
ಕೇಂದ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಡುವಣ ವಾಕ್ಸಮರಕ್ಕೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಡಿ.4ರ ಸೋಮವಾರ ಚಾಲನೆ ಸಿಗಲಿದೆ. ಡಿ.4ರಿಂದ ಡಿ.22ರವರೆಗೆ ಅಧಿವೇಶನ ನಡೆಯಲಿದ್ದು, 15 ದಿನದ ಕಲಾಪ ಇರಲಿದೆ. ಈ ಅವಧಿಯಲ್ಲಿ 19 ಮಸೂದೆಗಳು ಹಾಗೂ 2 ಹಣಕಾಸು ವಿಷಯಗಳನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.
ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶನಿವಾರ ವಿಪಕ್ಷಗಳ ನಾಯಕರ ಸಭೆ ಕರೆದಿತ್ತು. ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕರೆದಿದ್ದ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ ಸಿಂಗ್, ಪೀಯೂಶ್ ಗೋಯಲ್, ಅನೇಕ ವಿಪಕ್ಷ ನಾಯಕರು ಪಾಲ್ಗೊಂಡಿದ್ದರು.
ಬೆಳಗಾವಿ ಅಧಿವೇಶನ: ಕಲಾಪದಲ್ಲಿ ಸರ್ಕಾರ ಕಟ್ಟಿಹಾಕಲು ನಾನೇ ಹಗ್ಗ ಕಳಿಸಿಕೊಡುವೆ: ಡಿಕೆಶಿ
ಈ ವೇಳೆ ವಿಪಕ್ಷ ನಾಯಕರು ಮಾತನಾಡಿ, ಬೆಲೆ ಏರಿಕೆ, ಮಣಿಪುರ ಸಮಸ್ಯೆ, ಕೇಂದ್ರವು ಹಳೆಯ 3 ಅಪರಾಧ ಮಸೂದೆಗಳನ್ನು ರದ್ದುಗೊಳಿಸಿ ಅದರ ಬದಲಿಗೆ 3 ಹೊಸ ಮಸೂದೆಗಳನ್ನು ಮಂಡಿಸಲು ಮುಂದಾಗಿರುವುದು ಹಾಗೂ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ಲಂಚ ಹಗರಣದ ಕಾರಣ ವಜಾ ಮಾಡಲು ಸಂಸದೀಯ ಸಮಿತಿ ಶಿಫಾರಸು ಮಾಡಿರುವುದು- ಈ ಎಲ್ಲ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ‘ವಿಪಕ್ಷಗಳ ಆಗ್ರಹವನ್ನು ಸರ್ಕಾರ ಸಕಾರಾತ್ಮಕವಾಗಿ ತೆಗೆದುಕೊಂಡಿದೆ. ಎಲ್ಲ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ವಾತಾರವಣ ನಿರ್ಮಿಸಿಕೊಡುವ ಹೊಣೆ ವಿಪಕ್ಷದ್ದು’ ಎಂದರು.
ಚೀನಾ ವೈರಸ್ ಭೀತಿ ನಡುವೆ ಅಧಿವೇಶನಕ್ಕೆ ಬೆಳಗಾವಿ ಸಜ್ಜು..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ