Good News: 25 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ 

By Mahmad Rafik  |  First Published Jun 25, 2024, 7:36 PM IST

ಪ್ರಸ್ತಾವನೆಗೆ ಒಪ್ಪಿಗೆ ಸಿಗುತ್ತಿದ್ದಂತೆ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯಡಿ ಎಲ್ಲಾ ಸಮುದಾಯದ 25 ರಿಂದ 50 ವರ್ಷದೊಳಗಿನ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ.


ರಾಂಚಿ: 25 ರಿಂದ 50 ವರ್ಷದೊಳಗಿನ ಮಹಿಳೆಯರ ಖಾತೆಗಳಿಗೆ 1 ಸಾವಿರ ರೂಪಾಯಿ ಹಾಕಲು ಜಾರ್ಖಂಡ್ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ತನ್ನ ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್‌ನ್ಯೂಸ್ ನೀಡಿದೆ. ಈ ಹಣದಿಂದ ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮವಾಗಲಿದ್ದು, ಹಣಕಾಸಿನ ವಿಚಾರದಲ್ಲಿ ಕೊಂಚ ಸ್ವಾವಲಂಬಿಯಾಗಲಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಯೋಜನೆಯಿಂದ ಸುಮಾರು 40 ಲಕ್ಷ ಮಹಿಳೆಯರು ಲಾಭ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ. 

ಜಾರ್ಖಂಡ್ ಚಂಪೈ ಸೋರೆನ್ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆರ್ಥಿಕ ವಿಷಯದಲ್ಲಿ ಮಹಿಳೆಯರನ್ನು ಸ್ವಾವಲಂಭಿಗಳನ್ನಾಗಿ ಮಾಡಲು  ಮಾಸಿಕ 1 ಸಾವಿರ ರೂಪಾಯಿ ಅವರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ರಾಜ್ಯದ ಸುಮಾರು 35 ರಿಂದ 40 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ಜಾರ್ಖಂಡ್ ಸರ್ಕಾರ ಹೇಳಿಕೆ ನೀಡಿದೆ. ಈ ಯೋಜನೆಗೆ ಮುಖ್ಯಮಂತ್ರಿ ಸೋದರಿ, ಮಗಳು ಸ್ವಾವಲಂಬನೆ ಎಂದು ಹೆಸರಿಡಲಾಗಿದೆ. ಶೀಘ್ರದಲ್ಲಿಯೇ ಈ ಯೋಜನೆ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. 

Tap to resize

Latest Videos

ಗ್ಯಾರಂಟಿ ಯೋಜನೆಯಿಂದ ಬಡ ಕುಟುಂಬಗಳು ಸ್ವಾವಲಂಬಿ ಜೀವನ: ಲಕ್ಷ್ಮೀ ಹೆಬ್ಬಾಳ್ಕರ್

ಕ್ಯಾಬಿನೆಟ್‌ಗೆ ಪ್ರಸ್ತಾವನೆ ಸಲ್ಲಿಕೆ

ಈ ಯೋಜನೆಯ ಪ್ರಸ್ತಾವನೆಯನ್ನು ಆರ್ಥಿಕ ಸಚಿವಾಲಯ ಹಾಗೂ ಸಂಪುಟದ ಮುಂದೆ ಇರಿಸಲಾಗಿದೆ. ಪ್ರಸ್ತಾವನೆಗೆ ಒಪ್ಪಿಗೆ ಸಿಗುತ್ತಿದ್ದಂತೆ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯಡಿ ಎಲ್ಲಾ ಸಮುದಾಯದ 25 ರಿಂದ 50 ವರ್ಷದೊಳಗಿನ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಮಹಿಳೆಯರ ಜೀವನದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಪ್ರತಿ ತಿಂಗಳು 1 ಸಾವಿರ ರೂಪಾಯಿ ಸಿಕ್ಕರೆ ತಮ್ಮ ವೈಯಕ್ತಿಕ ಮತ್ತು ಕುಟುಂಬದ ಸಣ್ಣ ಖರ್ಚುಗಳಿಗೆ ಹಣ ಸಹಾಯವಾಗುತ್ತೆ ಎಂದು ರಾಜ್ಯ ಸರ್ಕಾರ ಹೇಳಿದೆ. 

ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿರು ಜಾರ್ಖಂಡ್ ಸಿಎಂ ಸೋರೆನ್, ಮುಖ್ಯಮಂತ್ರಿ ಸೋದರಿ, ಮಗಳು ಸ್ವಾವಲಂಬನೆ ಯೋಜನೆಯ ಕೆಲಸಗಳು ತ್ವರಿತವಾಗಿ ನಡೆಯಬೇಕು ಎಂದು ನಿರ್ದೇಶನ ನೀಡಿದ್ದಾರೆ. ಯಾವುದೇ ಅಡೆತಡೆಗಳಿಲ್ಲದೇ ಅಂದ್ರೆ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಎಲ್ಲಾ ಕೆಲಸಗಳು ನಡೆಯಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಅಂದುಕೊಂಡ ಕಾರ್ಯ ಯಶಸ್ಸು, ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ

ಕರ್ನಾಟಕದಲ್ಲಿ ಗೃಹಲಕ್ಷ್ಮೀ ಯೋಜನೆ 

ಕರ್ನಾಕಟದಲ್ಲಿಯ ಕಾಂಗ್ರೆಸ್ ಸರ್ಕಾರ ಮಹಿಳೆಯರ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಹಣ ಹಾಕುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡಿರುವ ಮನೆ ಯಜಮಾನಿಗೆ 2 ಸಾವಿರ ರೂಪಾಯಿ ಸಿಗುತ್ತಿದೆ. ಮಧ್ಯಪ್ರದೇಶದಲ್ಲಿ ಲಾಡ್ಲಿ ಹೆಸರಿನಲ್ಲಿ ಮಹಿಳೆಯರ ಖಾತೆಗೆ 1,250 ರೂಪಾಯಿ ಜಮೆ ಮಾಡಲಾಗುತ್ತಿದೆ. ತೆಲಂಗಾಣದಲ್ಲಿಯೂ ಇದೇ ರೀತಿಯ ಯೋಜನೆ ಜಾರಿಯಲ್ಲಿದೆ.

click me!