
ಮುಂಬೈ (ನ. 13) ವಿವಾದಗಳಿಂದಲೇ ಹೆಸರು ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಇದೀಗ ಬಿಜೆಪಿ ಮೇಲೆ ವಾಗ್ದಾಳಿ ಮಾಡಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ ಮೇಲೆ ಬಿಜೆಪಿ ಮಾಡಿರುವ ಭೂಹಗರಣದ ಆರೋಪಕ್ಕೆ ತಿರುಗೇಟು ನೀಡುವ ಭರದಲ್ಲಿ ಮಾತನಾಡಿದ್ದಾರೆ. ನಮಗೆ ಗೊತ್ತಿದೆ, ಮಹಾರಾಷ್ಟ್ರದಲ್ಲಿ ಇನ್ನು 25 ವರ್ಷ ಬಿಜೆಪಿ ಅಧಿಕಾರದಿಂದ ಹೊರಗೆ ಉಳಿಯಲಿದೆ ಎಂದು ರಾವತ್ ಹೇಳಿದ್ದಾರೆ.
ಕ್ಷಿಪ್ರ ಬೆಳವಣಿಗೆ; ಸಿಎಂ ಬಿಎಸ್‌ವೈ, ಮಾಜಿ ಸಿಎಂ ಎಚ್‌ಡಿಕೆ ಭೇಟಿ
ಬಿಜೆಪಿ ವ್ಯಾಪಾರಿಗಳ, ದಲ್ಲಾಳಿಗಳ ಪಕ್ಷವಾಗಿದೆ. ಆಧಾರವಿಲ್ಲದೆ ವ್ಯಾಪಾರಿಗಳ ಪಕ್ಷದ ನಾಯಕರು ಆರೋಪ ಮಾಡುತ್ತಿರುವುದು ನಾಚಿಕೆಗೇಡು ಎಂದಿದ್ದಾರೆ.
ಉದ್ಧವ್ ಠಾಕ್ರೆ ಕುಟುಂಬದ ಮೇಲೆ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಎರಡೂ ಕುಟುಂಬಗಳ ನಡುವೆ ಕಾನೂನು ಬದ್ಧವಾಗಿಯೇ ವ್ಯವಹಾರ ನಡೆದಿದೆ. ಇದನ್ನು ಮೊದಲು ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ