
ನವದೆಹಲಿ (ಜೂ.9): ನರೇಂದ್ರ ಮೋದಿ ವಿರುದ್ಧ ಈ ಸಲ ಜನರು ಚುನಾವಣೆಯಲ್ಲಿ ಮತ ಹಾಕಿದರು. ಆದರೂ ಅವರು ಜನಾದೇಶ ಧಿಕ್ಕರಿಸಿ ಮತ್ತೆ ಪ್ರಧಾನಿ ಆಗಲು ಹೊರಟಿದ್ದಾರೆ.
ಹೀಗಾಗಿ ಅವರ ಭಾನುವಾರದ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಟಿಎಂಸಿ ಬಹಿಷ್ಕರಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಅಲ್ಲದೆ, ಬಿಜೆಪಿಗೆ ಏಕಾಂಗಿಯಾಗಿ ಬಹುಮತವಿಲ್ಲ. ಹೀಗಾಗಿ ಮೋದಿ ಸರ್ಕಾರ ಎಷ್ಟು ದಿನ ಉಳಿಯುತ್ತೋ ಗೊತ್ತಿಲ್ಲ. ಒಂದೇ ದಿನಕ್ಕೆ ಸರ್ಕಾರ ಬಿದ್ದ ಉದಾಹರಣೆ ಇವೆ. ಇಂಡಿಯಾ ಕೂಟ ಈಗ ಸರ್ಕಾರ ರಚನೆಗೆ ಯತ್ನ ಮಾಡದೇ ಇರಬಹುದು. ಆದರೆ ಮುಂದೆ ಮಾಡಲೇಬಾರದು ಎಂದೇನಿಲ್ಲ ಎಂದೂ ಮಮತಾ ಹೇಳಿದ್ದಾರೆ.
ಪ್ರಧಾನಿಯಾಗಿ ಮೋದಿ ಪುನರಾಯ್ಕೆ; ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಶುಭಾಶಯ
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಭಾಗ್ಯ ಪಡೆದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಕೇಂದ್ರ ಸರ್ಕಾರ ಭಾನುವಾರ ಅಸ್ತಿತ್ವಕ್ಕೆ ಬರಲಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ರಾತ್ರಿ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರೊಂದಿಗೆ ನೂತನ ಸರ್ಕಾರ ರಚನೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ