
ಪಣಜಿ[ಡಿ.30]: ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇನ್ನಿತರ ಭಾಗಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಸಂಬಂಧ ಕರ್ನಾಟಕ ಮತ್ತು ಗೋವಾ ಸರ್ಕಾರಗಳ ನಡುವೆ ಅಸಮಾಧಾನ ಏರ್ಪಟ್ಟಿದೆ.
ಹೀಗಿರುವಾಗಲೇ ಮಹದಾಯಿ ನದಿಗೆ ಅಡ್ಡಲಾಗಿ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. ಗೋವಾಕ್ಕೆ ಭೇಟಿ ನೀಡಿರುವ ಕೇಂದ್ರ ಇಂಧನ ಖಾತೆ ಸಚಿವ ಆರ್.ಕೆ.ಸಿಂಗ್. ಜಲವಿದ್ಯುತ್ ಉತ್ಪಾದನಾ ಘಟಕ ಆರಂಭಿಸಲು ಗೋವಾ ಸರ್ಕಾರ ಸೂಕ್ತ ಜಾಗ ತೋರಿಸಿದಲ್ಲಿ ಘಟಕ ಆರಂಭಿಸಲು ಕೇಂದ್ರ ಸಿದ್ಧ ಎಂದಿದ್ದಾರೆ.
ಗೋವಾ ತನ್ನ ರಾಜ್ಯದಲ್ಲಿ ಯಾವುದೇ ವಿದ್ಯುತ್ ಉತ್ಪಾದನಾ ಘಟಕ ಹೊಂದಿಲ್ಲ. ತನ್ನ ಬೇಡಿಕೆಗೆ ಅದು ಪೂರ್ಣವಾಗಿ ಹೊರ ರಾಜ್ಯಗಳನ್ನು ಅವಲಂಬಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ