಂಪರ್, ಕುಮಾರಸ್ವಾಮಿಗೆ ಉಕ್ಕು-ಬೃಹತ್ ಕೈಗಾರಿಕೆ, ಇಲ್ಲಿದೆ ನಾಲ್ವರ ಖಾತೆ ಲಿಸ್ಟ್!
ಉತ್ಪಾದನಾ ಕ್ಷೇತ್ರದಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಇಲಾಖೆಯಲ್ಲೂ ಹೊಸ ಬದಲಾವಣೆ ತರಲು ಪ್ರಯತ್ನ ಮಾಡು ತ್ತೇನೆ. ಇದಕ್ಕಾಗಿ ದೇಶಾದ್ಯಂತ ಸುತ್ತಾ ಡಲು ನಿರ್ಧರಿಸಿದ್ದೇನೆ. ಉದ್ಯಮಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
ನನ್ನ ಮುಂದೆ ದೊಡ್ಡ ಸವಾಲಿದೆ. ಕರ್ನಾಟಕದಲ್ಲೂ ವಿಎಸ್‌ಎಲ್‌ವಿ ಸೇರಿ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ, ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನೂ ಗಮನಿಸಿ ಪ್ರಮುಖ ಖಾತೆಯನ್ನು ಮೋದಿ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ರೂಟ್ ಮ್ಯಾಪ್ ಸಿದ್ದಮಾಡಿ ಕೆಲಸ ಮಾಡಿಸುತ್ತೇನೆ. ನನ್ನದೇ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ